Meeting to review the progress of the five guarantee schemes
ಪಂಚ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ
ಜಾಹೀರಾತು

ಗ್ಯಾರಂಟಿ ಯೋಜನೆಗಳು ಬಡವರ ಸೇವೆಗೆ ನೀಡಿದ ಅವಕಾಶ: ಪಿ.ಟಿ ಪರಮೇಶ್ವರ ನಾಯ್ಕ
ಕೊಪ್ಪಳ ಸೆಪ್ಟೆಂಬರ್ 03, (ಕರ್ನಾಟಕ ವಾರ್ತೆ): ಗ್ಯಾರಂಟಿ ಯೋಜನೆಗಳು ಬಡವರ ಪಾಲಿನ ವರದಾನವಾಗಿದ್ದು, ಈ ಮೂಲಕ ಅವರ ಸೇವೆ ಮಾಡಲು ದೇವರು ನಮಗೆ ನೀಡಿದ ಅವಕಾಶವಾಗಿದೆ ಎಂದು ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ಪಿ.ಟಿ ಪರಮೇಶ್ವರ ನಾಯ್ಕ ಅವರು ಹೇಳಿದರು.
ಗುರುವಾರದಂದು ಜಿಲ್ಲಾ ಪಂಚಾಯತಿಯ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ನಡೆದ ಪಂಚ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪಂಚ ಗ್ಯಾರಂಟಿ ಯೋಜನೆಗಳನ್ನು ಬಡವರ ಕಲ್ಯಾಣಕ್ಕಾಗಿ ಜಾರಿ ಮಾಡಲಾಯಿತು. ಇಂದು ರಾಜ್ಯದ ಕೋಟ್ಯಂತರ ಅರ್ಹ ಫಲಾನುಭವಿಗಳಿಗೆ ನಮ್ಮ ಗ್ಯಾರಂಟಿ ಯೋಜನೆಗಳು ತಲುಪಿವೆ. ನಾವು ನೇರವಾಗಿ ಬಡವರ, ದುರ್ಬಲರ ಸೇವೆ ಮಾಡಲು ಎಲ್ಲ ಸಮಯದಲ್ಲೂ ಸಾಧ್ಯವಾಗುವುದಿಲ್ಲ. ಅದಕ್ಕಾಗಿಯೇ ದೇವರು ಇಂತಹ ಅವಕಾಶವನ್ನು ನಮಗೆ ನೀಡಿದ್ದು, ಇದನ್ನು ಎಲ್ಲ ಅಧಿಕಾರಿಗಳು ಜವಾಬ್ದಾರಿಯುತವಾಗಿ ನಿರ್ವಹಿಸಿ ಅರ್ಹರಿಗೆ ಯೋಜನೆಗಳ ಲಾಭ ತಲುಪಿಸಿ ಎಂದು ಅವರು ಹೇಳಿದರು.
ಪ್ರಸ್ತುತ ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಕಾರ್ಯ ನಡೆಯುತ್ತಿದೆ. ಇದರಲ್ಲಿ ಜಿಲ್ಲೆಯು ನಿರೀಕ್ಷೆ ಮೀರಿದ ಕಾರ್ಯವನ್ನು ಮಾಡಿದ್ದು, ಅಧಿಕಾರಿಗಳ ಕಾರ್ಯ ಅಭಿನಂದನಾರ್ಹವಾಗಿದೆ. ಇತರೆ ಜಿಲ್ಲೆಗಳಿಗಿಂತ ಕೊಪ್ಪಳ ಜಿಲ್ಲೆ ಹೆಚ್ಚಿನ ಪ್ರಗತಿ ಸಾಧಿಸಿದೆ. ಅದರಂತೆ ಗೃಹಲಕ್ಷಿö್ಮÃ ಯೋಜನೆಯಲ್ಲಿ ಫಲಾನುಭವಿಯ ಮರಣದ ನಂತರ ಅವರ ಖಾತೆಗೆ ಜಮೆಯಾದ ಹಣವನ್ನು ಡ್ರಾ ಮಾಡಿದ್ದಲ್ಲಿ ಅವರ ವಾರಸುದಾರರು ಅಥವಾ ಕುಟುಂಬದವರಿAದ ಅಂತಹ ಹಣವನ್ನು ಮರಳಿ ಸರ್ಕಾರಕ್ಕೆ ಮರುಪಾವತಿ ಮಾಡಲು ತಿಳಿಸಿ. ಭವಿಷ್ಯದಲ್ಲಿ ಇದು ಮರುಕಳಿಸದಂತೆ ಇಲಾಖಾ ಸಭೆ ನಡೆಸಿ ಸ್ಥಳೀಯ ಅಂಗನವಾಡಿ, ಆಶಾ ಕಾರ್ಯಕರ್ತೆಯರಿಗೆ, ಗ್ರಾಮ ಪಂಚಾಯತಿಗಳಿಗೆ ಮೃತ ಫಲಾನುಭವಿಯ ಮಾಹಿತಿಯನ್ನು ತಕ್ಷಣವೇ ನೀಡುವಂತೆ ಸೂಚಿಸಿ. ಮೃತರ ಖಾತೆಯನ್ನು ಸ್ಥಗಿತಗೊಳಿಸಿ ಹಾಗೂ ಇಲಾಖೆಯ ಫಲಾನುಭವಿ ಪಟ್ಟಿಯಿಂದ ಮೃತರ ಹೆಸರನ್ನು ರದ್ದುಪಡಿಸಿ ಎಂದು ಅವರು ಸೂಚನೆ ನೀಡಿದರು.
