80th Independence Day celebration: Guarantee schemes are a model for the country: Minister Shivraj Tangadgi
80ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ:ಗ್ಯಾರಂಟಿ ಯೋಜನೆಗಳು ದೇಶಕ್ಕೆ ಮಾದರಿ: ಸಚಿವ ಶಿವರಾಜ ತಂಗಡಗಿ
ಕೊಪ್ಪಳ ಆಗಸ್ಟ್ 15, (ಕರ್ನಾಟಕ ವಾರ್ತೆ): ಬಡವರ ಬದುಕಿಗೆ ಬೆಳಕಾದ ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಗಳು ದೇಶಕ್ಕೆ ಮಾದರಿ. ಅಭಿವೃದ್ಧಿಯ ಜನಪರ ಆಡಳಿತಕ್ಕೆ ಎಲ್ಲೆಡೆ ಅಭೂತಪೂರ್ವ ಮೆಚ್ಚುಗೆ ದೊರೆತಿದೆ. ಜಿಡಿಪಿಗೂ ಭರಪೂರ ಕೊಡುಗೆ ನೀಡಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ತಂಗಡಗಿ ಅವರು ಹೇಳಿದರು.
ಶನಿವಾರದಂದು ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತದ ವತಿಯಿಂದ ಆಯೋಜಿಸಲಾಗಿದ್ದ 80ನೇ ಸ್ವಾತಂತ್ರೊö್ಯÃತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ರಾಷ್ಟç ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.
ಗ್ಯಾರಂಟಿ ಯೋಜನೆಗಳು ಸರ್ಕಾರದ ಜನಪರ ಆಡಳಿತಕ್ಕೆ ಸಾಕ್ಷಿಯಾಗಿದ್ದು, ದಾಖಲೆಗಳ ಸರದಾರ ಎಂದೇ ಪ್ರಖ್ಯಾತಿ ಪಡೆದಿದ್ದ ನಿಕಟಪೂರ್ವ ಮುಖ್ಯಮಂತ್ರಿ ಸಿದ್ದರಾಮಯ್ಯ ಸಾರಥ್ಯದ ಕರ್ನಾಟಕ ಸರ್ಕಾರವು ತನ್ನ ಆಡಳಿತಾವಧಿಯ ಯಶಸ್ವಿ ಮೂರು ವರ್ಷಗಳನ್ನು ಪೂರೈಸಿದೆ. ಭರ್ಜರಿ ಬಹುಮತದೊಂದಿಗೆ 2023ರಲ್ಲಿ ಅಧಿಕಾರ ಹಿಡಿದಿದ್ದ ಸರ್ಕಾರ, ಇದೀಗ ಮೂರು ವರ್ಷಗಳ ಮೈಲಿಗಲ್ಲನ್ನು ಪೂರೈಸಿದೆ. ಈ ಅವಧಿಯನ್ನು `ಸಾರ್ಥಕ ಪಯಣ’ ಮತ್ತು `ಜನಪರ ಆಡಳಿತ’ ಎಂದು ಇದನ್ನು ಬಣ್ಣಿಸಬಹುದು ಎಂದು ಅವರು ಹೇಳಿದರು.
