ನವೋದಯ ವಿದ್ಯಾಲಯ: 9 ಮತ್ತು 11  ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

H.Mallikarjun
H.Mallikarjun - Kalyanasiri
1 Min Read

Navodaya Vidyalaya: Applications invited for admission to Classes 9 and 11.

ನವೋದಯ ವಿದ್ಯಾಲಯ: 9 ಮತ್ತು 11  ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

ಜಾಹೀರಾತು

ಕೊಪ್ಪಳ ಸೆಪ್ಟೆಂಬರ್ 02, (ಕರ್ನಾಟಕ ವಾರ್ತೆ): ಕುಕನೂರಿನ ಜವಾಹರ ನವೋದಯ ವಿದ್ಯಾಲಯದಲ್ಲಿ 2027-28 ರ ಶೈಕ್ಷಣಿಕ ಸಾಲಿಗೆ 9ನೇ ತರಗತಿ ಹಾಗೂ 11ನೇ ತರಗತಿಗೆ ಪ್ರವೇಶ ಪಡೆಯಲು ಪ್ರವೇಶ ಪರೀಕ್ಷೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
2026-27 ನೇ ಶೈಕ್ಷಣಿಕ ವರ್ಷದಲ್ಲಿ 8ನೇ ತರಗತಿ ಮತ್ತು 10 ನೇ ತರಗತಿಯಲ್ಲಿ ಸರ್ಕಾರಿ ಅಥವಾ ಸರ್ಕಾರದಿಂದ ಮಾನ್ಯತೆ ಪಡೆದ ಶಾಲೆಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. 9ನೇ ತರಗತಿಗೆ ಅರ್ಜಿ ಸಲ್ಲಿಸಲು  https://cbsceitms.nic.in/2026/nvsix_9     ಮತ್ತು 11ನೇ ತರಗತಿ ಅರ್ಜಿ ಸಲ್ಲಿಸಲು  https://cbsceitms.nic.in/2026/nvsix_11      ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ಅನುಕೂಲವಾಗುವಂತೆ ಇಂಟರ್‌ನೆಟ್ ಕೇಂದ್ರಗಳಲ್ಲಿ ಅರ್ಜಿಗಳನ್ನು ಸಲ್ಲಿಸಬಹುದು.ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 30 ಕೊನೆಯ ದಿನವಾಗಿದ್ದು, 2027 ರ ಏಪ್ರಿಲ್ 10 ರಂದು ಪ್ರವೇಶ ಪರೀಕ್ಷೆಗಳು ನಡೆಯಲಿವೆ ಎಂದು ನವೋದಯ ವಿದ್ಯಾಲಯದ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Total Views: 0
ಜಾಹೀರಾತು
Share This Article