SCP-TSP projects progress review meeting
ಎಸ್ಸಿಪಿ-ಟಿಎಸ್ಪಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ
ಅರ್ಹ ಫಲಾನುಭವಿಗಳಿಗೆ ಸೌಲಭ್ಯ ತಲುಪಿಸಿ: ಜಿಲ್ಲಾಧಿಕಾರಿ ಡಾ.ಸುರೇಶ್ ಇಟ್ನಾಳ
ಕೊಪ್ಪಳ ಆಗಸ್ಟ್ 21 (ಕರ್ನಾಟಕ ವಾರ್ತೆ): ವಿವಿಧ ಇಲಾಖೆಗಳ ಮೂಲಕ ಎಸ್ಸಿಪಿ ಮತ್ತು ಟಿಎಸ್ಪಿ ಯೋಜನೆಗಳಡಿ ಇರುವ ಸೌಲಭ್ಯಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವಂತೆ ಜಿಲ್ಲಾಧಿಕಾರಿಗಳಾದ ಡಾ. ಸುರೇಶ್ ಬಿ. ಇಟ್ನಾಳ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳು ಕಚೇರಿ ಸಭಾಂಗಣದಲ್ಲಿ ಶುಕ್ರವಾರ (ಆ. 21ರಂದು) ನಡೆದ ಕರ್ನಾಟಕ ಅನುಸೂಚಿತ ಜಾತಿಗಳ ಉಪಯೋಜನೆ ಮತ್ತು ಬುಡಕಟ್ಟು ಉಪಯೋಜನೆ (ಯೋಜನೆ ರೂಪಿಸುವುದು, ಆರ್ಥಿಕ ಸಂಪನ್ಮೂಲಗಳ ಹಂಚಿಕೆ ಮತ್ತು ಬಳಕೆ) ಅಧಿನಿಯಮ–2013ರ ಅನ್ವಯ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಎಸ್ಸಿಪಿ ಮತ್ತು ಟಿಎಸ್ಪಿ ಯೋಜನೆಗಳಡಿ ಮೀಸಲಾದ ಅನುದಾನವು ಅರ್ಹ ಫಲಾನುಭವಿಗಳಿಗೆ ಸಮರ್ಪಕವಾಗಿ ತಲುಪುವಂತೆ ಅಧಿಕಾರಿಗಳು ಕ್ರಮವಹಿಸಬೇಕು. ಯೋಜನೆಗಳ ಅನುಷ್ಠಾನದಲ್ಲಿ ಯಾವುದೇ ವಿಳಂಬವಾಗದಂತೆ ನಿಗದಿತ ಅವಧಿಯಲ್ಲಿ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು. ಬಾಕಿ ಇರುವ ಕಾರ್ಯಗಳನ್ನು ತ್ವರಿತವಾಗಿ ಪೂರ್ಣಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಿ. ಈ ಅನುದಾನದ ಸಮರ್ಪಕ ಬಳಕೆಗೆ ಆದ್ಯತೆ ನೀಡಬೇಕು ಎಂದರು.
ಎಸ್ಸಿಪಿ-ಟಿಎಸ್ಪಿ ಯೋಜನೆಯ ಮೂಲ ಧ್ಯೇಯ ಮತ್ತು ಮಾನದಂಡಗಳಿಗೆ ಅನುಸಾರವಾಗಿ ಇಲಾಖೆಗಳು ಕಾರ್ಯನಿರ್ವಹಿಸಬೇಕು. ಈ ಯೋಜನೆಗಳನ್ನು ಜಾಗರೂಕತೆಯಿಂದ ನಿರ್ವಹಿಸಬೇಕು. ಯೋಜನೆಯಡಿ ಬಿಡುಗಡೆಯಾದ ಅನುದಾನವನ್ನು ಯಾವ ಉದ್ದೇಶಕ್ಕೆ ಬಳಸಲಾಗಿದೆ, ಯಾವ ಪ್ರದೇಶದಲ್ಲಿ ಕಾಮಗಾರಿ ಮಾಡಲಾಗಿದೆ ಎನ್ನುವ ಮಾಹಿತಿಯನ್ನು ಸ್ಪಷ್ಟವಾಗಿ ನೀಡಬೇಕು. ಅಲ್ಲದೇ ಇಲಾಖೆಗಳಿಗೆ ನಿಗದಿಪಡಿಸಲಾದ ಗುರಿಯನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಬೇಕು ಎಂದು ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ವರ್ಣಿತ್ ನೇಗಿ ಅವರು ಮಾತನಾಡಿ, ಎಸ್ಸಿಪಿ ಮತ್ತು ಟಿಎಸ್ಪಿ ಯೋಜನೆಗಳಡಿ ಕೈಗೊಳ್ಳಲಾಗುತ್ತಿರುವ ಕಾರ್ಯಕ್ರಮಗಳು ನಿಗದಿತ ಗುರಿಯಂತೆ ಅನುಷ್ಠಾನಗೊಳ್ಳಬೇಕು. ಅರ್ಹ ಫಲಾನುಭವಿಗಳನ್ನು ಗುರುತಿಸಿ, ಅವರಿಗೆ ಸರ್ಕಾರದ ಸೌಲಭ್ಯಗಳನ್ನು ಸಮರ್ಪಕವಾಗಿ ತಲುಪುವಂತೆ ಅಧಿಕಾರಿಗಳು ಕ್ರಮವಹಿಸಬೇಕು ಎಂದು ಸೂಚನೆ ನೀಡಿದರು.
ಸಭೆಯಲ್ಲಿ ಕರ್ನಾಟಕ ಅನುಸೂಚಿತ ಜಾತಿಗಳ ಉಪಯೋಜನೆ ಮತ್ತು ಬುಡಕಟ್ಟು ಉಪಯೋಜನೆ ಅಧಿನಿಯಮ 2013 ರನ್ವಯ ಅನುಸೂಚಿತ ಜಾತಿಗಳು ಉಪಯೋಜನೆ, ಬುಡಕಟ್ಟು ಉಪಯೋಜನೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ಕಾರ್ಯಕ್ರಮಗಳಕುರಿತು ಇಲಾಖಾ ವಾರು ಜುಲೈ 2026ರ ಅಂತ್ಯದವರೆಗಿನ ಪ್ರಗತಿ ಪರಿಶೀಲನೆ ನಡೆಯಿತು.
ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಅಜ್ಜಪ್ಪ ಸೂಗಲದ್, ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಜೆ.ಡಿ ಕೃಷ್ಣಮೂರ್ತಿ, ತೋಟಗಾರಿಕೆ ಇಲಾಖೆಯ ಜಂಟಿ ನಿರ್ದೇಶಕರಾದ ಕೃಷ್ಣ ಉಕ್ಕುಂದ್, ಪಶು ಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಉಪನಿರ್ದೇಶಕರಾದ ಡಾ. ಪಿ.ಎಂ.ಮಲ್ಲಯ್ಯ, ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರ ಇಲಾಖೆಯ ಉಪನಿರ್ದೇಶಕರಾದ ವಿಶ್ವನಾಥ್, ಮಹಿಳ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾದ ಅಮರೇಶ್, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಜಗದೀಶ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕರ್ಣಕುಮಾರ್, ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

Total Views:
0
ಜಾಹೀರಾತು