ಬಡತನ ನಿರ್ಮೂಲನೆ, ಸಾಮಾಜಿಕ ನ್ಯಾಯ, ಮೂಲಸೌಕರ್ಯ ಅಭಿವೃದ್ಧಿ ಹಾಗೂ ಆರ್ಥಿಕ ಶಕ್ತಿಯಾಗಿ ರಾಜ್ಯವನ್ನು ರೂಪಿಸುವ ನಿಟ್ಟಿನಲ್ಲಿ ಸರ್ಕಾರ ಕೈಗೊಂಡಿರುವ ಪ್ರಮುಖ ನಿರ್ಧಾರಗಳು, ಐದು ಐತಿಹಾಸಿಕ ಗ್ಯಾರಂಟಿ ಯೋಜನೆಗಳ ಅನುಷ್ಠಾನ, ಕೈಗಾರಿಕಾ ಪ್ರಗತಿ ಯೋಜನೆಗಳು ಪ್ರಮುಖ ಸಾಕ್ಷಿಗಳಾಗಿ ಜಾರಿಗೊಂಡಿವೆ. ಪ್ರಸ್ತುತ ಅವಧಿಯ ಸರ್ಕಾರದ ಮೂರು ವರ್ಷಗಳ ಆಡಳಿತದ ಅತಿ ದೊಡ್ಡ ಯಶಸ್ಸು ಎಂದರೆ ಚುನಾವಣೆಗೂ ಮುನ್ನ ಘೋಷಿಸಿದ್ದ ಐದು ಪ್ರಮುಖ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಚಾಲನೆಯಲ್ಲಿಟ್ಟಿರುವುದು. ವಾರ್ಷಿಕ ಸರಿಸುಮಾರು 50,000 ಕೋಟಿ ರೂಪಾಯಿಗಳಿಗೂ ಅಧಿಕ ವೆಚ್ಚದಲ್ಲಿ ಅನುಷ್ಠಾನಗೊಳ್ಳುತ್ತಿರುವ ಈ ಯೋಜನೆಗಳು ಕೋಟ್ಯಂತರ ಕುಟುಂಬಗಳ ಆರ್ಥಿಕ ಸ್ಥಿತಿಯನ್ನು ಸುಧಾರಿಸಿವೆ. ಸಮಾಜದ ಕಟ್ಟಕಡೆಯ ವ್ಯಕ್ತಿಯೂ ಘನತೆಯ ಜೀವನವನ್ನು ಸಾಗಿಸಬೇಕು ಎಂಬ ಆಶಯದೊಂದಿಗೆ ಆರ್ಥಿಕ ಮತ್ತು ಸಾಮಾಜಿಕವಾಗಿ ದುರ್ಬಲರನ್ನೂ ಸಮಾಜದ ಮುಖ್ಯವಾಹಿನಿಗೆ ತರುವ ಉದ್ದೇಶದಿಂದ ರಾಜ್ಯ ಸರ್ಕಾರ ಜಾರಿ ಮಾಡಿದ ಪಂಚ ಗ್ಯಾರಂಟಿ ಯೋಜನೆಗಳು ಕರ್ನಾಟಕದಲ್ಲಿ ಯಶಸ್ವಿಯಾಗಿವೆ. ಐದು ಗ್ಯಾರಂಟಿ ಯೋಜನೆಗಳಿಗೆ ಸರ್ಕಾರ ಈವರೆಗೆ ಒಟ್ಟು 1.34 ಲಕ್ಷ ಕೋಟಿ ರೂಪಾಯಿ ವೆಚ್ಚ ಮಾಡಿದೆ. ಈ ಗ್ಯಾರಂಟಿಗಳನ್ನು ದೇಶದ ವಿವಿಧ ರಾಜ್ಯಗಳು ಅನುಸರಿಸುತ್ತಿರುವುದು ಹೆಗ್ಗಳಿಕೆ ಎಂದು ಸಚಿವರು ಹೆಮ್ಮೆ ವ್ಯಕ್ತಪಡಿಸಿದರು.
ಗೃಹಲಕ್ಷಿö್ಮÃ ಯೋಜನೆಯಡಿ ಕೊಪ್ಪಳ ಜಿಲ್ಲೆಯಲ್ಲಿ ಒಟ್ಟು 3,12,152 ಫಲಾನುಭವಿಗಳು ನೋಂದಣಿಯಾಗಿದ್ದು, ಅದರಲ್ಲಿ ಪರಿಶಿಷ್ಟ ಜಾತಿ-61,178, ಪರಿಶಿಷ್ಟ ಪಂಗಡ-37,488 ಮತ್ತು ಇತರೆ-2,13,486 ಫಲಾನುಭವಿಗಳು ಇರುತ್ತಾರೆ. ಗೃಹಲಕ್ಷಿö್ಮÃ ಯೋಜನೆಯಡಿ ಇಲ್ಲಿವರೆಗೆ ನಮ್ಮ ಜಿಲ್ಲೆಯಲ್ಲಿ 1,853 ಕೋಟಿ ರೂಪಾಯಿಗಳನ್ನು ಫಲಾನುಭವಿಗಳ ಖಾತೆಗೆ ನೇರವಾಗಿ ಜಮೆ ಮಾಡಲಾಗಿದ್ದು, ಈ ಮೂಲಕ ಮಹಿಳೆಯರ ಸಬಲೀಕರಣಕ್ಕೆ ನಾಂದಿ ಹಾಡಲಾಗಿದೆ. ಶಕ್ತಿ ಯೋಜನೆಯಡಿ ಕೊಪ್ಪಳ ಜಿಲ್ಲೆಯಲ್ಲಿ ದಿನಾಂಕ:11-06-2023 ರಿಂದ 31-07-2026ರವರೆಗೆ ಒಟ್ಟು 12.72 ಕೋಟಿ ಮಹಿಳೆಯರು ಪ್ರಯಾಣಿಸಿದ್ದು, ಜುಲೈ-2026ರ ಅಂತ್ಯದವರೆಗೆ ಒಟ್ಟು 12.72 ಕೋಟಿ ಮಹಿಳಾ ಪ್ರಯಾಣಿಕರು ಈ ಯೋಜನೆಯ ಲಾಭ ಪಡೆದಿರುತ್ತಾರೆ. ಒಟ್ಟು ಟಿಕೆಟ್ ಮೌಲ್ಯ ರೂ. 