ಗಂಗಾವತಿಯ ಗುಂಡಮ್ಮ ಕ್ಯಾಂಪ್ ಸರ್ಕಾರಿ ಶಾಲೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ

H.Mallikarjun
H.Mallikarjun - Kalyanasiri
1 Min Read

ಜಾಹೀರಾತು
ಜಾಹೀರಾತು
Celebrations of the 80th Independence Day at the Government School in Gundamma Camp, Gangavathi.
 

ಗಂಗಾವತಿಯ ಗುಂಡಮ್ಮ ಕ್ಯಾಂಪ್ ಸರ್ಕಾರಿ ಶಾಲೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ

ಗಂಗಾವತಿ, ಆಗಸ್ಟ್ 15: ನಗರದ ಗುಂಡಮ್ಮ ಕ್ಯಾಂಪ್ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮವನ್ನು ಅತ್ಯಂತ ಸಂಭ್ರಮ ಮತ್ತು ಸಡಗರದಿಂದ ಆಚರಿಸಲಾಯಿತು. ಶಾಲೆಯ ಮುಖ್ಯ ಗುರುಗಳಾದ ಶ್ರೀನಿವಾಸ್ ಅವರು ಧ್ವಜಾರೋಹಣ ನೆರವೇರಿಸಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಸಮಾಜದ ಕಳಕಳಿವುಳ್ಳ ದಂತ ವೈದ್ಯರಾದ ಡಾ. ಶಿವಕುಮಾರ್ ಮಾಲಿ ಪಾಟೀಲ್, “ನಮ್ಮ ಹಿರಿಯರ ತ್ಯಾಗ ಮತ್ತು ಬಲಿದಾನದಿಂದಾಗಿ ಇಂದು ನಾವು 80 ವರ್ಷಗಳಿಂದ ಸುರಕ್ಷಿತವಾಗಿದ್ದೇವೆ. ಈಗ ನಾವು ನಮ್ಮ ದೇಶವನ್ನು ವಿಶ್ವಗುರು ಮಾಡುವ ನಿಟ್ಟಿನಲ್ಲಿ ಒಟ್ಟಾಗಿ ಕೆಲಸ ಮಾಡಬೇಕಿದೆ” ಎಂದರು.

ಸರ್ಕಾರಿ ಶಾಲೆಗಳ ಸದ್ಯದ ಸ್ಥಿತಿಯ ಬಗ್ಗೆ ಕಳಕಳಿ ವ್ಯಕ್ತಪಡಿಸಿದ ಅವರು, “ದೇಶದಲ್ಲಿ ಸರ್ಕಾರದ ನೀತಿಗಳು ಮತ್ತು ಜನರ ಖಾಸಗಿ ಶಾಲೆಗಳ ವ್ಯಾಮೋಹದಿಂದಾಗಿ ಸರ್ಕಾರಿ ಶಾಲೆಗಳು ಮುಚ್ಚುವ ಸ್ಥಿತಿಗೆ ತಲುಪುತ್ತಿವೆ. ಇಂತಹ ಸಂದರ್ಭದಲ್ಲಿ ಗುಂಡಮ್ಮ ಕ್ಯಾಂಪ್ ಸರ್ಕಾರಿ ಶಾಲೆ ಕೂಡ ಮುಚ್ಚುವ ಹಂತದಲ್ಲಿತ್ತು. ಆದರೆ ಈ ವಾರ್ಡಿನ ಹಿರಿಯರು ಮತ್ತು ಯುವಕರು ಒಟ್ಟಾಗಿ ಸೇರಿ, ಪಾಲಕರ ಮನವೊಲಿಸಿ ಶಾಲೆಯ ವಿದ್ಯಾರ್ಥಿಗಳ ಸಂಖ್ಯೆಯನ್ನು 3 ರಿಂದ 20ಕ್ಕೆ ಏರಿಸಿರುವುದು ತುಂಬಾ ಸಂತೋಷದ ಸಂಗತಿಯಾಗಿದೆ. ಶಾಲೆಯ ಅಭಿವೃದ್ಧಿಗೆ ನಾನು ಸದಾ ನಿಮ್ಮ ಜೊತೆಗಿದ್ದು, ಅಗತ್ಯ ಸಹಾಯ-ಸಹಕಾರ ನೀಡುತ್ತೇನೆ” ಎಂದು ಭರವಸೆ ನೀಡಿದರು.

ಕಾರ್ಯಕ್ರಮದ ಆರಂಭದಲ್ಲಿ ಕೆ. ಸನ್ನೀಕ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು.

ಈ ಸಂದರ್ಭದಲ್ಲಿ ವಾರ್ಡಿನ ಹಿರಿಯರಾದ ಹೆಚ್. ಮಲ್ಲಿಕಾರ್ಜುನ ಹೊಸಕೇರಾ  , ನೀಲಪ್ಪ (ಶಿಕ್ಷಕರು), ಪ್ರಭಾಕರ್ ಕೊಬ್ಬಜ್ಜಿ, ಖಾಜಾಸಾಬ ಮಂಡಾಳ ಬಟ್ಟಿ, ವೀರಣ್ಣ ನಾಯಕ, ಕೆ. ಸನ್ನೀಕ್, ಎಂ ಕೆ ಉಲ್ಲಾಸ, ದೇವರಾಜ್ ಗುಡದಳ್ಳಿ, ವರಾಜ್,  ಮೆಹಬುಬ, ಚಂದ್ರಪ್ಪ ಹಡಪದ,ಕೊಟ್ರೇಶ್ ಹೊಂಬಾಳ್ ಸೇರಿದಂತೆ ಶಾಲೆಯ ಶಿಕ್ಷಕ ವೃಂದ, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ವಿದ್ಯಾರ್ಥಿಗಳು ಪಾಲಕರು, ಶಿಕ್ಷಣ ಪ್ರೇಮಿಗಳು ಉಪಸ್ಥಿತರಿದ್ದರು.


Total Views: 0
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
Share This Article