Veerashaiva Lingayat Development Corporation: Applications Invited Under Various Schemes
Contents
ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ: ವಿವಿಧ ಯೋಜನೆಗಳಡಿ ಅರ್ಜಿ ಆಹ್ವಾನ
ಕೊಪ್ಪಳ ಸೆಪ್ಟೆಂಬರ್ 05, (ಕರ್ನಾಟಕ ವಾರ್ತೆ): ವೀರಶೈವ-ಲಿಂಗಾಯತ ಜಾತಿ ಹಾಗೂ ಉಪಜಾತಿಗೆ ಸೇರಿದ ಸಮುದಾಯದ ಜನರ (ಪ್ರವರ್ಗ-3ಬಿ) ಅಭಿವೃದ್ದಿಗಾಗಿ 2026-27 ನೇ ಸಾಲಿನಲ್ಲಿ ಅನುಷ್ಠಾನಗೊಳಿಸುತ್ತಿರುವ ವಿವಿಧ ಯೋಜನೆಗಳಲ್ಲಿ ಸೌಲಭ್ಯ ಪಡೆಯಲು ಅರ್ಹ ಫಲಾನುಭವಿಗಳಿಂದ ಆನ್‌ಲೈನ್ ನಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಶೈಕ್ಷಣಿಕ ಸಾಲ ಯೋಜನೆಗಳಾದ ಬಸವ ಬೆಳಗು ಯೋಜನೆ(ಹೊಸ ವಿದ್ಯಾರ್ಥಿಗಳು) ಯಡಿ ವೀರಶೈವ-ಲಿಂಗಾಯತ ಸಮುದಾಯಕ್ಕೆ ಸೇರಿದ, ಕುಟುಂಬದ ವಾರ್ಷಿಕ ಆದಾಯ ರೂ.3.50 ಲಕ್ಷ ಮಿತಿಯಲ್ಲಿರುವ ವಿದ್ಯಾರ್ಥಿಗಳು ವೃತ್ತಿಪರ ಕೋರ್ಸುಗಳಾದ ಇಂಜಿನಿಯರಿAಗ್, ವೈದ್ಯಕೀಯ, ದಂತವೈದ್ಯಕೀಯ ಮುಂತಾದ 28 ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿದ್ದಲ್ಲಿ ವಾರ್ಷಿಕ ರೂ.1 ಲಕ್ಷಗಳಂತೆ ಕೊರ್ಸ್ನ ಅವಧಿಗೆ ಗರಿಷ್ಠ ರೂ.4 ಲಕ್ಷಗಳಿಂದ 5 ಲಕ್ಷಗಳವರೆಗೆ ವಾರ್ಷಿಕ ಶೇ.2 ರ ಬಡ್ಡಿ ದರದಲ್ಲಿ ಸಾಲ ಮಂಜೂರು ಮಾಡಲಾಗುವುದು. ವಿದ್ಯಾರ್ಥಿಗಳು ಸಿಇಟಿ/ನೀಟ್ ಇತ್ಯಾದಿ ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಸರ್ಕಾರಿ ಕೋಟಾದ ಸೀಟು ಪಡೆದಿರಬೇಕು.
ಬಸವಬೆಳಗು ಯೋಜನೆ(ನವೀಕರಣ) ಅಡಿ ನಿಗಮದಿಂದ ಹಿಂದಿನ ವರ್ಷಗಳಲ್ಲಿ ಸಾಲ ಪಡೆದ ವಿದ್ಯಾರ್ಥಿಗಳಿಗೆ ನವೀಕರಣ ಸಾಲ ಮಂಜೂರು ಮಾಡಲು ವಿದ್ಯಾರ್ಥಿಗಳು ವ್ಯಾಸಂಗ ದೃಢೀಕರಣ ಹಾಗೂ ಹಿಂದಿನ ವರ್ಷದ ಅಂಕಪಟ್ಟಿಯೊAದಿಗೆ ಅರ್ಜಿ ಸಲ್ಲಿಸಬೇಕು.
ವಿದೇಶ ವಿದ್ಯಾ ವಿಕಾಸ ಯೋಜನೆ (ಹೊಸ ವಿದ್ಯಾರ್ಥಿಗಳು) ಯಡಿ ವೀರಶೈವ-ಲಿಂಗಾಯತ ಸಮುದಾಯಕ್ಕೆ ಸೇರಿದ, ಕುಟುಂಬದ ವಾರ್ಷಿಕ ಆದಾಯ ರೂ.15 ಲಕ್ಷಗಳ ಮಿತಿಯಲ್ಲಿರುವ ವಿದ್ಯಾರ್ಥಿಗಳು QS World Ranking 1000 ರೊಳಗೆ ಬರುವ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಪೋಸ್ಟ್ ಡಾಕ್ಟರಲ್, ಪಿಹೆಚ್‌ಡಿ, ಮಾಸ್ಟರ್ ಡಿಗ್ರಿ ಕೋರ್ಸುಗಳಲ್ಲಿ ಉನ್ನತ ವ್ಯಾಸಂಗ ಪಡೆಯಲು ವಾರ್ಷಿಕ ಗರಿಷ್ಠ ರೂ.25 ಲಕ್ಷಗಳಂತೆ 3 ವರ್ಷದ ಅವಧಿಗೆ ಒಟ್ಟು ಗರಿಷ್ಟ ರೂ.50 ಲಕ್ಷಗಳನ್ನು ಶೂನ್ಯ ಬಡ್ಡಿದರದಲ್ಲಿ ಸಾಲ ಮಂಜೂರು ಮಾಡಲಾಗುವುದು.