426.39 ಕೋಟಿ ವೆಚ್ಚವಾಗಿದೆ. ಶಕ್ತಿ ಯೋಜನೆ ಜಾರಿಯಾದ ನಂತರ ಈ ವಿಭಾಗಕ್ಕೆ 55 ಹೊಸ ವಾಹನಗಳನ್ನು ಸೇರ್ಪಡೆ ಮಾಡಲಾಗಿದೆ. ಒಟ್ಟು 37 ಹೊಸ ಅನುಸೂಚಿಗಳನ್ನು ಹಾಗೂ 300 ಸರತಿಗಳನ್ನು ಪ್ರಾರಂಭಿಸಲಾಗಿದೆ. ಇದರಿಂದ ಈ ಭಾಗದ ಎಲ್ಲಾ ಮಹಿಳಾ ಪ್ರಯಾಣಿಕರು ಹಾಗೂ ವಿದ್ಯಾರ್ಥಿಗಳಿಗೆ ಬಸ್ ಸೌಲಭ್ಯ ಒದಗಿಸಿ, ಬಸ್ಸಿನ ಸಮಸ್ಯೆಯ ತೊಂದರೆಯನ್ನು ನಿವಾರಿಸಲಾಗಿದೆ ಎಂದು ಅವರು ತಿಳಿಸಿದರು.
ಅನ್ನಭಾಗ್ಯ ಯೋಜನೆಯಡಿ ಕೊಪ್ಪಳ ಜಿಲ್ಲೆಯಲ್ಲಿ ಪ್ರತಿ ತಿಂಗಳು 12,01,254 ಜನ ಸದುಪಯೋಗ ಪಡೆಯುತ್ತಿದ್ದಾರೆ. ರಾಜ್ಯ ಸರ್ಕಾರವು ಅನ್ನಭಾಗ್ಯ ಯೋಜನೆಯಡಿ ನೇರ ನಗದು ವರ್ಗಾವಣೆ ಮೂಲಕ (ಡಿ.ಬಿ.ಟಿ) ಜುಲೈ-2023 ರಿಂದ ಡಿಸೆಂಬರ್-2025ರವರೆಗೆ ಕೊಪ್ಪಳ ಜಿಲ್ಲೆಯಲ್ಲಿ 313.92 ಕೋಟಿ ರೂಪಾಯಿಗಳನ್ನು ಕಾರ್ಡುದಾರರಿಗೆ ವಿನಿಯೋಗಿಸಿದೆ. ಕಳೆದ ಆರ್ಥಿಕ ವರ್ಷದಲ್ಲಿ ಕೊಪ್ಪಳ ಜಿಲ್ಲೆಗೆ ಒಟ್ಟು 189.86 ಕೋಟಿ ರೂ. ವಿನಿಯೋಗ ಮಾಡಲಾಗಿದೆ. ಯುವನಿಧಿ ಯೋಜನೆಯಡಿ ನಿರುದ್ಯೋಗಿ ಪದವೀಧರರಿಗೆ ಪ್ರತಿ ತಿಂಗಳು ರೂ.3000 ಹಾಗೂ ಡಿಪ್ಲೊಮಾದಾರರಿಗೆ ಪ್ರತಿ ತಿಂಗಳು ರೂ.1500 ಗಳ ನಿರುದ್ಯೋಗ ಭತ್ಯೆ ನೀಡುವ ಯುವನಿಧಿ ಯೋಜನೆಯಡಿ ಕೊಪ್ಪಳ ಜಿಲ್ಲೆಯಲ್ಲಿ ದಿನಾಂಕ: 10.08.2026 ರವರೆಗೆ 15,548 ಫಲಾನುಭವಿಗಳು ನೋಂದಣಿ ಮಾಡಿಕೊಂಡಿದ್ದು, ಇಲ್ಲಿಯವರೆಗೆ ಒಟ್ಟು ಮೊತ್ತ ರೂ. 39,18,12,000 ನಿರುದ್ಯೋಗ ಭತ್ಯೆ ನೀಡಲಾಗಿದೆ. ಯುವನಿಧಿ ಅರ್ಹ ಅಭ್ಯರ್ಥಿಗಳಿಗೆ ವಿಶೇಷ ನೋಂದಣಿ ಕಾರ್ಯಕ್ರಮಕ್ಕಾಗಿ ಹೆಲ್ಪ್ ಡೆಸ್ಕ್ ತೆರೆಯಲಾಗಿದೆ. ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಹಾಗೂ ಗ್ಯಾರಂಟಿ ಸಮಿತಿ ಸಂಯೋಗದೊAದಿಗೆ ವಿಶೇಷ ನೋಂದಣಿ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಅವರು ತಿಳಿಸಿದರು.
