ವಸತಿ ಸಹಿತ ಶೈಕ್ಷಣಿಕ, ಧಾರ್ಮಿಕ ಶಿಕ್ಷಣ ಸಂಸ್ಥೆಗಳ ನೋಂದಣಿ ಕಡ್ಡಾಯ; ಸೆ. 10ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಜಿಲ್ಲಾಧಿಕಾರಿ ಸೂಚನೆ

H.Mallikarjun
H.Mallikarjun - Kalyanasiri
2 Min Read

Registration of educational and religious institutions with accommodation is mandatory; District officer’s instruction to submit the application online by September 10

ವಸತಿ ಸಹಿತ ಶೈಕ್ಷಣಿಕ, ಧಾರ್ಮಿಕ ಶಿಕ್ಷಣ ಸಂಸ್ಥೆಗಳ ನೋಂದಣಿ ಕಡ್ಡಾಯ;
ಸೆ. 10ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಜಿಲ್ಲಾಧಿಕಾರಿ ಸೂಚನೆ
ಕೊಪ್ಪಳ ಸೆಪ್ಟೆಂಬರ್ 03 (ಕರ್ನಾಟಕ ವಾರ್ತೆ): ಮಕ್ಕಳ ಸುರಕ್ಷತೆ ಹಾಗೂ ಅವರಿಗೆ ಅಗತ್ಯವಿರುವ ಮೂಲಭೂತ ಸೌಲಭ್ಯಗಳ ಮೇಲ್ವಿಚಾರಣೆಯ ಉದ್ದೇಶದಿಂದ ಜಿಲ್ಲೆಯಲ್ಲಿರುವ ಸರಕಾರಿ, ಅನುದಾನಿತ, ಅನುದಾನರಹಿತ ಹಾಗೂ ಖಾಸಗಿ ವಸತಿ ಸಹಿತ ಶಾಲಾ-ಕಾಲೇಜುಗಳು, ವಸತಿ ನಿಲಯಗಳು, ತರಬೇತಿ ಕೇಂದ್ರಗಳು ಮತ್ತು ವಸತಿಯುತ ಧಾರ್ಮಿಕ ಶೈಕ್ಷಣಿಕ ಸಂಸ್ಥೆಗಳು ಕಡ್ಡಾಯವಾಗಿ ನೋಂದಣಿ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳಾದ ಡಾ. ಸುರೇಶ ಬಿ. ಇಟ್ನಾಳ ಅವರು ಸೂಚಿಸಿದ್ದಾರೆ.
ಕರ್ನಾಟಕ ಸರ್ಕಾರವು ಮಕ್ಕಳ ರಕ್ಷಣಾ ನೀತಿ-2016ರ ಅನುಷ್ಠಾನವನ್ನು ಕ್ರಮಬದ್ಧಗೊಳಿಸುವ ನಿಟ್ಟಿನಲ್ಲಿ 6ರಿಂದ 18 ವರ್ಷದೊಳಗಿನ ಮಕ್ಕಳಿಗಾಗಿ ವಿವಿಧ ಇಲಾಖೆಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ನಿಲಯಗಳು, ವಸತಿ ಶಾಲೆ-ಕಾಲೇಜುಗಳು, ಧಾರ್ಮಿಕ ಶಿಕ್ಷಣ ಸಂಸ್ಥೆಗಳು ಹಾಗೂ ಇತರೆ ವಸತಿ ಕೇಂದ್ರಗಳಲ್ಲಿ ಮಕ್ಕಳ ಸುರಕ್ಷತೆ ಮತ್ತು ಅವರಿಗೆ ಕಲ್ಪಿಸಿರುವ ಸೌಲಭ್ಯಗಳ ಮೇಲ್ವಿಚಾರಣೆಗಾಗಿ ಮಾರ್ಗಸೂಚಿಗಳನ್ನು ಜಾರಿಗೊಳಿಸಿದೆ.
ಈ ಮಾರ್ಗಸೂಚಿಗಳನ್ವಯ, ಮಾರ್ಗಸೂಚಿಗಳು ಜಾರಿಯಾದ ದಿನಾಂಕದಿAದ ಆರು ತಿಂಗಳೊಳಗಾಗಿ ಸಂಬಂಧಿಸಿದ ಸಂಸ್ಥೆಗಳು ನೋಂದಣಿಗಾಗಿ ಅರ್ಜಿ ಸಲ್ಲಿಸುವುದು ಕಡ್ಡಾಯವಾಗಿದೆ. ವಿವಿಧ ಇಲಾಖೆಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸರಕಾರಿ ವಸತಿ ಸಹಿತ ಶೈಕ್ಷಣಿಕ ಸಂಸ್ಥೆಗಳು ಹಾಗೂ ವಸತಿ ನಿಲಯಗಳು ಆಯಾ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳ ಮೂಲಕ ನೋಂದಣಿಗೆ ಅರ್ಜಿ ಸಲ್ಲಿಸಬೇಕು.
ಅದೇ ರೀತಿ, ಖಾಸಗಿ ಹಾಗೂ ಇತರೆ ವಸತಿಯುತ ಶೈಕ್ಷಣಿಕ ಸಂಸ್ಥೆಗಳು, ವಸತಿ ನಿಲಯಗಳು, ತರಬೇತಿ ಕೇಂದ್ರಗಳು (ಕೋಚಿಂಗ್ ಸೆಂಟರ್) ಮತ್ತು ವಸತಿ ಸಹಿತ ಧಾರ್ಮಿಕ ಶಿಕ್ಷಣ ಸಂಸ್ಥೆಗಳೂ ಸಹ ಕಡ್ಡಾಯವಾಗಿ ನೋಂದಣಿ ಮಾಡಿಕೊಳ್ಳಬೇಕು. ಕೊಪ್ಪಳ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಂಬಂಧಿಸಿದ ಎಲ್ಲ ಸಂಸ್ಥೆಗಳು ಸೆಪ್ಟೆಂಬರ್ 10 ರೊಳಗಾಗಿ https://koppal.nic.in/ ಜಾಲತಾಣದ ಮೂಲಕ ಆನ್‌ಲೈನ್‌ನಲ್ಲಿ ನೋಂದಣಿಗಾಗಿ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಅಥವಾ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಜಿಲ್ಲಾಡಳಿತ ಭವನ, ಕೊಪ್ಪಳ ಇವರನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.
Total Views: 0
ಜಾಹೀರಾತು
Share This Article