Yalaburga: Public dialogue to prevent cruelty against children
ಯಲಬುರ್ಗಾ: ಮಕ್ಕಳ ಮೇಲಿನ ದೌರ್ಜನ್ಯ ತಡೆಗೆ ಜನಸಂಪರ್ಕ ಸಂವಾದ
ಕೊಪ್ಪಳ ಆಗಸ್ಟ್ 28 (ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಜಿಲ್ಲಾ ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಕೊಪ್ಪಳ ಮತ್ತು ಯಲಬುರ್ಗಾ ಪಟ್ಟಣದ ಡಿ. ದೇವರಾಜ ಅರಸು ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯದ ಸಂಯುಕ್ತಾಶ್ರಯದಲ್ಲಿ “ಮಕ್ಕಳ ಮೇಲಿನ ದೌರ್ಜನ್ಯ ತಡೆಗಾಗಿ ಜನಸಂಪರ್ಕ ಸಂವಾದ ಕಾರ್ಯಕ್ರಮ” ವನ್ನು ಇತ್ತೀಚೆಗೆ ವಸತಿ ನಿಲಯದಲ್ಲಿ ಆಯೋಜಿಸಲಾಯಿತು.
ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ರಕ್ಷಣಾಧಿಕಾರಿ (ಅಸಾಂಸ್ಥಿಕ) ರವಿ ಬಡಿಗೇರ ಮಾತನಾಡಿ, ಪೋಷಣೆ ಮತ್ತು ರಕ್ಷಣೆ ಅಗತ್ಯವಿರುವ ಯಾವುದೇ ಮಗು ಕಂಡುಬAದಲ್ಲಿ ಮಕ್ಕಳ ಸಹಾಯವಾಣಿ 1098ಕ್ಕೆ ಕರೆ ಮಾಡಿ ಮಾಹಿತಿ ನೀಡಬೇಕು. ಮಾಹಿತಿ ದೊರೆತ ತಕ್ಷಣ ತಂಡವು ಮಗುವಿರುವ ಸ್ಥಳಕ್ಕೆ ತೆರಳಿ ಮಗುವನ್ನು ರಕ್ಷಿಸಿ, ಮುಂದಿನ ಪೋಷಣೆ ಮತ್ತು ರಕ್ಷಣೆಗಾಗಿ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯ ಮುಂದೆ ಹಾಜರುಪಡಿಸಲಿದೆ ಎಂದು ತಿಳಿಸಿದರು.
ಬೇಡವಾದ ಮಗುವನ್ನು ಕಸದ ತೊಟ್ಟಿ, ಮೋರಿ, ದೇವಸ್ಥಾನ ಅಥವಾ ರಸ್ತೆಬದಿಯಲ್ಲಿ ಬಿಸಾಡುವುದು ಕಾನೂನುಬಾಹಿರ, ಅಮಾನವೀಯ ಹಾಗೂ ಅಪಾಯಕಾರಿ ಕೃತ್ಯವಾಗಿದೆ. ಇಂತಹ ಮಕ್ಕಳನ್ನು ಎಲ್ಲೆಂದರಲ್ಲಿ ಬಿಸಾಡದೆ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಗೆ ಒಪ್ಪಿಸಬೇಕು. ಸಮಿತಿಯು ಕಾನೂನುಬದ್ಧವಾಗಿ ಮಗುವಿನ ಪುನರ್ವಸತಿ ಮತ್ತು ದತ್ತು ಪ್ರಕ್ರಿಯೆಗೆ ಕ್ರಮ ಕೈಗೊಂಡು ಮಗುವಿಗೆ ಸುರಕ್ಷಿತ ಬದುಕು ಕಲ್ಪಿಸುತ್ತದೆ. ಮಗುವನ್ನು ಸಮಿತಿಯ ವಶಕ್ಕೆ ಒಪ್ಪಿಸುವ ಪೋಷಕರ ವಿವರಗಳನ್ನು ಗೌಪ್ಯವಾಗಿಡಲಾಗುವುದು ಎಂದರು.
ಪೋಷಕತ್ವ ಯೋಜನೆಯಡಿ 6ರಿಂದ 18 ವರ್ಷದೊಳಗಿನ ಜೈವಿಕ ಪೋಷಕರಿಲ್ಲದ ಮಕ್ಕಳನ್ನು ಆರೈಕೆ ಮತ್ತು ಪೋಷಣೆ ಮಾಡಲು ಇಚ್ಛಿಸುವ ದಂಪತಿಗಳು ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯನ್ನು ಸಂಪರ್ಕಿಸಬಹುದು ಎಂದು ಮಾಹಿತಿ ನೀಡಿದರು.
ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಮಾಜ ಕಾರ್ಯಕರ್ತೆ ಪ್ರತಿಭಾ ಕಾಶಿಮಠ ಮಾತನಾಡಿ, ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆಗಟ್ಟಲು ಸರ್ಕಾರ ಹಲವು ಕಾನೂನುಗಳನ್ನು ಜಾರಿಗೊಳಿಸಿದ್ದು, ಅವುಗಳಲ್ಲಿ ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣಾ ಕಾಯ್ದೆ (ಪೋಕ್ಸೊ)-2012, ತಿದ್ದುಪಡಿ-2019 ಪ್ರಮುಖವಾಗಿದೆ. 18 ವರ್ಷದೊಳಗಿನ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ, ಲೈಂಗಿಕ ಕಿರುಕುಳ ಹಾಗೂ ಇಂತಹ ಕೃತ್ಯಗಳಿಗೆ ಸಹಾಯ, ಪ್ರೋತ್ಸಾಹ ಅಥವಾ ಪ್ರಯತ್ನಿಸುವವರಿಗೆ ಕಾನೂನಿನಡಿ ಕಠಿಣ ಶಿಕ್ಷೆ ವಿಧಿಸಲಾಗುತ್ತದೆ ಎಂದು ತಿಳಿಸಿದರು.
ಸಾಮಾಜಿಕ ಜಾಲತಾಣಗಳ ಪ್ರಭಾವದಿಂದ ಪ್ರೀತಿ-ಪ್ರೇಮದ ಹೆಸರಿನಲ್ಲಿ ಅಪ್ರಾಪ್ತ ವಯಸ್ಸಿನ ಮಕ್ಕಳು ಕಾನೂನಿನ ವ್ಯಾಪ್ತಿಗೆ ಸಿಲುಕುತ್ತಿರುವುದು ಕಂಡುಬರುತ್ತಿದೆ. ಅದೇ ರೀತಿ ಅಪ್ರಾಪ್ತ ವಯಸ್ಸಿನ ಮಕ್ಕಳಿಗೆ ವಿವಾಹ ಮಾಡುವುದು, ಆಯೋಜಿಸುವುದು ಅಥವಾ ಪ್ರೋತ್ಸಾಹಿಸುವುದು ಕಾನೂನುಬಾಹಿರವಾಗಿದ್ದು, ಬಾಲ್ಯವಿವಾಹ ನಿಷೇಧ ಕಾಯ್ದೆಯಡಿ ಶಿಕ್ಷೆಗೆ ಒಳಪಡಿಸಲಾಗುತ್ತದೆ ಎಂದರು.
ಬಾಲ್ಯವಿವಾಹದಿಂದ ತಾಯಿ ಮರಣ, ಶಿಶು ಮರಣ ಹಾಗೂ ಅಪೌಷ್ಟಿಕತೆ ಸೇರಿದಂತೆ ಹಲವು ಗಂಭೀರ ಸಮಸ್ಯೆಗಳು ಉಂಟಾಗುತ್ತವೆ. ಆದ್ದರಿಂದ ಗ್ರಾಮ ಮಟ್ಟದ ಮಕ್ಕಳ ರಕ್ಷಣಾ ಸಮಿತಿಗಳ ಮೂಲಕ ಮಕ್ಕಳ ಹಕ್ಕುಗಳು, ಕಾನೂನುಗಳು ಮತ್ತು ಮಕ್ಕಳ ಸುರಕ್ಷತೆ ಕುರಿತು ವ್ಯಾಪಕ ಜಾಗೃತಿ ಮೂಡಿಸಿ, ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಹಾಗೂ ಬಾಲ್ಯವಿವಾಹ ತಡೆಗೆ ಎಲ್ಲರೂ ಸಹಕರಿಸಬೇಕು ಎಂದು ಅವರು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಯಲಬುರ್ಗಾ ವಸತಿ ನಿಲಯದ ಪಾಲಕರಾದ ಫಯಾಜ್ ಪ್ರಾಸ್ತಾವಿಕವಾಗಿ ಮಾತನಾಡಿದರು. ವಸತಿ ನಿಲಯದ ಮೇಲ್ವಿಚಾರಕಿ ಶಂಕರಮ್ಮ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು. ದೇವರಾಜ್ ತಿಲಗರ ಕಾರ್ಯಕ್ರಮ ನಿರೂಪಿಸಿದರು. ರಮೇಶ್ ವಂದಿಸಿದರು

Total Views:
0
ಜಾಹೀರಾತು