2026ರ ಜೂನ್ 31 ರವರೆಗೆ ಕೊಪ್ಪಳ ಜಿಲ್ಲಾ ವ್ಯಾಪ್ತಿಯಲ್ಲಿ “ಗೃಹ ಜ್ಯೋತಿ” ಯೋಜನೆಯಡಿ 2,86,730 ಫಲಾನುಭವಿಗಳು ಅರ್ಜಿ ನೋಂದಾಯಿಸಿರುತ್ತಾರೆ. ಪ್ರಗತಿಯು ಶೇ.99.02 ಆಗಿದೆ. 2,849 ಗ್ರಾಹಕರ ನೋಂದಣಿ ಬಾಕಿ ಇರುತ್ತದೆ. ಜಿಲ್ಲಾ ವ್ಯಾಪ್ತಿಯಲ್ಲಿ “ಗೃಹಜ್ಯೋತಿ” ಯೋಜನೆಯ ಫಲಾನುಭವಿಗಳ ಪರಿಶೀಲನಾ ಕಾರ್ಯವು ಇಲ್ಲಿವರೆಗೆ ಶೇ.54.48 ರಷ್ಟು ಪೂರ್ಣಗೊಂಡಿದೆ ಎಂದು ಅವರು ಹೇಳಿದರು.
ವಿ.ಬಿ.ಜಿ ರಾಮ್ ಜಿ ಯೋಜನೆಯಡಿ 125 ಮಾನವ ದಿನಗಳ ಉದ್ಯೋಗವನ್ನು ನೀಡಲು ಅವಕಾಶವಿರುತ್ತದೆ. ಈಗಾಗಲೇ 4,700 ಕೋಟಿ ಕ್ರಿಯಾ ಯೋಜನೆ ತಯಾರಿಸಿ ಅನುಮೋದಿಸಲಾಗಿದೆ. ಈಗಾಗಲೇ ಎಲ್ಲಾ ಕಾಮಗಾರಿಗಳು ಪ್ರಗತಿಯಲ್ಲಿವೆ. ಕೊಪ್ಪಳ ಜಿಲ್ಲೆಯಲ್ಲಿ ಈಗಾಗಲೇ 11 ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳು ಪೂರ್ಣಗೊಂಡಿದ್ದು, 477 ಗ್ರಾಮಗಳು ಒಳಗೊಂಡಿವೆ. ಎನ್.ಆರ್.ಡಿ.ಡಬ್ಲ್ಯೂ.ಪಿ. ಯೋಜನೆಯಡಿ ಪ್ರಸ್ತುತ ಜೆ.ಜೆ.ಎಂ. ಅಡಿಯಲ್ಲಿ ಕೈಗೊಂಡಿರುವ 3 ಯೋಜನೆಗಳಲ್ಲಿ ಹೇರೂರು ಮತ್ತು ಹುಲಿಹೈದರ್ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳು ಪೂರ್ಣಗೊಳ್ಳುವ ಹಂತದಲ್ಲಿವೆ. ಚಿಕ್ಕಮಾದಿನಾಳ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಪ್ರಗತಿಯಲ್ಲಿದೆ. ಒಟ್ಟು 403 ಕೋಟಿ ಅಂದಾಜು ಮೊತ್ತದ 3 ಹೊಸ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳ ಕಾಮಗಾರಿಗಳು ಪ್ರಗತಿಯಲ್ಲಿವೆ. ಕೆರೆಹಳ್ಳಿ ಮತ್ತು ಇತರೆ 103 ಗ್ರಾಮಗಳ ಡಿ.ಬಿ.ಒ.ಟಿ. ಆಧಾರಿತ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಅಂದಾಜು ಮೊತ್ತ 260 ಕೋಟಿ. ಚಿಕ್ಕಬೆಣಕಲ್ ಮತ್ತು ಇತರೆ 61 ಗ್ರಾಮಗಳ ಡಿ.ಬಿ.ಒ.ಟಿ. ಆಧಾರಿತ ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆಯ ಅಂದಾಜು ಮೊತ್ತ 110 ಕೋಟಿ ಆಗಿದೆ ಎಂದು ಅವರು ತಿಳಿಸಿದರು.
