The main goal of the Prajasheva Movement meeting is that government schemes should reach every household in the state: K.P. Mohanraj
ರಾಜ್ಯದ ಪ್ರತಿ ಮನೆ ಬಾಗಿಲಿಗೆ ಸರ್ಕಾರದ ಯೋಜನೆಗಳು ತಲುಪಬೇಕೆಂಬುದು ಪ್ರಜಾಸೇವಾ ಆಂದೋಲನ ಸಭೆಯ ಮುಖ್ಯ ಉದ್ದೇಶ: ಕೆ.ಪಿ.ಮೋಹನರಾಜ್
ಕೊಪ್ಪಳ ಸೆಪ್ಟೆಂಬರ್ 05 (ಕರ್ನಾಟಕ ವಾರ್ತೆ): ರಾಜ್ಯ ಸರ್ಕಾರವು ಪ್ರತಿಯೊಬ್ಬ ಪ್ರಜೆಯನ್ನು ತಲುಪಬೇಕು. ನಿಮ್ಮ ಅಹವಾಲನ್ನು ಆಲಿಸಲು ಸರ್ಕಾರ ಸಿದ್ಧವಾಗಿದೆ ಎಂಬ ಸಂದೇಶವನ್ನು ಪ್ರತಿ ಮನೆಮನೆಗೆ ನೀಡಬೇಕು ಎನ್ನುವ ಆಶಯದಿಂದ ಪ್ರಜಾಸೇವಾ ಆಂದೋಲನ ಸಭೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಕೊಪ್ಪಳ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಕೆ.ಪಿ.ಮೋಹನರಾಜ್ ಅವರು ಹೇಳಿದರು.
ಯಲಬುರ್ಗಾ ತಾಲೂಕಿನ ಚಿಕ್ಕವಂಕಲಕುಂಟ ಗ್ರಾಮದ ಬುದ್ದ, ಬಸವ, ಅಂಬೇಡ್ಕರ್ ಭವನದಲ್ಲಿ ಸೆ.05ರಂದು ಜಿಲ್ಲಾಡಳಿತದಿಂದ ನಡೆದ ಪ್ರಜಾಸೇವಾ ಆಂದೋಲನ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸರ್ಕಾರದ ಪ್ರತಿಯೊಂದು ಯೋಜನೆಯ ಅನುಕೂಲತೆಯನ್ನು ಗ್ರಾಮದ ಪ್ರತಿಯೊಂದು ಮನೆಗೆ ತಲುಪಿಸುವುದು, ಸಾರ್ವಜನಿಕರ ಅಹವಾಲು ಆಲಿಸಲೆಂದೇ ಪ್ರತ್ಯೇಕವಾಗಿ ಪ್ರಜಾ ಸೇವೆ ಇಲಾಖೆಯೊಂದನ್ನು ರಚನೆ ಮಾಡಿರುವುದು ಮತ್ತು ಅಹವಾಲು ಅರ್ಜಿಗಳನ್ನು ಗುಣಾತ್ಮಕ ರೀತಿಯಲ್ಲಿ ವಿಲೇವಾರಿ ಮಾಡುವುದು ಈ ಪ್ರಜಾಸೇವಾ ಆಂದೋಲನದ ವಿಶೇಷತೆಯಾಗಿದೆ ಎಂದು ಅವರು ತಿಳಿಸಿದರು.
ಸಮಾರಂಭದಲ್ಲಿ ಜಿಲ್ಲಾಧಿಕಾರಿಗಳಾದ ಡಾ.ಸುರೇಶ ಇಟ್ನಾಳ, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವರ್ಣೀತ್ ನೇಗಿ, ಸಹಾಯಕ ಅಯುಕ್ತರಾದ ಮಹೆಬೂಬ್ ಜಿಲಾನಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
*ಮಾರುತೇಶ್ವರ ದೇವರ ದರ್ಶನ:* ಗ್ರಾಮಕ್ಕೆ ಆಗಮಿಸುತ್ತಿದ್ದಂತೆ ಉಸ್ತುವಾರಿ ಕಾರ್ಯದರ್ಶಿಗಳು ಗ್ರಾಮದ ಆರಾಧ್ಯ ದೇವರಾದ ಮಾರುತೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದುಕೊಂಡರು.

