Free advanced tools for rural skilled workers: Call for applications
ಗ್ರಾಮೀಣ ಕುಶಲಕರ್ಮಿಗಳಿಗೆ ಉಚಿತ ಸುಧಾರಿತ ಉಪಕರಣ: ಅರ್ಜಿ ಆಹ್ವಾನ
ಕೊಪ್ಪಳ ಆಗಸ್ಟ್ 19 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿರುವ ವೃತ್ತಿಪರ ಕುಶಲಕರ್ಮಿಗಳಿಗೆ 2026-27ನೇ ಸಾಲಿನ ವೃತ್ತಿಪರ ಕುಶಲಕರ್ಮಿಗಳಿಗೆ ಉಚಿತವಾಗಿ ಸುಧಾರಿತ ಉಪಕರಣ ಸರಬರಾಜು ಯೋಜನೆಯಡಿ ವಿವಿಧ ವೃತ್ತಿಗಳಿಗೆ ಅಗತ್ಯವಿರುವ ಉಪಕರಣಗಳನ್ನು ಉಚಿತವಾಗಿ ಒದಗಿಸಲು ಅರ್ಜಿ ಆಹ್ವಾನಿಸಲಾಗಿದೆ.
ಯೋಜನೆಯಡಿ ವಿದ್ಯುತ್ ಚಾಲಿತ ಹೊಲಿಗೆ ಯಂತ್ರ, ಬಡಗಿತನ, ಕ್ಷೌರಿಕ ಹಾಗೂ ಧೋಬಿ ವೃತ್ತಿಗೆ ಅಗತ್ಯವಿರುವ ಸುಧಾರಿತ ಉಪಕರಣಗಳನ್ನು ಪಡೆಯಲು ಅರ್ಹ ಗ್ರಾಮೀಣ ಕುಶಲಕರ್ಮಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಆಸಕ್ತ ಕುಶಲಕರ್ಮಿಗಳು ಸೆಪ್ಟೆಂಬರ್ 30ರವರೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು, ವೆಬ್‌ಸೈಟ್ koppal.nic.in ನಲ್ಲಿ ನಮೂದಿಸಿರುವ ಲಿಂಕ್ ಮೂಲಕ ಅರ್ಜಿ ಸಲ್ಲಿಸಬೇಕು ಎಂದು ಗ್ರಾಮೀಣ ಕೈಗಾರಿಕಾ ವಿಭಾಗದ ಉಪ ನಿರ್ದೇಶಕರು ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರು (ಗ್ರಾ.ಕೈ), ಗ್ರಾಮೀಣ ಕೈಗಾರಿಕಾ ವಿಭಾಗ (ಜಿಲ್ಲಾ ಪಂಚಾಯತ್), ಕೊಪ್ಪಳ ಕಚೇರಿಯನ್ನು ಅಥವಾ ಕಚೇರಿ ದೂರವಾಣಿ ಸಂಖ್ಯೆ: 08539-230980ಗೆ ಸಂಪರ್ಕಿಸಬಹುದು.
Total Views:
0
ಜಾಹೀರಾತು

ಜಾಹೀರಾತು

ಜಾಹೀರಾತು

ಜಾಹೀರಾತು

ಜಾಹೀರಾತು