ಈ ವರ್ಷ ಮುಂಗಾರು ಹಂಗಾಮಿನ ಆಗಸ್ಟ್ 12 ರವರೆಗೆ ಜಿಲ್ಲೆಯ ವಾಡಿಕೆ ಮಳೆ 177.00 ಮಿ.ಮೀ. ಇದ್ದು, ವಾಸ್ತವಿಕವಾಗಿ 111.30 ಮಿ.ಮೀ. ಮಳೆಯಾಗಿ ಶೇ.37 ರಷ್ಟು ಮಳೆ ಕೊರತೆಯಾಗಿದೆ. ಈ ವರ್ಷ ಜಿಲ್ಲೆಯಲ್ಲಿ ಮಳೆ ಕೊರತೆಯಿಂದಾಗಿ ಜಿಲ್ಲೆಯಲ್ಲಿ ಕೇವಲ 2.44 ಲಕ್ಷ ಹೆಕ್ಟರ್ ಪ್ರದೇಶದಲ್ಲಿ ಶೇ.70 ರಷ್ಟು ಬಿತ್ತನೆಯಾಗಿದೆ. ಬೆಳೆದಿರುವ ಬೆಳೆಗಳ ಬೆಳವಣಿಗೆ ಕುಂಠಿತವಾಗಿದೆ. ಭತ್ತ, ಮೆಕ್ಕೆಜೋಳ, ಸಜ್ಜೆ, ನವಣೆ, ಹೆಸರು, ತೊಗರಿ, ಸೂರ್ಯಕಾಂತಿ ಇತ್ಯಾದಿ 9,730 ಕ್ವಿಂಟಲ್ ಬಿತ್ತನೆ ಬೀಜಗಳನ್ನು ದಾಸ್ತಾನು ಮಾಡಲಾಗಿದ್ದು, ಇದರಲ್ಲಿ 7212 ಕ್ವಿಂಟಲ್ ಬೀಜಗಳನ್ನು ರೈತರಿಗೆ ವಿತರಿಸಲಾಗಿದೆ. ಜಿಲ್ಲೆಯಲ್ಲಿ ಬಿತ್ತನೆ ಬೀಜದ ಕೊರತೆ ಇರುವುದಿಲ್ಲ.ಜಿಲ್ಲೆಯಲ್ಲಿ ಯಾವುದೇ ರೀತಿಯ ರಸಗೊಬ್ಬರ ಕೊರತೆಯಾಗದಂತೆ ನಿಗಾ ವಹಿಸಲಾಗಿದೆ. 2025-26ನೇ ಸಾಲಿನಲ್ಲಿ ಜಿಲ್ಲೆಯಾದ್ಯಂತ ಒಟ್ಟು 60,478 ಬೆಳೆ ವಿಮೆ ಅರ್ಜಿಗಳು ನೋಂದಣಿಯಾಗಿದ್ದು, ಒಟ್ಟು ರೂ.66.48 ಕೋಟಿ ರೂ. ಪರಿಹಾರ ಮಂಜೂರಾಗಿರುತ್ತದೆ. ಈ ಪೈಕಿ 21,795 ರೈತರು ರೂ.64.87 ಕೋಟಿ ರೂ. ಪರಿಹಾರ ಪಡೆದಿದ್ದಾರೆ. 2026-27ನೇ ಸಾಲಿನಲ್ಲಿ ನೋಂದಣಿಯು ಗಣನೀಯವಾಗಿ ಹೆಚ್ಚಿದ್ದು, ಒಟ್ಟು 1,56,013 ಅರ್ಜಿಗಳ ಮೂಲಕ 1,49,987 ಹೆಕ್ಟೇರ್ ಪ್ರದೇಶ ವಿಮೆಗೆ ಒಳಪಟ್ಟಿದೆ ಎಂದು ಅವರು ಹೇಳಿದರು. ಜಿಲ್ಲೆಯ 7 ನಗರ ಸ್ಥಳೀಯ ಸಂಸ್ಥೆಗಳಿಗೆ ಕುಡಿಯುವ ನೀರಿನ ಯೋಜನೆಯನ್ನು ಅನುಷ್ಠಾನಗೊಳಿಸಲು ಅಮೃತ 2.0 ಯೋಜನೆಯಡಿ ವಿವಿಧೆಡೆ ಕಾಮಗಾರಿಗಳು ನಡೆಯುತ್ತಿವೆ. ರೂ.139.94 ಕೋಟಿ ರೂ.