Three poachers killed in firing by Forest Department officials; Minister offers condolences.
ಅರಣ್ಯ ಇಲಾಖೆ ಅಧಿಕಾರಿಗಳ ಗುಂಡಿನ ದಾಳಿಗೆ ಮೂವರು ಬೇಟೆಗಾರರ ಬಲಿ ಸಚಿವರಿಂದ ಸಾಂತ್ವನ .




ವರದಿ: ಬಂಗಾರಪ್ಪ .ಸಿ.
ಹನೂರು : ಕಾವೇರಿ ವನ್ಯಜೀವಿಧಾಮದ ಹೊಳೆದಟ್ಟಿ ಅರಣ್ಯ ಪ್ರದೇಶದಲ್ಲಿ ಅರಣ್ಯ ಸಿಬ್ಬಂದಿ ಗುಂಡೇಟಿಗೆ ಮೂವರು ಸಾವನ್ನಪ್ಪಿದ್ದಾರೆ. ಪ್ರತಿಯಾಗಿ ಅರಣ್ಯ ಇಲಾಖೆಯ
DRFO ಕಚೇರಿಯ ಪೀಠೋಪಕರಣ ಧ್ವಂಸವಾಗಿದೆ .
ಹನೂರು ತಾಲೂಕಿನ ತೋಮಿಯರ್ ಪಾಳ್ಯ ಗ್ರಾಮದ ಅಂತೋನಿಸ್ವಾಮಿ, ಪೀಟರ್, ಕುಮಾರ್ ಎಂಬುವರು ಮೃತಪಟ್ಟಿದ್ದಾರೆ. ಇನ್ನೂ ಮಹಿಮದಾಸ್ ಎಂಬಾತ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾನೆ. ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯೊಳಗೆ ಬೆಳಿಗಿನ ಜಾವ ವನ್ಯಪ್ರಾಣಿಗಳನ್ನು ಅಕ್ರಮವಾಗಿ ಬೇಟೆಯಾಡಿ ಮಾಂಸ ಬೇರ್ಪಡಿಸುತ್ತಿರುವ ಕುರಿತು ಗಸ್ತಿನಲ್ಲಿದ್ದ ಅರಣ್ಯ ಇಲಾಖೆ ಸಿಬ್ಬಂದಿಗೆ ಮಾಹಿತಿ ಲಭಿಸಿದೆ. ಸ್ಥಳಕ್ಕೆ ದೌಡಾಯಿಸಿದ ಸಿಬ್ಬಂದಿ, ಬೇಟೆಗಾರರ ಮಧ್ಯೆ ಗುಂಡಿನ ಚಕಮಕಿ ನಡೆದಿದೆ. ಈ ವೇಳೆ ಮೂವರಿಗೆ ಗುಂಡು ತಗುಲಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಮೂವರ ಶವಗಳನ್ನು ಮೈಸೂರಿನ ಕೆ. ಆರ್. ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಗಿದೆ.
ಉದ್ರಿಕ್ತರಿಂದ ಪೀಠೋಪಕರಣ ಧ್ವಂಸ: ಇನ್ನು, ಮೂವರು ಮೃತಪಟ್ಟ ಮಾಹಿತಿ ತಿಳಿದು ಸ್ಥಳೀಯರು ತೀವ್ರ ಆಕ್ರೋಶ ಹೊರಹಾಕಿದ್ದಾರೆ. ಶಾಗ್ಯ ಡಿಆರ್ಎಫ್ಒ ಕಚೇರಿಗೆ ಒಳನುಗ್ಗಿ ಪೀಠೋಪಕರಣ ಧ್ವಂಸ ಮಾಡಿದ್ದಾರೆ. ಗುಂಡೇಟಿಗೆ ಬಲಿಯಾದ ಮೂವರು ಕಳ್ಳ ಬೇಟೆಗಾರರಲ್ಲ, ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ದಾಳಿಯನ್ನೇ ಮಾಡರಲಿಲ್ಲ. ಆದರೂ ಸಹ ಪ್ರತಿ ದಾಳಿಯ ಹೆಸರಿನಲ್ಲಿ ಅವರನ್ನು ಗುಂಡಿಟ್ಟು ಕೊಲ್ಲಲಾಗಿದೆ ಎಂದು ಗ್ರಾಮಸ್ಥರು ಆರೋಪ ಮಾಡಿದ್ದಾರೆ.
