Karnataka Music and Dance Academy: Call for applications for student stipend
ರ್ನಾಟಕ ಸಂಗೀತ ನೃತ್ಯಕ ಅಕಾಡೆಮಿ: ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನ
ಕೊಪ್ಪಳ ಆಗಸ್ಟ್ 29, (ಕರ್ನಾಟಕ ವಾರ್ತೆ): ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ವತಿಯಿಂದ ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ, ನೃತ್ಯ, ಸುಗಮ ಸಂಗೀತ, ಕಥಾಕೀರ್ತನ ಮತ್ತು ಗಮಕ ಈ ಆರು ಕಲಾಕ್ಷೇತ್ರದಲ್ಲಿ ಅಭ್ಯಾಸ ಮಾಡುತ್ತಿರುವ 16 ರಿಂದ 24 ವರ್ಷ ವಯೋಮಾನದ ಒಳಗಿರುವ ಅಭ್ಯರ್ಥಿಗಳಿಂದ ಶಿಷ್ಯವೇತನಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
2026-27ನೇ ಸಾಲಿನ ಶಿಷ್ಯವೇತನಕ್ಕೆ, ಆಯ್ಕೆ, ಪ್ರಕ್ರಿಯೆಯನ್ನು ಮೊಬೈಲ್ ಅಥವಾ ವಿಡಿಯೋ ಚಿತ್ರೀಕರಣದ ಮೂಲಕ ಆಯ್ಕೆ ಮಾಡಲು ಅಕಾಡೆಮಿ ತೀರ್ಮಾನಿಸಿದ್ದು, ಶಿಷ್ಯವೇತನ ಅರ್ಜಿಗಳ ಬಗ್ಗೆ ಅಕಾಡೆಮಿ ಫೇಸ್ ಬುಕ್ ನಲ್ಲಿ facebook.com/
ಸಂದರ್ಶನದ ಬದಲಿಗೆ ಅಭ್ಯರ್ಥಿಗಳು ಇನ್ನು ಮುಂದೆ ಅರ್ಜಿಯಲ್ಲಿ ನೀಡಿರುವ ಪಠ್ಯಕ್ರಮವನ್ನು ಮೊಬೈಲ್ ಹಾಗೂ ವಿಡಿಯೋ ಚಿತ್ರೀಕರಿಸಿ, ಪೆನ್ ಡ್ರೆöÊವ್ ನಲ್ಲಿ ಅಳವಡಿಸಿ ಪೆನ್ ಡ್ರೆöÊವ್ ನೊಂದಿಗೆ ಅರ್ಜಿಯನ್ನು ರಿಜಿಸ್ಟಾçರ್, ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ, ಕನ್ನಡ ಭವನ, 2ನೇ ಮಹಡಿ, ಜೆ.ಸಿ.ರಸ್ತೆ, ಬೆಂಗಳೂರು-560 002 ಕಾರ್ಯಾಲಯಕ್ಕೆ ಅಂಚೆ ಮೂಲಕ ಅಥವಾ ಖುದ್ದಾಗಿ ತಲುಪಿಸಬಹುದು. ಈ ರೀತಿಯಾಗಿ ಬಂದ ಅರ್ಜಿಗಳನ್ನು ಆಯಾ ಕಲಾ ಪ್ರಕಾರಕ್ಕೆ ಅನುಗುಣವಾಗಿ ತೀರ್ಪುಗಾರರು ಅಭ್ಯರ್ಥಿಗಳು ಚಿತ್ರೀಕರಿಸಿ ಕಳುಹಿಸಿಕೊಟ್ಟಿರುವ ಪೆನ್ ಡ್ರೆöÊವ್ ಅನ್ನು ಪರಿಶೀಲಿಸಿ ಶಿಷ್ಯವೇತನಕ್ಕೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಪಠ್ಯಕ್ರಮ ಚಿತ್ರೀಕರಿಸಿದ ಪೆನ್ ಡ್ರೆöÊವ್‌ನೊಂದಿಗೆ ಅರ್ಜಿಯನ್ನು ಸಲ್ಲಿಸಲು ಸೆಪ್ಟೆಂಬರ್ 15 ಕೊನೆಯ ದಿನವಾಗಿದ್ದು, ತೀರ್ಪುಗಾರರ ತೀರ್ಮಾನವೇ ಅಂತಿಮವಾಗಿರುತ್ತದೆ ಎಂದು ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯ ರಿಜಿಸ್ಟಾçರ್ ಎನ್.ನರೇಂದ್ರಬಾಬು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Total Views:
0
ಜಾಹೀರಾತು

