ಆ. 20ರಂದು ಕೊಪ್ಪಳದಲ್ಲಿ ಡಿ.ದೇವರಾಜ ಅರಸು ರವರ 111ನೇ ಜನ್ಮ ದಿನಾಚರಣೆ

H.Mallikarjun
H.Mallikarjun - Kalyanasiri
2 Min Read

On Aug. 20, the 111th birthday celebration of D. Devaraj Arasu in Koppal

ಆ. 20ರಂದು ಕೊಪ್ಪಳದಲ್ಲಿ ಡಿ.ದೇವರಾಜ ಅರಸು ರವರ 111ನೇ ಜನ್ಮ ದಿನಾಚರಣೆ
ಕೊಪ್ಪಳ ಆಗಸ್ಟ್ 19 (ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಡಿ. ದೇವರಾಜ ಅರಸು ಅಭಿವೃದ್ಧಿ ನಿಗಮ ಕೊಪ್ಪಳ ಇವರ ಸಂಯುಕ್ತಾಶ್ರಯದಲ್ಲಿ ಹಿಂದುಳಿದ ವರ್ಗಗಳ ಧೀಮಂತ ನಾಯಕ, ಸಾಮಾಜಿಕ ಪರಿವರ್ತನೆಯ ಹರಿಕಾರ ಹಾಗೂ ಕರ್ನಾಟಕ ರಾಜ್ಯದ ಮಾಜಿ ಮುನ್ಯಮಂತ್ರಿಗಳಾದ ದಿವಂಗತ ಡಿ.ದೇವರಾಜ ಅರಸು ರವರ 111ನೇ ಜನ್ಮ ದಿನಾಚರಣೆ ಸಮಾರಂಭವನ್ನು ಆಗಸ್ಟ್ 20 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಸಾಹಿತ್ಯ ಭವನದಲ್ಲಿ ಆಯೋಜಿಸಲಾಗಿದೆ.
ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ಎಸ್. ತಂಗಡಗಿ ಅವರು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸುವರು. ಉನ್ನತ ಶಿಕ್ಷಣ ಇಲಾಖೆ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಬಸವರಾಜ ರಾಯರೆಡ್ಡಿ, ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ಮುಖ್ಯ ಸಚೇತಕರು ಹಾಗೂ ಕುಷ್ಟಗಿ ಶಾಸಕರಾದ ದೊಡ್ಡನಗೌಡ ಹನುಮಗೌಡ ಪಾಟೀಲ ಅವರು ಕಾರ್ಯಕ್ರಮದ ಘನ ಉಪಸ್ಥಿತಿ ವಹಿಸುವರು. ಕೊಪ್ಪಳ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ ಅವರು ಸಮಾರಂಭದ ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಕೊಪ್ಪಳ ಸಂಸದರಾದ ಕೆ.ರಾಜಶೇಖರ ಹಿಟ್ನಾಳ, ಗಂಗಾವತಿ ಶಾಸಕರಾದ ಜಿ.ಜನಾರ್ಧನ ರೆಡ್ಡಿ, ವಿಧಾನ ಪರಿಷತ್ ಸದಸ್ಯರುಗಳಾದ ಶಶೀಲ್ ಜಿ.ನಮೋಶಿ, ಡಾ.ಚಂದ್ರಶೇಖರ ಬಿ.ಪಾಟೀಲ, ಶರಣಗೌಡ ಅನ್ನದಾನಗೌಡ ಪಾಟೀಲ ಬಯ್ಯಾಪೂರ ಹಾಗೂ ಹೇಮಲತಾ ನಾಯಕ, ಮುನಿರಾಬಾದ್ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರ ತುಂಗಭದ್ರಾ ಯೋಜನೆಯ ಅಧ್ಯಕ್ಷರಾದ ಹಸನಸಾಬ ನಬಿಸಾಬ ದೋಟಿಹಾಳ, ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಪ್ರಸನ್ನ ವಿ. ಗಡಾದ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ರೆಡ್ಡಿ ಶ್ರೀನಿವಾಸ ಅವರು ಆಗಮಿಸುವರು.
ವಿಶೇಷ ಆಹ್ವಾನಿತರಾಗಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳಾದ ಪ್ರಸಾದ ಎನ್.ವಿ ಮತ್ತು ಸಮಾಜ ಕಲ್ಯಾಣ ಇಲಾಖೆ ಸರಕಾರದ ಕಾರ್ಯದರ್ಶಿಗಳು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಕೆ.ಪಿ ‎ಮೋಹನರಾಜ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಆಯುಕ್ತರಾದ ಕೆ.ಎ. ದಯಾನಂದ್ ಅವರು ಆಗಮಿಸುವರು.
ಯಲಬುರ್ಗಾ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾದ ಶಂಕ್ರಯ್ಯ ಅಬ್ಬಿಗೇರಿಮಠ ಅವರು ಡಿ.ದೇವರಾಜ ಅರಸು ರವರ ಕುರಿತು ವಿಶೇಷ ಉಪನ್ಯಾಸ ನೀಡುವರು. ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಗಳಾದ ಡಾ. ಸುರೇಶ ಬಿ. ಇಟ್ನಾಳ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ವರ್ಣಿತ್ ನೇಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಡಾ.ರಾಮ್ ಎಲ್. ಅರಸಿದ್ದಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ನಾಗಮಣಿ ಹೊಸಮನಿ ಅವರು ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.
Total Views: 1
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
Share This Article