ಅಂಧ, ಶ್ರವಣದೋಷವುಳ್ಳ ಮಕ್ಕಳ ಶಿಕ್ಷಕರ ತರಬೇತಿಗೆ ಅರ್ಜಿ ಆಹ್ವಾನ

H.Mallikarjun
H.Mallikarjun - Kalyanasiri
2 Min Read
Invitation for teacher training applications for children who are blind or have hearing impairments
ಅಂಧ, ಶ್ರವಣದೋಷವುಳ್ಳ ಮಕ್ಕಳ ಶಿಕ್ಷಕರ ತರಬೇತಿಗೆ ಅರ್ಜಿ ಆಹ್ವಾನ
ಕೊಪ್ಪಳ ಆಗಸ್ಟ್ 28 (ಕರ್ನಾಟಕ ವಾರ್ತೆ): ಕರ್ನಾಟಕ ಸರ್ಕಾರದ ವತಿಯಿಂದ ಮೈಸೂರಿನಲ್ಲಿ ನಡೆಯುತ್ತಿರುವ ಅಂಧ ಹಾಗೂ ಶ್ರವಣದೋಷವುಳ್ಳ ಮಕ್ಕಳ ಶಿಕ್ಷಕರ ಸರ್ಕಾರೀ ತರಬೇತಿ ಕೇಂದ್ರದಲ್ಲಿ ಅಂಧ ಮತ್ತು ಶ್ರವಣದೋಷವುಳ್ಳ ಮಕ್ಕಳಿಗೆ ಶಿಕ್ಷಕರಾಗಲು ಬಯಸುವ ವಿದ್ಯಾರ್ಥಿಗಳಿಗಾಗಿ ಎರಡು ವರ್ಷಗಳ ವಿಶೇಷ ಡಿ.ಎಡ್ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.
ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕನಿಷ್ಠ ಶೇ. 50ರಷ್ಟು ಅಂಕಗಳೊಂದಿಗೆ ಉತ್ತೀರ್ಣರಾಗಿರುವ ವಿದ್ಯಾರ್ಥಿಗಳು ಸೆಪ್ಟೆಂಬರ್ 1 ರೊಳಗೆ ವೆಬ್‌ಸೈಟ್ https://nber-rehabcouncil.gov.in ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಈ ವಿಶೇಷ ತರಬೇತಿ ಕೋರ್ಸ್ಗಳು ಸಾಮಾನ್ಯ ಡಿ.ಎಡ್ ತರಬೇತಿಗೆ ಸಮಾನಾಂತರವಾಗಿದ್ದು, ವಿಕಲಚೇತನರು ಸೇರಿದಂತೆ ಸಾಮಾನ್ಯ ವಿದ್ಯಾರ್ಥಿಗಳೂ ಅರ್ಜಿ ಸಲ್ಲಿಸಬಹುದು.
ತರಬೇತಿ ಕಾರ್ಯಕ್ರಮಗಳು ಸಂಪೂರ್ಣ ಉಚಿತವಾಗಿದ್ದು, ಯಾವುದೇ ಬೋಧನಾ ಶುಲ್ಕ ಇರುವುದಿಲ್ಲ. ಮೈಸೂರಿನ ಹೆಲೆನ್ ಕೆಲ್ಲರ್ ಸರ್ಕಾರಿ ದೃಷ್ಟಿವಿಕಲ ಮಕ್ಕಳ ಶಿಕ್ಷಕರ ತರಬೇತಿ ಕೇಂದ್ರದಲ್ಲಿ D.Ed.Spl.Ed(VI) (KK016) ಹಾಗೂ ಸರ್ಕಾರಿ ಶ್ರವಣದೋಷವುಳ್ಳ ಮಕ್ಕಳ ಶಿಕ್ಷಕರ ತರಬೇತಿ ಕೇಂದ್ರದಲ್ಲಿ D.Ed.Spl.Ed(HI) (KK015) ತರಬೇತಿ ನೀಡಲಾಗುತ್ತದೆ.
ತರಬೇತಿ ಪೂರ್ಣಗೊಳಿಸಿದ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರದ ಸಾಮಾನ್ಯ ಹಾಗೂ ವಿಶೇಷ ಶಾಲೆಗಳಲ್ಲಿ ಶಿಕ್ಷಕರಾಗಿ ಕಾರ್ಯನಿರ್ವಹಿಸುವ ಅವಕಾಶವಿದೆ. ವಿಕಲಚೇತನರ ಇಲಾಖೆಯಡಿ ಬರುವ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳು, ಸಿಬಿಎಸ್‌ಇ ಶಾಲೆಗಳು, ಸರ್ವ ಶಿಕ್ಷಣ ಅಭಿಯಾನದಲ್ಲಿ ಸಂಪನ್ಮೂಲ ಶಿಕ್ಷಕರು, ಜಿಲ್ಲಾ ಆಸ್ಪತ್ರೆಗಳಲ್ಲಿ ಸಂಪನ್ಮೂಲ ವ್ಯಕ್ತಿಗಳು ಹಾಗೂ ರಾಷ್ಟ್ರೀಯ ಮತ್ತು ಪ್ರಾದೇಶಿಕ ಸಂಸ್ಥೆಗಳಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಕಾರ್ಯನಿರ್ವಹಿಸಬಹುದಾಗಿದೆ. ಅಲ್ಲದೆ, ಮಾತಿನ ತರಬೇತಿ ಘಟಕಗಳಲ್ಲಿಯೂ ಉದ್ಯೋಗಾವಕಾಶ ಪಡೆಯಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರು (ತರಬೇತಿ), ರವರ ಕಛೇರಿ ಅಂಧ ಹಾಗೂ ಶ್ರವಣದೋಷವುಳ್ಳ ಮಕ್ಕಳ ಶಿಕ್ಷಕರ ಸರ್ಕಾರಿ ತರಬೇತಿ ಕೇಂದ್ರ, ಪುಲಿಕೇಶಿ ರಸ್ತೆ, ತಿಲಕ್‌ನಗರ, ಮೈಸೂರು-570001, ದೂರವಾಣಿ: 0821-2491600, ಇಲ್ಲಿಗೆ ಅಥವಾ ಹೆಚ್ಚಿನ ಮಾಹಿತಿಗಾಗಿ ಆಶಾ ವಿ. ಹೀರೆಮಠ್ ಮೊ.ಸಂ: 9113561620, ಟಿ.ಡಿ. ಮಂಜುನಾಥ್ ಮೊ.ಸಂ: 9686762378, ಮುರಳಿ ಹೆಚ್.ಹೆಚ್. ಮೊ.ಸಂ: 7829115275, ಮಹದೇವನಾಯಕ ಕೆ. ಮೊ.ಸಂ: 9611773697, ಉಮೇಶ ಡಿ. ಮೊ.ಸಂ: 9743503262 ಹಾಗೂ ಉಷಾರಾಣಿ ಎನ್.ಎಸ್. ಮೊ.ಸಂ: 636296240 ಇವರನ್ನು ಸಂಪರ್ಕಿಸಬಹುದು ಎಂದು ಕೊಪ್ಪಳ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.
Total Views: 0
ಜಾಹೀರಾತು
Share This Article