ಜೀವಜಲ ಯೋಜನೆಯಡಿ ವೀರಶೈವ-ಲಿಂಗಾಯತ ಸಮುದಾಯಕ್ಕೆ ಸೇರಿದ, ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ ರೂ.98,000/- ಹಾಗೂ ಪಟ್ಟಣ ಪ್ರದೇಶದವರಿಗೆ ರೂ.1,20,000/-ಗಳ ಮಿತಿಯೊಳಗಿರುವ ಸಣ್ಣ ಮತ್ತು ಅತಿಸಣ್ಣ ರೈತರ ಜಮೀನುಗಳಿಗೆ ಕೊಳವೆ ಬಾವಿ ಕೊರೆಸುವ ಮುಖೇನ ನೀರಾವರಿ ಸೌಲಭ್ಯ ಒದಗಿಸಲಾಗುವುದು. ದಕ್ಷಿಣ ಕನ್ನಡ, ಉಡುಪಿ, ಕೊಡಗು, ಉತ್ತರಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಹಾಸನ ಜಿಲ್ಲೆಗಳಲ್ಲಿ ಕನಿಷ್ಠ 1 ಎಕರೆ ಜಮೀನು ಹೊಂದಿರಬೇಕು. ಇತರೆ ಜಿಲ್ಲೆಗಳಲ್ಲಿ ಕನಿಷ್ಠ 2 ಎಕರೆ ಹಾಗೂ ಗರಿಷ್ಠ 5 ಎಕರೆ ಒಳಗೆ ಜಮೀನು ಹೊಂದಿರಬೇಕು. ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಫ್ರೂಟ್ಸ್ ಐಡಿ ಮತ್ತು ಸಣ್ಣ ಹಿಡುವಳಿದಾರರ ಪ್ರಮಾಣಪತ್ರ ಹೊಂದಿರಬೇಕು.
ಕಾಯಕಕಿರಣ ಯೋಜನೆಯಡಿ ವೀರಶೈವ ಲಿಂಗಾಯತ ಸಮುದಾಯದ ನಿರುದ್ಯೋಗಿಗಳು ಸ್ವಯಂ ಉದ್ಯೋಗ ಕೈಗೊಳ್ಳಲು ಆರ್ಥಿಕ ಚಟುವಟಿಕೆಗಳಿಗನುಸಾರ ಘಟಕವೆಚ್ಚ ರೂ. 1 ಲಕ್ಷದಿಂದ 2 ಲಕ್ಷದವರೆಗೆ ಶೇ.4 ರ ಬಡ್ಡಿ ದರದಲ್ಲಿ ಸಾಲ ಮತ್ತು ಸಹಾಯಧನ ಸೌಲಭ್ಯ ಒದಗಿಸಲಾಗುವುದು.
ಸ್ವಾವಲಂಬಿ ಸಾರಥಿ ಯೋಜನೆಯಡಿ ನಿರುದ್ಯೋಗಿ ಯುವಜನರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ನಾಲ್ಕು ಚಕ್ರವಾಹನ (ಹಳದಿಬೋರ್ಡ್) ಖರೀದಿಸಲು ರಾಷ್ಟಿçÃಕೃತ ಬ್ಯಾಂಕ್‌ಗಳ/ ಖಾಸಗಿ ಹಣಕಾಸು ಸಂಸ್ಥೆಗಳ ಮೂಲಕ ಪಡೆಯುವ ಸಾಲಕ್ಕೆ ಶೇ.50 ರಷ್ಟು ಅಥವಾ ಗರಿಷ್ಠ ರೂ.3 ಲಕ್ಷಗಳ ಸಹಾಯಧನವನ್ನು ನಿಗಮದಿಂದ ಮಂಜೂರು ಮಾಡಲಾಗುವುದು. ಉಳಿದ ಮೊತ್ತವನ್ನು ಬ್ಯಾಂಕಿನಲ್ಲಿ ಚಾಲ್ತಿಯಿರುವ ಬಡ್ಡಿದರದಲ್ಲಿ ಸಾಲ ಪಡೆಯುವುದು. 21 ರಿಂದ 45 ವರ್ಷಗಳ ವಯೋಮಿತಿಯಲ್ಲಿರುವವರು ಅರ್ಜಿ ಸಲ್ಲಿಸಬಹುದು.
