ಏಡ್ಸ್ ಸೋಂಕಿತರಿಗೆ ಸಾಮಾಜಿಕ ಸೌಲಭ್ಯ ಕಲ್ಪಿಸಿ: ಜಿಲ್ಲಾಧಿಕಾರಿ ಡಾ. ಸುರೇಶ ಇಟ್ನಾಳ

H.Mallikarjun
H.Mallikarjun - Kalyanasiri
2 Min Read

Provide social benefits to AIDS patients: District Commissioner Dr. Suresh Itnal

ಏಡ್ಸ್ ಸೋಂಕಿತರಿಗೆ ಸಾಮಾಜಿಕ ಸೌಲಭ್ಯ ಕಲ್ಪಿಸಿ: ಜಿಲ್ಲಾಧಿಕಾರಿ ಡಾ. ಸುರೇಶ ಇಟ್ನಾಳ


ಕೊಪ್ಪಳ ಆಗಸ್ಟ್ 29, (ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿರುವ ಹೆಚ್‌ಐವಿ, ಏಡ್ಸ್ ಸೋಂಕಿತರಿಗೆ ಸಾಮಾಜಿಕ ಸೌಲಭ್ಯಗಳನ್ನು ಮತ್ತು ಸರ್ಕಾರದ ವಿವಿಧ ಇಲಾಖೆಗಳಿಂದ ಕಲ್ಪಿಸಬೇಕಿರುವ ಸೌಲಭ್ಯವನ್ನು ದೊರಕಿಸಲು ಅಧಿಕಾರಿಗಳು ಹಾಗೂ ಸ್ವಯಂ ಸೇವಾ ಸಂಸ್ಥೆಗಳು ಶ್ರಮಿಸಬೇಕು ಎಂದು ಎಂದು ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ ಹೇಳಿದರು.
ಆಗಸ್ಟ್ 25 ರಂದು ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಏಡ್ಸ್ ನಿಯಂತ್ರಣ ಕಾರ್ಯಕ್ರಮದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಹೆಚ್‌ಐವಿ, ಏಡ್ಸ್ ಸೋಂಕಿತರಿಗೆ ಸ್ವಯಂ ಸೇವಾ ಸಂಸ್ಥೆಗಳು ಬೆಂಬಲವಾಗಿ ನಿಂತು, ಅವರಿಗೆ ನೆರವಿನ ಹಸ್ತ ಚಾಚಬೇಕಿದೆ. ಹೆಚ್‌ಐವಿ, ಏಡ್ಸ್ ಪೀಡಿತರಿಗಾಗಿಯೇ ಸರ್ಕಾರ ಹಲವು ಸೌಲಭ್ಯಗಳನ್ನು ಕಲ್ಪಿಸಿದ್ದು, ಅಂತ್ಯೋದಯ ಅನ್ನ ಪಡಿತರ ಚೀಟಿ, ಮಾಸಾಶನ, ವಸತಿ ಕಲ್ಪಿಸುವುದು, ಉಚಿತ ಚಿಕಿತ್ಸೆ ಹೀಗೆ ವಿವಿಧ ಕಾರ್ಯಕ್ರಮಗಳಿವೆ. ಅವರಿಗೆ ಈ ಎಲ್ಲಾ ಸೌಲ್ಯಭಗಳು ದೊರೆಯುವಂತಾಗಲಿ. ಅಲ್ಲದೇ ಇಂತಹ ಯೋಜನೆಗಳನ್ನು ಅನುಷ್ಠಾನಗೊಳಿಸುವಾಗ ಸಾಮಾಜಿಕ ಹಿತದೃಷ್ಟಿಯಿಂದ ಹೆಚ್‌ಐವಿ, ಏಡ್ಸ್ ಸೋಂಕಿತರ ವಿವರಗಳ ಗೌಪ್ಯತೆ ಕಾಪಾಡುವುದರ ಬಗ್ಗೆಯೂ ವಿಶೇಷ ಗಮನ ಹರಿಸಬೇಕು ಎಂದರು.
ಜಿಲ್ಲೆಯಲ್ಲಿ ಏಡ್ಸ್ ನಿಯಂತ್ರಣಕ್ಕೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಹೆಚ್ಚಿನ ಆದ್ಯತೆ ನೀಡಬೇಕು. ಈ ರೋಗ ಹರಡುವಿಕೆಯ ಬಗ್ಗೆ ಸೂಕ್ಷö್ಮ ಪ್ರದೇಶಗಳನ್ನು ಗುರುತಿಸಿ, ಅಂತಹ ಕಡೆಗಳಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ನಿರಂತರವಾಗಿ ವಿಶೇಷ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಏಡ್ಸ್ ನಿಯಂತ್ರಣಕ್ಕೆ ಕ್ರಮ ವಹಿಸಬೇಕು. ಜಿಲ್ಲೆಯ ಬ್ಲಡ್ ಬ್ಯಾಂಕುಗಳು ಕೆಪಿಎಂಇ ಕಾಯ್ದೆಯಡಿ ಕಡ್ಡಾಯವಾಗಿ ನೋಂದಣಿಯಾಗಿರಬೇಕು. ತಪ್ಪಿದಲ್ಲಿ ಅಂತಹ ಬ್ಲಡ್ ಬ್ಯಾಂಕುಗಳ ಮೇಲೆ ಕಾನೂನು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳು ಸಂಬAಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಭೆಯಲ್ಲಿ ಉಪವಿಭಾಗಾಧಿಕಾರಿ ಮಹಮ್ಮದ್ ಜೀಲಾನಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಈಶ್ವರ ಸವಡಿ, ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ.ಶಶಿಧರ, ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿಗಳಾದ ಡಾ. ಪ್ರಕಾಶ ವಿ., ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ರವೀಂದ್ರನಾಥ ಎಂ.ಎಚ್., ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿ ಡಾ.ಪ್ರಕಾಶ ಎಚ್., ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ. ಗೋನಾಳ ಕುಮಾರಸ್ವಾಮಿ, ಜಿಲ್ಲಾ ಆಯುಷ್ ಅಧಿಕಾರಿ ಡಾ. ಪರ್ವತಗೌಡ ಹಿರೇಗೌಡ್ರ ಹಾಗೂ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ವಿವಿಧ ತಾಲ್ಲೂಕುಗಳ ಆರೋಗ್ಯಾಧಿಕಾರಿಗಳು, ಕೊಪ್ಪಳ ಕಿಮ್ಸ್ ತಜ್ಞ ವೈದ್ಯರು, ವಿವಿಧ ಆರೋಗ್ಯ ಸಂಸ್ಥೆಗಳ ವೈದ್ಯಾಧಿಕಾರಿಗಳು ಹಾಗೂ ಆರೋಗ್ಯ ಇಲಾಖೆಯ ಇತರೆ ಅಧಿಕಾರಿಗಳು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.
Total Views: 0
ಜಾಹೀರಾತು
Share This Article