Sandeepani Student Scholarship: Call for Applications
ಸಾಂದೀಪನಿ ಶಿಷ್ಯವೇತನ: ಅರ್ಜಿ ಆಹ್ವಾನ
ಜಾಹೀರಾತು

ಕೊಪ್ಪಳ ಆಗಸ್ಟ್ 29, (ಕರ್ನಾಟಕ ವಾರ್ತೆ): 2026-27 ನೇ ಸಾಲಿನ ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ವತಿಯಿಂದ ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯದ ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆಯಲು ಪ್ರೋತ್ಸಾಹಿಸುವ ಉದ್ದೇಶದಿಂದ ಮಂಡಳಿಯಿAದ ‘‘ಸಾಂದೀಪನಿ ಶಿಷ್ಯವೇತನ’’ ಯೋಜನೆಯನ್ನು ಜಾರಿಗೆ ತರಲಾಗಿದೆ.
ಈ ಯೋಜನೆಯ ಭಾಗ-1 ರ ಪ್ರಕಾರ ಪ್ರಥಮ, ದ್ವಿತೀಯ ಪಿ.ಯು ವಿದ್ಯಾರ್ಥಿಗಳಿಗೆ ಹಾಗೂ ಸಾಮಾನ್ಯ ಪದವಿ ಕೋರ್ಸ್ಗಳನ್ನು ವ್ಯಾಸಂಗ ಮಾಡುತ್ತಿರುವ ಪ್ರತಿ ವಿದ್ಯಾರ್ಥಿಗೆ ವಾರ್ಷಿಕ ನಿರ್ವಹಣಾ ವೆಚ್ಚ ರೂ.15,000/- ದಂತೆ ಶಿಷ್ಯವೇತನ ಪಾವತಿಸಲಾಗುವುದು. ಯೋಜನೆ ಭಾಗ-2 ರ ಪ್ರಕಾರ ಸಿಇಟಿ, ನೀಟ್ ಸೇರಿದಂತೆ ಸಾಮಾನ್ಯ ಪ್ರವೇಶ ಪರೀಕ್ಷೆಗಳ ಮೂಲಕ ಪದವಿ ಮತ್ತು ಸ್ನಾತಕೋತ್ತರ ಪದವಿಗಳಿಗೆ ದಾಖಲಾತಿ ಪಡೆದ ವಿದ್ಯಾರ್ಥಿಗಳಿಗೆ ಪ್ರವೇಶಾತಿ ಶುಲ್ಕದ 2/3 ಭಾಗದ ಮೊತ್ತವನ್ನು ಮರುಪಾವತಿ ಮಾಡಲಾಗುವುದು.
ಅರ್ಜಿ ಸಲ್ಲಿಸಬಯಸುವ ವಿದ್ಯಾರ್ಥಿಗಳು ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು. ಬ್ರಾಹ್ಮಣ ಸಮುದಾಯದ ಸಾಮಾನ್ಯ ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳು ಚಾಲ್ತಿಯಲ್ಲಿರುವ ಆರ್ಥಿಕವಾಗಿ ಹಿಂದುಳಿದ ಪ್ರಮಾಣಪತ್ರ ( EWS ಪ್ರಮಾಣ ಪತ್ರ) ಹೊಂದಿರಬೇಕು. ವೃತ್ತಿಪರ ಕೋರ್ಸ್ಗಳಿಗೆ ಮ್ಯಾನೇಜ್ಮೆಂಟ್ ಕೋಟಾ ಅಥವಾ ಕಾಮೆಡ್-ಕೆ ಅಡಿ ಪ್ರವೇಶಾತಿ ಪಡೆದ ವಿದ್ಯಾರ್ಥಿಗಳು ಶುಲ್ಕ ಮರುಪಾವತಿಗೆ ಅರ್ಹರಿರುವುದಿಲ್ಲ. ವಿದ್ಯಾರ್ಥಿಗಳ ಆಧಾರ್ ಗೆ ಮೊಬೈಲ್ ಸಂಖ್ಯೆ ಲಿಂಕ್ ಆಗಿರಬೇಕು ಮತ್ತು ಬ್ಯಾಂಕ್ ಖಾತೆ ಎನ್‌ಪಿಸಿಐ ಅಡಿ ಸೀಡ್ ಆಗಿರಬೇಕು.
ಆದ್ದರಿಂದ ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ www.ksbd.karnataka.gov.in ವೆಬ್‌ಸೈಟ್‌ನಲ್ಲಿ ನೋಂದಾಯಿಸಿಕೊAಡು ಡಿಸೆಂಬರ್ 31 ರವರೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ : 8029605888 ಹಾಗೂ 8762249230 ಗೆ ಬೆಳಿಗ್ಗೆ 10 ಗಂಟೆಯಿAದ ಸಂಜೆ 5.30 ಗಂಟೆಯವರೆಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Total Views:
0
ಜಾಹೀರಾತು

