ಜಾಹೀರಾತು

Walk-in interview on August 29ಆ.29 ರಂದು ವಾಕ್ ಇನ್ ಇಂಟರ್ವ್ಯೂವ್
ಕೊಪ್ಪಳ ಆಗಸ್ಟ್ 25, (ಕರ್ನಾಟಕ ವಾರ್ತೆ): ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಆಗಸ್ಟ್ 29 ರಂದು ಬೆಳಿಗ್ಗೆ 10 ಗಂಟೆಯಿAದ ಮಧ್ಯಾಹ್ನ 1.30 ರವರೆಗೆ ಕೊಪ್ಪಳದಲ್ಲಿ ವಾಕ್ ಇನ್ ಇಂಟರ್ವ್ಯೂವನ್ನು ಆಯೋಜಿಸಲಾಗಿದೆ.
ಎಸ್.ಎಸ್.ಎಲ್.ಸಿ, ಪಿ.ಯು.ಸಿ. ಹಾಗೂ ಯಾವುದೇ ಪದವಿ ಪಡೆದ 18 ರಿಂದ 30 ವರ್ಷದ ಅರ್ಹ ನಿರುದ್ಯೋಗಿ ಯುವಕ ಮತ್ತು ಯುವತಿಯರು ಈ ವಾಕ್ ಇನ್ ಇಂಟರ್ವ್ಯೂನಲ್ಲಿ ಭಾಗವಹಿಸಬಹುದು. ದೃಢೀಕರಿಸಲಾದ ತಮ್ಮ ವಿದ್ಯಾರ್ಹತೆಯ ಎಲ್ಲ ಪ್ರಮಾಣ ಪತ್ರಗಳ 3 ಪ್ರತಿಗಳೊಂದಿಗೆ ಮತ್ತು ಆಧಾರ ಕಾರ್ಡಿನ ಪ್ರತಿ, ಬಯೋಡಾಟಾ ಹಾಗೂ ಪಾಸ್ ಪೋರ್ಟ್ ಅಳತೆಯ 2 ಭಾವಚಿತ್ರಗಳೊಂದಿಗೆ ಈ ವಾಕ್ ಇನ್ ಇಂಟರ್ವ್ಯೂವನಲ್ಲಿ ಭಾಗವಹಿಸಿ, ಉದ್ಯೋಗದ ನೆರವನ್ನು ಪಡೆಯಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಜಿಲ್ಲಾ ಆಡಳಿತ ಭವನ, ಮೊದಲನೇ ಮಹಡಿ, ಕೊಪ್ಪಳ ಇವರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
Total Views:
0
ಜಾಹೀರಾತು