ಶಕ್ತಿ ಯೋಜನೆ ಜಾರಿಯಾದ ನಂತರ ಮಹಿಳಾ ಪ್ರಯಾಣಿಕರ ಸಂಖ್ಯೆ ಹೆಚ್ಚಳವಾಗಿದ್ದು, ಜಿಲ್ಲೆಯ ಎಲ್ಲ ಬಸ್ ನಿಲ್ದಾಣಗಳಲ್ಲಿ ಮಹಿಳೆಯರ ಸುರಕ್ಷತೆಗೆ ಸಿಸಿ ಕ್ಯಾಮೆರಾ, ಶೌಚಾಲಯ, ಶುದ್ಧ ಕುಡಿಯುವ ನೀರಿನ ವ್ಯವಸ್ಥೆಯನ್ನು ಕಡ್ಡಾಯವಾಗಿ ಮಾಡಬೇಕು. ಮಹಿಳೆಯರ ವಿಶ್ರಾಂತಿ ಹಾಗೂ ಅನುಕೂಲಕ್ಕಾಗಿ ಪ್ರತ್ಯೇಕ ಕೊಠಡಿಗಳನ್ನು ಒದಗಿಸಬೇಕು. ಎಲ್ಲ ಬಸ್ ನಿಲ್ದಾಣಗಳಲ್ಲಿ ನಿಗದಿತ ಸ್ಥಳದಲ್ಲಿಯೇ ಬಸ್ಗಳು ನಿಲ್ಲಬೇಕು. ಮುಖ್ಯಮಂತ್ರಿಗಳ ನಿರ್ದೇಶನದಂತೆ ಎಲ್ಲ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಿಸಬೇಕು. ಅಗತ್ಯವಿರುವೆಡೆ ಪರಿಶೀಲನೆ ನಡೆಸಿ ಹೆಚ್ಚುವರಿ ಬಸ್ಗಳನ್ನು ಒದಗಿಸಬೇಕು ಎಂದು ಅವರು ಕೆಕೆಆರ್ಟಿಸಿ ಡಿಸಿ ಅವರಿಗೆ ಸೂಚಿಸಿದರು.
ಗೃಹಜ್ಯೋತಿ ಯೋಜನೆ ಪರಿಷ್ಕರಣೆ ಕಾರ್ಯದಲ್ಲಿ ಜಿಲ್ಲೆಯು ಶೇ.86.18 ರಷ್ಟು ಪ್ರಗತಿ ಸಾಧಿಸಿದ್ದು ನಿಜಕ್ಕೂ ಸಂತಸದ ಸಂಗತಿಯಾಗಿದ್ದು, ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಕೊಪ್ಪಳ ಜಿಲ್ಲೆ ಪ್ರಥಮ ಸ್ಥಾನದಲ್ಲಿ ನಿಲ್ಲುತ್ತದೆ. ಬಾಕಿ ಉಳಿದ ಪರಿಷ್ಕರಣೆ ಕಾರ್ಯವನ್ನು ಶೀಘ್ರದಲ್ಲಿ ಪೂರ್ಣಗೊಳಿಸಿ ಎಂದು ಅವರು ಹೇಳಿದರು.
ಯುವನಿಧಿ ಯೋಜನೆಯಡಿ ಜಿಲ್ಲೆಯಲ್ಲಿ 15,804 ಫಲಾನುಭವಿಗಳು ನೋಂದಣಿ ಮಾಡಿಕೊಂಡಿದ್ದು, ಹೆಚ್ಚಿನ ಫಲಾನುಭವಿಗಳು ನೋಂದಣಿ ಮಾಡಿಕೊಳ್ಳುವಂತೆ ಜಾಗೃತಿ ಮೂಡಿಸಿ. ವಿಶ್ವ ವಿದ್ಯಾಲಯಗಳಲ್ಲಿ, ತಾಲ್ಲೂಕು ಮಟ್ಟದಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಿ. ಯೋಜನೆಯಡಿ ನೋಂದಣಿ ಮಾಡಿಕೊಳ್ಳುವ ಫಲಾನುಭವಿಗೆ ಯುವನಿಧಿ ಪ್ಲಸ್ ಕಾರ್ಯಕ್ರಮದಡಿ ತರಬೇತಿ ನೀಡಲಾಗುತ್ತದೆ. ಆದರೆ ತರಬೇತಿ ಕಡ್ಡಾತಿಯವಲ್ಲ. ಆಸಕ್ತರು ತರಬೇತಿ ಪಡೆಯಬಹುದು ಎಂಬುದನ್ನು ವಿದ್ಯಾರ್ಥಿಗಳಿಗೆ ಮನದಟ್ಟು ಮಾಡಿ. ಫಲಾನುಭವಿಗಳ ನೋಂದಣಿಯನ್ನು ಹೆಚ್ಚಿಸಿ ಎಂದು ಅವರು ತಿಳಿಸಿದರು.
