
Protest organized by the Kannada Yuva Jagruthi Vedike opposing the release of Cauvery water to Tamil Nadu.

ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ಕನ್ನಡ ಯುವ ಜಾಗೃತಿ ವೇದಿಕೆ ವತಿಯಿಂದ ಪ್ರತಿಭಟನೆ


ಗಂಗಾವತಿ: ತಮಿಳುನಾಡಿಗೆ ಯಾವುದೇ ಕಾರಣಕ್ಕೂ ಕಾವೇರಿ ನೀರು ಹರಿಸಬಾರದು ಎಂದು ಒತ್ತಾಯಿಸಿ ಕನ್ನಡ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ಅವರ ಆದೇಶದ ಮೇರೆಗೆ ಇಂದು ಗಂಗಾವತಿ ನಗರದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಯಿತು.
ಗಂಗಾವತಿ ಬಂದ್‌ಗೆ ಕನ್ನಡ ಯುವ ಜಾಗೃತಿ ವೇದಿಕೆಯಿಂದ ಸಂಪೂರ್ಣ ಬೆಂಬಲ ಸೂಚಿಸಿ ಸ್ವಯಂ ಪ್ರೇರಿತವಾಗಿ ಅಂಗಡಿ ಮುಂಗಟ್ಟುಗಳು ಬಂದ್ ಮಾಡುವಂತೆ ಬೈಕ್ ರ್ಯಾಲಿ ಮೂಲಕ ಪ್ರಮುಖ ರಾಜಾ ಬೀದಿಗಳಲ್ಲಿ ಸಂಚರಿಸಿ ಬಸ್ ನಿಲ್ದಾಣದ ಮುಂಭಾಗದ ಕೃಷ್ಣದೇವರಾಯ ವೃತ್ತಕ್ಕೆ ತಲುಪಿ ಶಾಂತಿಯುತವಾಗಿ ಪ್ರತಿಭಟನೆ ನಡೆಸಿ ತಹಸಿಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು
ಈ ಪ್ರತಿಭಟನೆಯಲ್ಲಿ ಕೆಲ ಕನ್ನಡ ಪರ ಸಂಘಟನೆಗಳೂ ಕೂಡ ಸಾತ್ ನೀಡಿ ಬೆಂಬಲ ವ್ಯಕ್ತಪಡಿಸಿದ್ದಾರೆ.
ಕನ್ನಡ ಯುವ ಜಾಗೃತಿ ವೇದಿಕೆಯ ರಾಜ್ಯಾಧ್ಯಕ್ಷ ಎಂ.ಡಿ. ಅಲಿ ಮಾತನಾಡಿ, ಕಾವೇರಿ ನೀರಿನ ವಿಚಾರದಲ್ಲಿ ರಾಜ್ಯ ಸರ್ಕಾರ ನೀರು ಬಿಡುವುದನ್ನು ನಿಲ್ಲಿಸಬೇಕು ಈ ಪ್ರತಿಭಟನೆಯಲ್ಲಿ ನಮ್ಮ ರಕ್ತ ಚೆಲ್ಲಿದರು ನಾವು ಕಾವೇರಿ ನೀರನ್ನು ಹರಿಸಲು ಅವಕಾಶ ನೀಡುವುದಿಲ್ಲ ಎಂದು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ಈ ಪ್ರತಿಭಟನೆಯಲ್ಲಿ ಜನಹಿತ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ರಮೇಶ್ ಕೋಟಿ, ಅಖಿಲ ಕರ್ನಾಟಕ ಡಾ.ರಾಜಕುಮಾರ್ ಅಭಿಮಾನಿ ಸಂಘದ ಜಿಲ್ಲಾಧ್ಯಕ್ಷ, ಖಾದರ್ ಭಾಷಾ, ಸೇರಿದಂತೆ ಹಲವು ಕನ್ನಡಪರ ಸಂಘಟನೆಗಳ ಮುಖಂಡರು ಬೈಕ್ ರ್ಯಾಲಿಯಲ್ಲಿ ಪಾಲ್ಗೊಂಡು ಸಂಪೂರ್ಣ ಬೆಂಬಲ ಸೂಚಿಸಿ ಪ್ರತಿಭಟನೆಯನ್ನು ಯಶಸ್ವಿಗೊಳಿಸಿದ್ದಾರೆ.
ಈ ಪ್ರತಿಭಟನೆಯಲ್ಲಿ ಕನ್ನಡ ಯುವ ಜಾಗೃತಿ ವೇದಿಕೆಯ ರಾಜ್ಯಾಧ್ಯಕ್ಷ ಎಂ.ಡಿ. ಅಲಿ, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ರಾಧಾ ಉಮೇಶ್, ಶಕುಂತಲಾ ಕಲ್ಲೂರ್, ರಾಜ್ಯ ಕಾರ್ಯದರ್ಶಿ ಮೊಹಮ್ಮದ್ ದಳಪತಿ, ರಾಜ್ಯ ಸದಸ್ಯ ಎಸ್.ಕೆ. ಭಾಷಾ, ಜಿಲ್ಲಾ ಗೌರವಾಧ್ಯಕ್ಷ ಎಂ.ಡಿ. ಸಾಧಿಕ್, ರಾಜ್ಯ ಸದಸ್ಯ ವಿರೂಪಾಕ್ಷಪ್ಪ ಹಿರೇಮಠ್ ದಾಸನಾಳ, ನಿಂಗಪ್ಪ ನಾಯಕ ರಾಂಪುರ್, ಹುಸೇನ್ ಸಾಬ್, ಯುನೂಸ್,ಗಂಗಾವತಿ ತಾಲೂಕು ಮಹಿಳಾ ಘಟಕದ ಕಾರ್ಯಕಾರಿಣಿ ಸದಸ್ಯೆ ಬೊಡಕೆ ದೀಪಿಕಾ,ರಾಜೇಶ್ವರಿ,
ಅರುಣಮ್ಮ,ಗಾಯತ್ರಿ ಕಂಪ್ಲಿ,ರತ್ನಮ್ಮ,ಶೈಲಜಾ ಚಂದರಗಿ,ವಿಜಯ,ಸೌಮ್ಯ ಶ್ರೀ,ಸೇರಿದಂತೆ ಇನ್ನೂ ಅನೇಕ ಮುಖಂಡರು, ಕಾರ್ಯಕರ್ತರು ಹಾಗೂ ಪದಾಧಿಕಾರಿಗಳು ಈ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
