Forest Department Development Corporation: Applications invited under various schemes
ಕಾಡುಗೊಲ್ಲ ಅಭಿವೃದ್ಧಿ ನಿಗಮ: ವಿವಿಧ ಯೋಜನೆಗಳಡಿ ಅರ್ಜಿ ಆಹ್ವಾನ
ಕೊಪ್ಪಳ ಸೆಪ್ಟೆಂಬರ್ 05, (ಕರ್ನಾಟಕ ವಾರ್ತೆ): ಕರ್ನಾಟಕ ಕಾಡುಗೊಲ್ಲ ಅಭಿವೃದ್ಧಿ ನಿಗಮ ನಿಯಮಿತದಿಂದ 2026-27 ನೇ ಸಾಲಿನಲ್ಲಿ ವಿವಿಧ ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿದ್ದು, ಈ ಯೋಜನೆಗಳಡಿ ಸಹಾಯಧನ/ಸಾಲ-ಸಹಾಯಧನವನ್ನು ಪಡೆಯಲು ಅರ್ಹರಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ (ನೂತನ), ಅರಿವು ಶೈಕ್ಷಣಿಕ ಸಾಲ ಯೋಜನೆ (ನವೀಕರಣ), ಸ್ವಾವಲಂಬಿ ಸಾರಥಿ ಯೋಜನೆ, ಗಂಗಾಕಲ್ಯಾಣ ಯೋಜನೆ ( ಈ ಯೋಜನೆಯಲ್ಲಿ ದಕ್ಷಿಣ ಕನ್ನಡ, ಉಡುಪಿ, ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಹಾಸನ ಜಿಲ್ಲೆಗಳಲ್ಲಿ ಕನಿಷ್ಠ 1 ಎಕರೆ ಜಮೀನು ಹೊಂದಿರಬೇಕು. ಇತರೇ ಜಿಲ್ಲೆಗಳಲ್ಲಿ ಕನಿಷ್ಠ 2 ಎಕರೆ ಜಮೀನು ಹೊಂದಿರಬೇಕು.), ಹೊಲಿಗೆ ಯಂತ್ರ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಅರ್ಹ ಫಲಾನುಭವಿಗಳು ಸೇವಾಸಿಂಧು ಪೋರ್ಟಲ್ ನಲ್ಲಿ ಸೆಪ್ಟೆಂಬರ್ 30 ರೊಳಗೆ ಅರ್ಜಿ ಸಲ್ಲಿಸಬೇಕು. ಅರಿವು/ಶಯಕ್ಷಣಿಕ ಸಾಲ ಯೋಜನೆಗಳಿಗೆ ಕೊನೆಯ ದಿನಾಂಕ ಇರುವುದಿಲ್ಲ.
ಅರ್ಜಿದಾರರು ಕರ್ನಾಟಕ ರಾಜ್ಯದ ಖಾಯಂ ನಿವಾಸಿಗಳಾಗಿರಬೇಕು. ನಿಗಮದ ಯೋಜನೆಗಳಲ್ಲಿ ಸೌಲಭ್ಯಗಳನ್ನು ಪಡೆಯಲು ಇಚ್ಚಿಸುವವರು ಕಾಡುಗೊಲ್ಲ ಹಾಗೂ ಅದರ ಉಪಜಾತಿಗಳಿಗೆ ಸೇರಿರಬೇಕು. ಚಾಲ್ತಿಯಲ್ಲಿರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಕಡ್ಡಾಯವಾಗಿರುತ್ತದೆ. ವಯೋಮಿತಿ 18 ವರ್ಷಗಳಿಂದ 55 ವರ್ಷಗಳ ಮಿತಿಯಲ್ಲಿರಬೇಕು. ನಿಗಮದ/ಸರ್ಕಾರದ ಯಾವುದಾದರೂ ಯೋಜನೆಗಳಡಿ ಈ ಹಿಂದೆ ಸೌಲಭ್ಯ ಪಡೆದಿರಬಾರದು. ಕುಟುಂಬದ ಒಬ್ಬರಿಗೆ ಮಾತ್ರ ಸೌಲಭ್ಯ ಒದಗಿಸಲಾಗುವುದು.