ಅರಣ್ಯ ಸಿಬ್ಬಂದಿಯಿಂದ ಎನ್ಕೌಂಟರ್
DRFO ಕಚೇರಿಯ ಪೀಠೋಪಕರಣ ಧ್ವಂಸ
ಮೃತರು ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ದಾಳಿ ಮಾಡಿಲ್ಲ. ಪ್ರತಿದಾಳಿಯ ನೆಪದಲ್ಲಿ ಮೂವರನ್ನು ಗುಂಡಿಟ್ಟು ಕೊಂದಿದ್ದಾರೆ. ಈ ಪ್ರಕರಣ ನಿವೃತ್ತ ನ್ಯಾಯಾಧೀಶರಿಂದ ತನಿಖೆಯಾಗಬೇಕು. ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಸಚಿವರು ಹೇಳಿದ್ದೇನು? ಘಟನೆ ಬಗ್ಗೆ ಸಚಿವ ಸಿ. ಪುಟ್ಟರಂಗಶೆಟ್ಟಿ ಪ್ರತಿಕ್ರಿಯೆ ನೀಡಿ, ಈ ಕುರಿತು ಕಾವೇರಿ ವನ್ಯಜೀವಿಧಾಮದ ಅಧಿಕಾರಿಗಳ ಜೊತೆ ಮಾತನಾಡಿದ್ದು, ಕಳ್ಳಬೇಟೆಗೆ ತೆರಳಿದ್ದವರು ಸಿಬ್ಬಂದಿ ಮೇಲೆ ನಾಡ ಬಂದೂಕುಗಳಿಂದ ದಾಳಿ ಮಾಡಿದಾಗ ಪ್ರತಿದಾಳಿ ಮಾಡಿದಾಗ ಮೂವರು ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ. ಆದರೆ ಸ್ಥಳೀಯರು, ಮೃತಪಟ್ಟವರು ಅಮಾಯಕರಾಗಿದ್ದು ಬೇಟೆಗೆ ಹೋಗಿರಲಿಲ್ಲ ಎನ್ನುತ್ತಿದ್ದಾರೆ. ಪರಿಶೀಲಿಸಿ ಕ್ರಮ ವಹಿಸುವುದಾಗಿ ಭರವಸೆ ನೀಡಿದ್ದಾರೆ.
ಸಂಬಂಧಿಕರ ಆಕ್ರೋಶ: ಮೃತಪಟ್ಟ ಮೂವರು ನಮ್ಮ ಸಂಬಂಧಿಕರು. ಅವರೆಲ್ಲ ರೈತರು. ಕಾಡಿಗೆ ಹೋದಾಗ ಏಕಾಏಕಿ ಶೂಟ್ ಮಾಡಿದ್ದಾರೆ. ಅರಣ್ಯ ಸಿಬ್ಬಂದಿಯು ಎನ್ ಕೌಂಟರ್ ಮಾಡುವ ಅಗತ್ಯ ಏನಿತ್ತು?, ನಮ್ಮವರು ಯಾರ ಮೇಲೆ ಗುಂಡು ಹಾರಿಸಿದ್ದಾರೆ ತೋರಿಸಲಿ. ಮೃತರಿಗೆ ಮದುವೆಯಾಗಿದ್ದು, ಮೂವರಿಗೂ ಚಿಕ್ಕಮಕ್ಕಳಿದ್ದಾರೆ. ನಮಗೆ ನ್ಯಾಯ ಬೇಕು ಎಂದು ಮೃತರ ಸಂಬಂದಿಕರು ತಿಳಿಸಿದರು.
ವಿಷಯ ತಿಳಿಯುತ್ತಿದ್ದಂತೆ
ಸ್ಥಳೀಯರಿಂದ ಬೃಹತ್ ಪ್ರತಿಭಟನೆ: ತೋಮಿಯಾರ್ ಪಾಳ್ಯ, ಮಾರ್ಟಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಹನೂರು ಪಟ್ಟಣದಲ್ಲಿ ಬೃಹತ್ ಸಂಖ್ಯೆಯಲ್ಲಿ ಜಮಾಯಿಸಿ ರಸ್ತೆ ತಡೆ ನಡೆಸಿದರು. ಅಲ್ಲದೆ
ಉದ್ದೇಶಪೂರ್ವಕವಾಗಿ ಅರಣ್ಯ ಇಲಾಖೆ ಅಧಿಕಾರಿಗಳು ಶೂಟೌಟ್ ಮಾಡಿದ್ದು, ಬೇಟೆಗಾರರ ಹೆಸರಿನಲ್ಲಿ ಕೊಂದಿದ್ದಾರೆ ಎಂದು ಪೋಸ್ಟರ್ಗಳನ್ನು ಹಿಡಿದು ಆಕ್ರೋಶ ಹೊರಹಾಕುತ್ತಿದ್ದಾರೆ. ಸ್ಥಳಕ್ಕೆ ಹನೂರು ಶಾಸಕ ಮಂಜುನಾಥ್ ಭೇಟಿ ನೀಡಿದ್ದು ಕೃತ್ಯದಲ್ಲಿ ಭಾಗಿಯಾದ ಎಲ್ಲಾ ಅಧಿಕಾರಿಗಳಿಗೂ ಶಿಕ್ಷೆ ಕೊಡಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು. ಡಿಸಿಎಪ್ ಆರ್ ಎಫ್ ಒ. ಸೇರಿದಂತೆ ಅನೇಕರ ಮೆಲೆ ದೂರು ದಾಖಲು ಮಾಡಲು ಅಧಿಕಾರಿಗಳಿಗೆ ಸೂಚಿಸಲಾಗುವುದು. ನಿವೃತ್ತಿ ನ್ಯಾಯದೀಶರು ಹಾಗೂ ಜಿಲ್ಲಾಧಿಕಾರಿಗಳ ಮುಂದಾಳತ್ವದಲ್ಲಿ ತನಿಕೆ ನೆಡೆಸುವುದು ,ಇಂತಹ ವಿಚಾರಗಳನ್ನು ಗಂಭೀರ ಸ್ವರೂಪದ ಪ್ರಮಾಣದಲ್ಲಿ ತೆಗೆದುಕೊಳ್ಳಲಾಗುವುದು , ಹನೂರು ಕ್ಷೇತ್ರವು ಹೆಚ್ಚು ಕಾಡಿನಿಂದ ಆವೃತವಾಗಿದೆ ಸ್ಥಳ ಮಹಜರ್ ಮಾಡದೆ ಯಾವುದೇ ವಿಷಯ ಹೆಳಲು ಇಷ್ಟ ಪಡುವುದಿಲ್ಲ ನೊಂದವರಿಗೆ ನ್ಯಾಯ ಸಿಗುವವರಿಗೂ ನಾವು ಹೋರಾಟ ಮಾಡೋಣ ನಮ್ಮ ಮುಖ್ಯ ಮಂತ್ರಿಗಳ ವೀವೆಚನೆಯಂತೆ ನಾವು ಪ್ರಯತ್ನಿಸೋಣ ಎಂದರು.
ಪ್ರತಿಭಟನ ಸ್ಥಳಕ್ಕೆ ಆಗಮಿಸಿದ ಮಾಜಿ ಶಾಸಕರಾದ ಆರ್ ನರೇಂದ್ರ ಮಾತನಾಡಿ . ನಮ್ಮ ಕ್ಷೇತ್ರದ ಸಮಸ್ಯೆಗಳನ್ನು ನಾನು ಈಗಾಗಲೇ ಉಸ್ತುವಾರಿ ಸಚಿವರು ಸೇರಿದಂತೆ ಮುಖ್ಯ ಮಂತ್ರಿಗಳಿಗೆ ವಿಷಯವನ್ನು ತಿಳಿಸಲಾಗಿದೆ ನೊಂದವರ ಪರವಾಗಿ ನಮ್ಮ ಸರ್ಕಾರವಿದೆ ಆದ್ದರಿಂದ ತಪ್ಪಿತಸ್ಥರಿಗೆ ಶಿಕ್ಷೇಕೊಡಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಈಗಾಗಲೇ ಸಂಬಂಧಿಸಿದ ಅಧಿಕಾರಿಗಳ ಮುಖಾಂತರ ಮಾಹಿತಿ ಪಡೆದು ಮುಂದಿನ ಹಂತವನ್ನು ಪೂರ್ಣಗೊಳಿಸಲಾಗುವುದು, ಅಲ್ಲದೆ ಮೃತರ ವಾರಸ್ಥದಾರರಿಗೆ ಸರ್ಕಾರಿ ನೌಕರಿ ಸೇರಿದಂತೆ ಇನ್ನಿತರ ಸೌಲಭ್ಯಗಳನ್ನು ಒದಗಿಸುವಂತೆ ಸರ್ಕಾರದ ಗಮನ ಸೆಳೆಯಲಾಗುವುದು ಎಂದರು.
ಹನೂರಿನ ಅರಣ್ಯ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸುವ ಹಿನ್ನೆಲೆ 200 ಕ್ಕೂ ಅಧಿಕ ಪೊಲೀಸರನ್ನು ನಿಯೋಜಿಸಿ ಭಾರೀ ಭದ್ರತೆ ಕೈಗೊಳ್ಳಲಾಗಿತ್ತು .
ಸದ್ಯ, ಬಿಗುವಿನ ವಾತಾವರಣ ನಿರ್ಮಾಣವಾಗಿದ್ದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸರು ಕಟ್ಟೆಚ್ಚರ ವಹಿಸಿದ್ದು ಸಾರಿಗೆ ವಾಹನಗಳಿಗೂ ಸಹ ಕೆಲ ಕಾಲ ಸ್ಥಗಿತ ಮಾಡಲಾಗಿತ್ತು.
ಇದೇ ಸಮಯದಲ್ಲಿ ಮಾಜಿ ಸಚಿವರಾದ ಎನ್ ಮಹೇಶ್ ,ಡಾಕ್ಟರ್ ದತ್ತೇಶ್ ಕುಮಾರ್ ಹಾಗೂ ರೈತ ಮುಖಂಡರುಗಳು ಹಾಜರಿದ್ದರು.
ಪೋಲಿಸ್ ಇಲಾಖೆಯ ಅಧಿಕಾರಿಗಳು ಸೇರಿದಂತೆ ಇನ್ನಿತರರು ಹಾಜರಿದ್ದರು.





