ರಾಜಮಟ್ಟದ ಶಿಕ್ಷಕ ಪ್ರಶಸ್ತಿಗೆ ಕೆಎಂಸಿಆರ್‌ಐನ ಡಾ. ಎಸ್.ವೈ. ಮುಲ್ಕಿ ಪಾಟೀಲ್ ಆಯ್ಕೆ

H.Mallikarjun
H.Mallikarjun - Kalyanasiri
1 Min Read

Dr. S.Y. Mulki Patil of KMCRI selected for the state-level teacher award.




ರಾಜಮಟ್ಟದ ಶಿಕ್ಷಕ ಪ್ರಶಸ್ತಿಗೆ ಕೆಎಂಸಿಆರ್‌ಐನ ಡಾ. ಎಸ್.ವೈ. ಮುಲ್ಕಿ ಪಾಟೀಲ್ ಆಯ್ಕೆ

ಜಾಹೀರಾತು


ವೈದ್ಯಕೀಯ ಶಿಕ್ಷಣ ಕ್ಷೇತ್ರದ ಗಮನಾರ್ಹ ಸೇವೆಗೆ ಗೌರವ | ಸೆ. 5ರಂದು ಹುಬ್ಬಳ್ಳಿಯಲ್ಲಿ ಪ್ರಶಸ್ತಿ ಪ್ರದಾನ


ಹುಬ್ಬಳ್ಳಿ: ಅತ್ಯುತ್ತಮ ಶೈಕ್ಷಣಿಕ ಸಾಧನೆ ಹಾಗೂ ಶಿಕ್ಷಕರಾಗಿ ವೈದ್ಯಕೀಯ ವಿದ್ಯಾರ್ಥಿಗಳ ಜ್ಞಾನ, ಸಾಮರ್ಥ್ಯ, ಮೌಲ್ಯಗಳು ಮತ್ತು ಮೌಲ್ಯಾಧಾರಿತ ಮನೋಭಾವಗಳನ್ನು ಬೆಳೆಸುವಲ್ಲಿ ಸಲ್ಲಿಸಿರುವ ಗಮನಾರ್ಹ ಸೇವೆಯನ್ನು ಗುರುತಿಸಿ, 2026ನೇ ಸಾಲಿನ ಐಎಂಎ ಕರ್ನಾಟಕ ರಾಜ್ಯ ಶಾಖೆಯ ಶಿಕ್ಷಕರ ದಿನಾಚರಣೆ ಪ್ರಶಸ್ತಿಗೆ ಕೆಎಂಸಿಆರ್‌ಐನ ಶಸ್ತ್ರಚಿಕಿತ್ಸಾ ವಿಭಾಗದ ಪ್ರಾಧ್ಯಾಪಕರಾದ ಡಾ. ಎಸ್.ವೈ. ಮುಲ್ಕಿ ಪಾಟೀಲ್ ಅವರನ್ನು ಆಯ್ಕೆ ಮಾಡಲಾಗಿದೆ.
ವೈದ್ಯಕೀಯ ಶಿಕ್ಷಣ ಹಾಗೂ ಸಂಶೋಧನಾ ಕ್ಷೇತ್ರದಲ್ಲಿ ಗಮನಾರ್ಹ ಕೊಡುಗೆ ನೀಡಿರುವ ಡಾ. ಮುಲ್ಕಿ ಪಾಟೀಲ್ ಅವರು ಹಲವು ಸಂಶೋಧನಾತ್ಮಕ ಪ್ರಬಂಧಗಳನ್ನು ಮಂಡಿಸಿದ್ದು, ವಿವಿಧ ವೈಜ್ಞಾನಿಕ ಲೇಖನಗಳನ್ನು ಪ್ರಕಟಿಸುವ ಮೂಲಕ ವೈದ್ಯಕೀಯ ಕ್ಷೇತ್ರಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ.
ವಿದ್ಯಾರ್ಥಿಗಳಲ್ಲಿ ಕೇವಲ ಪಠ್ಯಜ್ಞಾನವಷ್ಟೇ ಅಲ್ಲದೆ, ವೈದ್ಯಕೀಯ ವೃತ್ತಿಗೆ ಅಗತ್ಯವಾದ ಸಾಮರ್ಥ್ಯ, ಮೌಲ್ಯಗಳು ಹಾಗೂ ವೃತ್ತಿಪರ ಮನೋಭಾವಗಳನ್ನು ಬೆಳೆಸುವಲ್ಲಿ ಅವರು ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಈ ಪ್ರತಿಷ್ಠಿತ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಸೆ. 5ರಂದು ಪ್ರಶಸ್ತಿ ಪ್ರದಾನ
ಪ್ರಶಸ್ತಿಯನ್ನು ಸೆಪ್ಟೆಂಬರ್ 5ರಂದು ಬೆಳಿಗ್ಗೆ 10 ಗಂಟೆಗೆ ಹುಬ್ಬಳ್ಳಿಯಲ್ಲಿ ನಡೆಯಲಿರುವ ಶಿಕ್ಷಕರ ದಿನಾಚರಣೆ ಹಾಗೂ ಐಎಂಎ–ಇಎಂಎಸ್ ರಾಷ್ಟ್ರೀಯ ಮಟ್ಟದ ಸಮ್ಮೇಳನದ ಉದ್ಘಾಟನಾ ಸಮಾರಂಭದಲ್ಲಿ ಪ್ರದಾನ ಮಾಡಲಾಗುವುದು.
ಈ ಕುರಿತು ಐಎಂಎ ಕರ್ನಾಟಕ ರಾಜ್ಯ ಶಾಖೆಯ ಅಧ್ಯಕ್ಷ ಡಾ. ಟಿ.ಎ. ವೀರಭದ್ರಯ್ಯ ಹಾಗೂ ಕಾರ್ಯದರ್ಶಿ ಡಾ. ಸುರಿರಾಜು ವಿ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Total Views: 0
ಜಾಹೀರಾತು
Share This Article