*ಮಾಹಿತಿ ಮಳಿಗೆಗಳ ಉದ್ಘಾಟನೆ:* ಕೃಷಿ, ತೋಟಗಾರಿಕೆ, ಅರಣ್ಯ, ಪಶು ಸಂಗೋಪನೆ, ರೇಷ್ಮೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಸಾರಿಗೆ ಇಲಾಖೆ, ಆಹಾರ ಇಲಾಖೆ, ಜಿಲ್ಲಾ ನಗರಾಭಿವೃದ್ಧಿ ಕೋಶ, ಶಿಕ್ಷಣ ಇಲಾಖೆ, ಆಯುಷ್ ಇಲಾಖೆ, ಆರೋಗ್ಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಸರ್ಕಾರದ ವಿವಿಧ ಯೋಜನೆಗಳು ಮತ್ತು ಕಾರ್ಯಕ್ರಮಗಳ ಕುರಿತ ಪ್ರದರ್ಶನ ಮಳಿಗೆಗಳನ್ನು ಉಸ್ತುವಾರಿ ಕಾರ್ಯದರ್ಶಿಗಳು ಉದ್ಘಾಟಿಸಿ, ವೀಕ್ಷಣೆ ನಡೆಸಿ ಮೆಚ್ಚುಗೆ ವ್ಯಕ್ತಪಡಿಸಿದರು.
*ಸವಲತ್ತುಗಳ ವಿತರಣೆ:* ಅರ್ಹ ಫಲಾನುಭವಿಗಳಿಗೆ ಸಮಾರಂಭದಲ್ಲಿ ವಿವಿಧ ಇಲಾಖೆಗಳಿಂದ ಆದೇಶ ಪತ್ರಗಳನ್ನು ವಿತರಣೆ ಮಾಡಲಾಯಿತು. ಸುಕನ್ಯಾ ಸಮೃದ್ಧಿ ಪಾಸ ಬುಕ್ ಗಳನ್ನು ಸಹ ನೀಡಲಾಯಿತು.
ಸಮಾರಂಭದಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ವರ್ಣಿತ್ ನೇಗಿ, ಉಪ ಅರಣ್ಯ ಸಂರಕ್ಷಣಾಧಿಕಾರಿಗಳಾದ ನಿರ್ಮಾಲ, ಸಹಾಯಕ ಆಯುಕ್ತರಾದ ಮಹೇಬೂಬ್ ಜೀಲಾನಿ, ಜಿಲ್ಲಾ ಪಂಚಾಯತ ಯೋಜನಾ ನಿರ್ದೇಶಕರಾದ ಶಾಮಸುಂದರ ಕಾಂಬ್ಳೆ, ಜಂಟಿ ಕೃಷಿ ನಿರ್ದೇಶಕರಾದ ಜಿಡಿ ಕೃಷ್ಣಮೂರ್ತಿ, ತೋಟಗಾರಿಕೆ ಜಂಟಿ ನಿರ್ದೇಶಕರಾದ ಕೃಷ್ಣ ಸಿ. ಉಕ್ಕುಂದ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ಮಂಜುನಾಥ ಗುಂಡೂರು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ. ಈಶ್ವರ ಸವಡಿ, ತಹಶೀಲ್ದಾರ ಪ್ರಕಾಶ ನಾಸಿ, ತಾ.ಪಂ ಇಓ ನೀಲಗಂಗಾ ಬಬಲಾದ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು, ಜಿಲ್ಲಾ ಲೀಡ್ ಬ್ಯಾಂಕ್ ವ್ಯವಸ್ಥಾಪಕರು, ಇತರೆ ಜನಪ್ರತಿನಿಧಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು
Total Views:
0
ಜಾಹೀರಾತು