ಅನ್ನಭಾಗ್ಯ ಯೋಜನೆಯಡಿ ಜಿಲ್ಲೆಯ ಎಲ್ಲ ಅರ್ಹ ಫಲಾನುಭವಿಗಳಿಗೆ ಪಡಿತರ ವಿತರಣೆಯಾಗಬೇಕು. ಎಲ್ಲ ನ್ಯಾಯಬೆಲೆ ಅಂಗಡಿಗಳಲ್ಲಿ ಲಭ್ಯವಿರುವ ದಾಸ್ತಾನಿನ ಮಾಹಿತಿ ಕಡ್ಡಾಯವಾಗಿ ಪ್ರದರ್ಶಿಸಬೇಕು. ನ್ಯಾಯಬೆಲೆ ಅಂಗಡಿ ಪರವಾನಿಗೆಯನ್ನು ನಿಯಮಾನುಸಾರ ನೀಡಬೇಕು. ಎಲ್ಲ ನ್ಯಾಯಬೆಲೆ ಅಂಗಡಿಗಳು ಸರ್ಕಾರದ ಆದೇಶದನ್ವಯ ನಿಗದಿತ ಸಮಯದಲ್ಲಿ ಪಡಿತರದಾರರಿಗೆ ಪಡಿತರ ವಿತರಿಸಬೇಕು ಎಂದು ಅವರು ಸಂಬAಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಪಂಚ ಗ್ಯಾರಂಟಿ ಯೋಜನೆಗಳನ್ನು ಬಡವರ ಅಭಿವೃದ್ಧಿಗಾಗಿ ಜಾರಿಗೆ ತರಲಾಗಿದ್ದು, ಅಭಿವೃದ್ಧಿ ವಿಷಯದಲ್ಲಿ ರಾಜಕೀಯ ಅಥವಾ ಅಕ್ರಮವನ್ನು ಸಹಿಸುವುದಿಲ್ಲ. ಅಧಿಕಾರಿಗಳು ಜವಾಬ್ದಾರಿಯುತವಾಗಿ ಕರ್ತವ್ಯ ನಿರ್ವಹಿಸಬೇಕು. ಪ್ರಸ್ತುತ ಯೋಜನೆಗಳ ಜಾರಿಯಲ್ಲಿರುವ ತಾಂತ್ರಿಕ ತೊಂದರೆಗಳನ್ನು ಶೀಘ್ರದಲ್ಲಿ ಬಗೆಹರಿಸಿ ಸುಗಮ ಪರಿಹಾರ ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು ಅವರು ಅಧಿಕಾರಿಗಳಿಗೆ ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ರೆಡ್ಡಿ ಶ್ರೀನಿವಾಸ ಸ್ವಾಗತಿಸಿದರು. ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ, ಜಿಲ್ಲಾ ಪಂಚಾಯತಿ ಉಪಕಾರ್ಯದರ್ಶಿ ಕೃಷ್ಣಮೂರ್ತಿ ಟಿ., ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಉಪಾಧ್ಯಕ್ಷರಾದ ಉಪಾಧ್ಯಕ್ಷರಾದ ಎಸ್.ಬಿ.ಖಾದ್ರಿ, ಮಂಜುನಾಥ ಗೊಂಡಬಾಳ, ಅಮರೇಶಪ್ಪ ಶರಣಪ್ಪ ಗಾಂಜಿ, ನಾಗರಾಜ ಅರಳಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಸದಸ್ಯರಾದ ಪೀರ್ ಸಾಬ್, ಬಾಲಚಂದ್ರ ಸ್ಯಾಮುವೆಲ್, ಶಕುಂತಲಾ ಬಿ.ಎಮ್., ಆನಂದ ಹಾಸಲ್ಮರ, ವೆಂಕಟೇಶ ಬಾಬು, ಸೇರಿದಂತೆ ವಿವಿಧ ಇಲಾಖೆಗಳ ಗ್ಯಾರಂಟಿ ಅನುಷ್ಠಾನ ಅಧಿಕಾರಿಗಳು, ತಾಲ್ಲೂಕು ಸಮಿತಿ ಅಧ್ಯಕ್ಷರು, ಸದಸ್ಯರು ಉಪಸ್ಥಿತರಿದ್ದರು.
Total Views:
0
ಜಾಹೀರಾತು


