ಕೊಪ್ಪಳ ಅಂಚೆ ವಿಭಾಗ ವ್ಯಾಪ್ತಿಯಲ್ಲಿ ಏಕರೂಪ ಕಾರ್ಯನಿರ್ವಹಣಾ ಸಮಯ ನಿಗದಿ

H.Mallikarjun
H.Mallikarjun - Kalyanasiri
1 Min Read

Uniform operating hours fixed for the Koppal Postal Division

ಕೊಪ್ಪಳ ಅಂಚೆ ವಿಭಾಗ ವ್ಯಾಪ್ತಿಯಲ್ಲಿ ಏಕರೂಪ ಕಾರ್ಯನಿರ್ವಹಣಾ ಸಮಯ ನಿಗದಿ

ಜಾಹೀರಾತು

ಕೊಪ್ಪಳ ಆಗಸ್ಟ್ 27, (ಕರ್ನಾಟಕ ವಾರ್ತೆ): ಸಾರ್ವಜನಿಕರ ಅನುಕೂಲಕ್ಕಾಗಿ ಕೊಪ್ಪಳ ಅಂಚೆ ವಿಭಾಗದ ವ್ಯಾಪ್ತಿಯಲ್ಲಿರುವ ಎಲ್ಲಾ ಇಲಾಖಾ ಅಂಚೆ ಕಚೇರಿಗಳಾದ ಪ್ರಧಾನ ಅಂಚೆ ಕಚೇರಿ ಹಾಗೂ ಉಪ ಅಂಚೆ ಕಚೇರಿಗಳ ಕಾರ್ಯನಿರ್ವಹಣಾ ಸಮಯವನ್ನು ಬೆಳಿಗ್ಗೆ  9 ಗಂಟೆಯಿAದ ಸಂಜೆ 5 ಗಂಟೆಯವರೆಗೆ ಏಕರೂಪವಾಗಿ ನಿಗದಿಪಡಿಸಲಾಗಿದೆ.
ಈ ಸಮಯದಲ್ಲಿ ಸಾರ್ವಜನಿಕರಿಗೆ ಅಂಚೆ ಇಲಾಖೆಯ ವಿವಿಧ ಸೇವೆಗಳು ಲಭ್ಯವಿರುತ್ತವೆ. ಕೊಪ್ಪಳ ಪ್ರಧಾನ ಅಂಚೆ ಕಚೇರಿಯಲ್ಲಿ ಸ್ಪೀಡ್ ಪೋಸ್ಟ್ ಮತ್ತು ಪಾರ್ಸೆಲ್ ಬುಕ್ಕಿಂಗ್ ಸೇವೆಗಳು ರಾತ್ರಿ 8 ಗಂಟೆಯವರೆಗೆ ಲಭ್ಯವಿರುತ್ತವೆ. ಕೊಪ್ಪಳ ಅಂಚೆ ವಿಭಾಗದ ಇತರೆ ಎಲ್ಲಾ ಉಪ ಅಂಚೆ ಕಚೇರಿಗಳಲ್ಲಿ ಸ್ಪೀಡ್ ಪೋಸ್ಟ್, ಪಾರ್ಸೆಲ್ ಹಾಗೂ ಇತರೆ ಬುಕ್ಕಿಂಗ್ ಸೇವೆಗಳು ಬೆಳಿಗ್ಗೆ 9 ಗಂಟೆಯಿAದ ಸಂಜೆ 4.30 ಗಂಟೆಯವರೆಗೆ ಲಭ್ಯವಿರುತ್ತವೆ.
ಈ ಪರಿಷ್ಕೃತ ಸಮಯದಿಂದ ಸಾರ್ವಜನಿಕರು ತಮ್ಮ ಅಂಚೆ ವ್ಯವಹಾರಗಳನ್ನು ಹೆಚ್ಚಿನ ಅನುಕೂಲದಿಂದ ನಿರ್ವಹಿಸಬಹುದಾಗಿದೆ. ಸಾರ್ವಜನಿಕರು ಈ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳುವಂತೆ ಕೊಪ್ಪಳ ಅಂಚೆ ವಿಭಾಗದ ಅಂಚೆ ಅಧೀಕ್ಷಕರಾದ ನಾಗರಾಜ ಪಾಟೀಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Total Views: 0
ಜಾಹೀರಾತು
Share This Article