ಅರಿವು ಯೋಜನೆಯಡಿ ಅಭ್ಯರ್ಥಿಯ ವಯೋಮಿತಿ 18 ವರ್ಷಗಳಿಂದ 30 ವರ್ಷಗಳ ಮಿತಿಯಲ್ಲಿರಬೇಕು ವಾರ್ಷಿಕ ವರಮಾನದ ಮಿತಿ ರೂ. 3.50 ಲಕ್ಷಗಳು, ಸ್ವಾವಲಂಬಿ ಸಾರಥಿ ಯೋಜನೆಯಡಿ ವಯೋಮಿತಿ 21 ವರ್ಷಗಳಿಂದ 45 ವರ್ಷಗಳ ಮಿತಿಯಲ್ಲಿರಬೇಕು. ಅರ್ಜಿದಾರರು ತಮ್ಮ ಮೊಬೈಲ್ ಸಂಖ್ಯೆ ಹಾಗೂ ಬ್ಯಾಂಕ್ ಖಾತೆಯನ್ನು ತಮ್ಮ ಆಧಾರ್ ಸಂಖ್ಯೆಗೆ ಜೋಡಣೆ ಮಾಡಿರಬೇಕು. ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ರೂ. 98,000/- ಮತ್ತು ನಗರ ಪ್ರದೇಶದವರಿಗೆ ರೂ. 1,20,000/- ಗಳ ಮಿತಿಯೊಳಗಿರಬೇಕು. ಆಯ್ಕೆ ಮಾಡುವಾಗ ಮಹಿಳೆಯರಿಗೆ ಶೇ.33 ರಷ್ಟು, ವಿಕಲಚೇತನರಿಗೆ ಶೇ.5 ರಷ್ಟು, ತೃತೀಯ ಲಿಂಗಿಗಳಿಗೆ ಶೇ. 1 ರಷ್ಟು ಮೀಸಲಾತಿ ಇರಿಸಿದೆ.
ಅರ್ಜಿ ಸಲ್ಲಿಸುವಾಗ ಆಧಾರ್ ಕಾರ್ಡಿನಲ್ಲಿರುವಂತೆ ಅರ್ಜಿದಾರರ ಹೆಸರು, ವಿಳಾಸ, ಜಾತಿ ಮತ್ತು ಆದಾಯ ಪ್ರಮಾಣ ಪತ್ರಗಳಲ್ಲಿನ ಹೆಸರು, ವಿಳಾಸ ಮತ್ತು ಬ್ಯಾಂಕ್ ಪಾಸ್ ಪುಸ್ತಕಗಳಲ್ಲಿನ ಹೆಸರು ಕಡ್ಡಾಯವಾಗಿ ತಾಳೆಯಾಗಬೇಕು. ಬೆಂಗಳೂರು-ಒನ್/ಕರ್ನಾಟಕ-ಒನ್/ಅಟಲ್-
ಹೆಚ್ಚಿನ ಮಾಹಿತಿಯನ್ನು ನಿಗಮದ ಕೇಂದ್ರ ಕಛೇರಿ ದೂರವಾಣಿ ಸಂಖ್ಯೆ: 080-22374832/833 ಯಿಂದ ಪಡೆಯಬಹುದಾಗಿದೆ. ಹಾಗೂ ಜಿಲ್ಲೆಗಳಲ್ಲಿ ನಿಗಮದ ಜಿಲ್ಲಾ ವ್ಯವಸ್ಥಾಪಕರು, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮದ ಕಛೇರಿಗಳಲ್ಲಿ ಬೆಳಗ್ಗೆ 10 ರಿಂದ ಸಂಜೆ 5:30 ರವರೆಗೆ ಸಂಪರ್ಕಿಸಬಹುದಾಗಿದೆ.
2024-25 ಮತ್ತು 2025-26 ನೇ ಸಾಲುಗಳಲ್ಲಿ ಅರ್ಜಿ ಸಲ್ಲಿಸಿ ಸೌಲಭ್ಯ ಪಡೆಯದೇ ಇರುವ ಅರ್ಜಿದಾರರು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ ಎಂದು ನಿಗಮದ ಪ್ರಕಟಣೆ ತಿಳಿಸಿದೆ.
Total Views:
0
ಜಾಹೀರಾತು