ಗಳ ವೆಚ್ಚದಲ್ಲಿ ಕೊಪ್ಪಳ-ಭಾಗ್ಯನಗರ ಸಂಯುಕ್ತ ಕುಡಿಯವ ನೀರಿನ ಯೋಜನೆಯ ಕಾಮಗಾರಿ ಚಾಲ್ತಿಯಲ್ಲಿದ್ದು, ಬರುವ ಅಕ್ಟೋಬರ್ ಅಂತ್ಯಕ್ಕೆ ಕಾಮಗಾರಿಯನ್ನು ಪೂರ್ಣಗೊಳಿಸಲಾಗುವುದು. ಮೊತ್ತ ರೂ.242.23 ಕೋಟಿ ವೆಚ್ಚದಲ್ಲಿ ಯಲಬುರ್ಗಾ-ಕುಕನೂರು ಸಂಯುಕ್ತ ಕುಡಿಯವ ನೀರಿನ ಯೋಜನೆಯ ಕಾಮಗಾರಿಗೆ ಹಾಗು ಮೊತ್ತ ರೂ.195.79 ಕೋಟಿ ವೆಚ್ಚದಲ್ಲಿ ಕನಕಗಿರಿ-ಕಾರಟಗಿ ಸಂಯುಕ್ತ ಕುಡಿಯವ ನೀರಿನ ಯೋಜನೆಯ ಕಾಮಗಾರಿ ಕೈಗೊಳ್ಳಲು ಗುತ್ತಿಗೆದಾರರಿಗೆ ಆದೇಶ ನೀಡಲಾಗಿದೆ. ಮೊತ್ತ ರೂ.28.00 ಕೋಟಿ ವೆಚ್ಚದಲ್ಲಿನ ಕುಷ್ಟಗಿ ಕುಡಿಯುವ ನೀರಿನ ಯೋಜನೆಯ ಕಾಮಗಾರಿ ಪ್ರಗತಿಯಲ್ಲಿದೆ ಎಂದು ಅವರು ತಿಳಿಸಿದರು.
ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭ ಸಂಸದರಾದ ಕೆ.ರಾಜಶೇಖರ ಹಿಟ್ನಾಳ, ವಿಧಾನ ಪರಿಷತ್ ಸದಸ್ಯರಾದ ಹೇಮಲತಾ ನಾಯಕ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ರೆಡ್ಡಿ ಶ್ರೀನಿವಾಸ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರಸನ್ನ ಗಡಾದ, ಜಿಲ್ಲಾಧಿಕಾರಿ ಡಾ.ಸುರೇಶ ಬಿ.ಇಟ್ನಾಳ, ಡಿಎಫ್‌ಒ ನಿರ್ಮಲಾ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ರಾಮ್ ಎಲ್.ಅರಸಿದ್ದಿ, ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
Total Views:
0
ಜಾಹೀರಾತು

ಜಾಹೀರಾತು

ಜಾಹೀರಾತು

ಜಾಹೀರಾತು

ಜಾಹೀರಾತು


