5 km Red Run Marathon on September 3: Opportunity for college students
ಸೆಪ್ಟೆಂಬರ್ 3ರಂದು 5 ಕಿ.ಮೀ. ರೆಡ್‌ರನ್ ಮ್ಯಾರಥಾನ್: ಕಾಲೇಜು ವಿದ್ಯಾರ್ಥಿಗಳಿಗೆ ಅವಕಾಶ
ಕೊಪ್ಪಳ ಆಗಸ್ಟ್ 24 (ಕರ್ನಾಟಕ ವಾರ್ತೆ): ಹೆಚ್‌ಐವಿ/ಏಡ್ಸ್ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ಕೊಪ್ಪಳ ಜಿಲ್ಲಾಡಳಿತ ಹಾಗೂ ಜಿಲ್ಲಾ ಏಡ್ಸ್ ನಿಯಂತ್ರಣ ಘಟಕದ ವತಿಯಿಂದ 5 ಕಿ.ಮೀ. ರೆಡ್‌ರನ್ ಮ್ಯಾರಥಾನ್ ಸ್ಪರ್ಧೆಯನ್ನು ಸೆಪ್ಟೆಂಬರ್ 3ರಂದು ಆಯೋಜಿಸಲಾಗಿದೆ.
ಕೊಪ್ಪಳ ಜಿಲ್ಲಾಡಳಿತ ಭವನದಿಂದ ನಗರದ ಗದಗ ರಸ್ತೆಯಲ್ಲಿರುವ ಜಿಲ್ಲಾ ಕ್ರೀಡಾಂಗಣದವರೆಗೆ ಸೆ. 3ರ ಬೆಳಿಗ್ಗೆ 7 ಗಂಟೆಗೆ ಮ್ಯಾರಥಾನ್ ನಡೆಯಲಿದ್ದು, 17ರಿಂದ 25 ವರ್ಷ ವಯೋಮಿತಿಯ ಕಾಲೇಜು ವಿದ್ಯಾರ್ಥಿಗಳು ಮಾತ್ರ ಈ ಸ್ಪರ್ಧೆಯಲ್ಲಿ ಭಾಗವಹಿಸಲು ಅರ್ಹರಾಗಿರುತ್ತಾರೆ.
ಹೆಚ್‌ಐವಿ/ಏಡ್ಸ್ ಕುರಿತು ಅರಿವು, ಸೇವಾ ಸೌಲಭ್ಯಗಳ ಮಾಹಿತಿ, ಕಳಂಕ ಮತ್ತು ತಾರತಮ್ಯ ತಡೆ, ಹೆಚ್‌ಐವಿ ಮತ್ತು ಏಡ್ಸ್ (ತಡೆ) ಕಾಯ್ದೆ-2017, ಹೆಚ್‌ಐವಿ ಟೆಸ್ಟಿಂಗ್ ಹಾಗೂ ಎಸ್.ಟಿ.ಐ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವುದು, ಈ ಮ್ಯಾರಥಾನ್‌ನ ಪ್ರಮುಖ ಉದ್ದೇಶವಾಗಿದೆ. ಉಚಿತ ರಾಷ್ಟ್ರೀಯ ಸಹಾಯವಾಣಿ 1097 ಬಗ್ಗೆಯೂ ಮಾಹಿತಿ ನೀಡಲಾಗುತ್ತದೆ.
ಸ್ಪರ್ಧೆಯಲ್ಲಿ ಪುರುಷ ಮತ್ತು ಮಹಿಳಾ ವಿಭಾಗಗಳಲ್ಲಿ ಪ್ರತ್ಯೇಕವಾಗಿ ಬಹುಮಾನ ನೀಡಲಾಗುತ್ತದೆ. ಪ್ರಥಮ ಬಹುಮಾನ 5,000 ರೂ., ದ್ವಿತೀಯ 3,500 ರೂ. ಹಾಗೂ ತೃತೀಯ 2,500 ರೂ.ಗಳನ್ನು ನಿಗದಿಪಡಿಸಲಾಗಿದೆ. ಪ್ರಥಮ ಬಹುಮಾನ ಪಡೆದ ಪುರುಷ ಹಾಗೂ ಮಹಿಳಾ ವಿದ್ಯಾರ್ಥಿಗಳು ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಕೊಪ್ಪಳ ಜಿಲ್ಲೆಯನ್ನು ಪ್ರತಿನಿಧಿಸಬೇಕಾಗುತ್ತದೆ.
ವಿಜೇತರಿಗೆ ಬಹುಮಾನದ ಮೊತ್ತವನ್ನು ಪಿಎಫ್‌ಎಂಎಸ್ ಮೂಲಕ ನೇರವಾಗಿ ಅವರ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗುವುದು. ಸ್ಪರ್ಧೆಯಲ್ಲಿ ಭಾಗವಹಿಸುವವರು ಕಡ್ಡಾಯವಾಗಿ ಕಾಲೇಜಿನ ಗುರುತಿನ ಚೀಟಿ, ಆಧಾರ್ ಕಾರ್ಡ್, ಕಾಲೇಜಿನ ಪ್ರಾಂಶುಪಾಲರ ದೃಢೀಕರಣ ಪತ್ರ ಹಾಗೂ ದೈಹಿಕ ಆರೋಗ್ಯ ಅರ್ಹತಾ (ಫೆಟ್ನೆಸ್ ಸರ್ಟಿಫಿಕೇಟ್) ಪ್ರಮಾಣ ಪತ್ರವನ್ನು ತರಬೇಕು. ದಾಖಲೆಗಳಿಲ್ಲದೆ ಹಾಜರಾದವರಿಗೆ ಸ್ಪರ್ಧೆಯಲ್ಲಿ ಭಾಗವಹಿಸಲು ಅವಕಾಶ ಇರುವುದಿಲ್ಲ. ನಿರ್ಣಾಯಕರ ತೀರ್ಮಾನವೇ ಅಂತಿಮವಾಗಿರುತ್ತದೆ.
ಈ ಸ್ಪರ್ಧೆಯಲ್ಲಿ ಜಿಲ್ಲೆಯ ಕಾಲೇಜುಗಳು ಅರ್ಹ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಸ್ಪರ್ಧೆಯ ಸದುಪಯೋಗ ಪಡೆದುಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ಮೊ.ಸಂ: 9449846981 ಅಥವಾ 9481732070 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Total Views:
0
ಜಾಹೀರಾತು