ಸ್ವಾತಂತ್ರö್ಯ ಅಮೃತ ಮಹೋತ್ಸವದ ಮುನ್ನಡೆ ಯೋಜನೆಯಡಿ ವಿದ್ಯಾವಂತ ಯುವ ಜನರನ್ನು ಗುರುತಿಸಿ ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ತರಬೇತಿಯನ್ನು ಸರ್ಕಾರಿ ಸ್ವಾಮ್ಯದ ಸಂಸ್ಥೆಗಳಾದ ITIs, GTTC, KGTTI, ATDC, VTU & ಕಾಳಿದಾಸ ಶಿಕ್ಷಣ ಸಂಸ್ಥೆ ಮೂಲಕ ವಿವಿಧ ಅಲ್ಪಾವಧಿ ಮತ್ತು ಉತ್ಕೃಷ್ಟ ಕೌಶಲ್ಯ ತರಬೇತಿಯನ್ನು ನೀಡಿ ಅವರ ಉದ್ಯೋಗ ಸಾಮರ್ಥ್ಯವನ್ನು ಹಾಗೂ ಸಾಮಾಜಿಕ/ಆರ್ಥಿಕ ಸ್ಥಿತಿಗತಿಗಳನ್ನು ಉನ್ನತೀಕರಿಸುವ ನಿಟ್ಟಿನಲ್ಲಿ ಉದ್ಯೋಗಮುಖಿಗಳನ್ನಾಗಿಸಲಾಗುವುದು. ಈ ಯೋಜನೆಯಡಿ ಸೌಲಭ್ಯ ಪಡೆಯಲು ಅಭ್ಯರ್ಥಿಗಳು 10ನೇ ತರಗತಿ/ದ್ವಿತೀಯ ಪಿ.ಯು.ಸಿ/ಡಿಪ್ಲೋಮಾ/ಪದವಿ/ಇಂಜಿನಿ
ಅರ್ಜಿದಾರರು ತಮ್ಮ ಆಧಾರ್ ಸಂಖ್ಯೆಗೆ ಮೊಬೈಲ್ ಸಂಖ್ಯೆಯನ್ನು ಜೋಡಣೆ ಮಾಡಿರಬೇಕು ಹಾಗೂ ಬ್ಯಾಂಕ್ ಖಾತೆಗೆಆಧಾರ್ ಸಂಖ್ಯೆಯನ್ನುಸೀಡ್ ಮಾಡಿರಬೇಕು. ನಿಗಮವು ಅನುಷ್ಠಾನಗೊಳಿಸುವ ಈ ಮೇಲ್ಕಂಡ ಯೋಜನೆಗಳಲ್ಲಿ ಸರ್ಕಾರದ ವಿವೇಚನಾ ಕೋಟಾ ಮತ್ತು ನಿಗಮದ ಅಧ್ಯಕ್ಷರು/ ನಿರ್ದೇಶಕರ ಮಂಡಳಿಯ ವಿವೇಚನಾ ಕೋಟಾದಡಿ ಸೌಲಭ್ಯ ಪಡೆಯಬಯಸುವವರೂ ಸಹ ಆನ್‌ಲೈನ್ ನಲ್ಲಿ ಅರ್ಜಿಯನ್ನು ಸಲ್ಲಿಸಬಹುದು. ಒಂದು ಕುಟುಂಬದ ಒಬ್ಬ ಸದಸ್ಯರು ಮಾತ್ರ ಮೇಲ್ಕಂಡ ಯಾವುದಾದರೂ ಒಂದು ಯೋಜನೆಯಲ್ಲಿ ಸೌಲಭ್ಯ ಪಡೆಯಲು ಅರ್ಹರಿರುತ್ತಾರೆ.
ಅರ್ಹ ಫಲಾಪೇಕ್ಷಿಗಳು ಗ್ರಾಮಒನ್/ ಬೆಂಗಳೂರುಒನ್/ ಕರ್ನಾಟಕಒನ್ ನಾಗರೀಕ ಸೇವಾ ಕೇಂದ್ರಗಳಲ್ಲಿ ದಾಖಲೆಗಳೊಂದಿಗೆ ಸೇವಾ ಸಿಂಧು ಪೋರ್ಟಲ್ ನಲ್ಲಿ ಅರ್ಜಿಗಳನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 30 ಕೊನೆಯ ದಿನವಾಗಿದೆ. ಒಂದು ಬಾರಿ ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ. 2024-25 ಹಾಗೂ 2025-26 ನೇ ಸಾಲಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾಗದವರು ಆದೇ ಯೋಜನೆಗೆ ಈ ವರ್ಷ ಮರು ಅರ್ಜಿ ಸಲ್ಲಿಸುವ ಅಗತ್ಯ ಇರುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ನಿಗಮದ ಜಾಲತಾಣ https://kvldcl.karnataka.gov.
Total Views:
0
ಜಾಹೀರಾತು

