ಕೊಪ್ಪಳ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಶರಣಬಸಪ್ಪ ಕೊಲ್ಕರ್ ಆಯ್ಕೆ

H.Mallikarjun
H.Mallikarjun - Kalyanasiri
1 Min Read

← Back

Thank you for your response. ✨

 

Sharanabasappa Kolkar selected as President of the Koppal District Kannada Literary Conference.

 

ಕೊಪ್ಪಳ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಶರಣಬಸಪ್ಪ ಕೊಲ್ಕರ್ ಆಯ್ಕೆ

ಕನ್ನಡ ನಾಡು-ನುಡಿ, ದಾಸ–ವಚನ ಸಾಹಿತ್ಯ ಹಾಗೂ ಶಾಸನಗಳ ಸಂಶೋಧನೆಯಲ್ಲಿ ಗಣನೀಯ ಸೇವೆ

ಜಾಹೀರಾತು

ಕೊಪ್ಪಳ: ಕೊಪ್ಪಳ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಮಹಿಳಾ ಕಾಲೇಜಿನ ಪ್ರಾಚಾರ್ಯರು ಹಾಗೂ ಇತಿಹಾಸ ಸಂಶೋಧಕರಾದ ಶರಣಬಸಪ್ಪ ಕೊಲ್ಕರ್ ಅವರು ಆಯ್ಕೆಯಾಗಿದ್ದಾರೆ. ಅವರ ಆಯ್ಕೆಗೆ ವಿವಿಧ ಕನ್ನಡ ಪರ ಸಂಘಟನೆಗಳು, ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಸಾಹಿತ್ಯಾಭಿಮಾನಿಗಳು ಅಭಿನಂದನೆ ಸಲ್ಲಿಸಿದ್ದಾರೆ.

 

ಶರಣಬಸಪ್ಪ ಕೊಲ್ಕರ್ ಅವರು ಕನ್ನಡ ನಾಡು-ನುಡಿ, ಭಾಷೆ, ದಾಸ ಸಾಹಿತ್ಯ, ವಚನ ಸಾಹಿತ್ಯ ಹಾಗೂ ಕರ್ನಾಟಕದ ಇತಿಹಾಸದ ಅಧ್ಯಯನ ಮತ್ತು ಸಂಶೋಧನೆಯಲ್ಲಿ ನಿರಂತರವಾಗಿ ತೊಡಗಿಸಿಕೊಂಡಿದ್ದಾರೆ. ವಿಶೇಷವಾಗಿ ಶಾಸನಗಳ ಅಧ್ಯಯನ, ಐತಿಹಾಸಿಕ ದಾಖಲೆಗಳ ಸಂಶೋಧನೆ ಹಾಗೂ ನಾಡಿನ ಸಾಂಸ್ಕೃತಿಕ ಪರಂಪರೆಯ ಸಂರಕ್ಷಣೆಯಲ್ಲಿ ಅವರು ಸಲ್ಲಿಸುತ್ತಿರುವ ಸೇವೆ ಗಮನಾರ್ಹವಾಗಿದೆ.

 

ಸಾಹಿತ್ಯ ಮತ್ತು ಇತಿಹಾಸ ಕ್ಷೇತ್ರದಲ್ಲಿ ಅಪಾರ ಆಸಕ್ತಿ ಹೊಂದಿರುವ ಕೊಲ್ಕರ್ ಅವರು ಸಂಶೋಧನಾ ಮನೋಭಾವದೊಂದಿಗೆ ಕನ್ನಡದ ಶ್ರೀಮಂತ ಪರಂಪರೆಯನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಅವರ ಸಾಹಿತ್ಯಿಕ ದೃಷ್ಟಿಕೋನ, ಸಂಶೋಧನಾ ಅನುಭವ ಹಾಗೂ ಕನ್ನಡ ನಾಡು-ನುಡಿಗೆ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಆಯ್ಕೆ ಮಾಡಿರುವುದು ಸೂಕ್ತ ನಿರ್ಧಾರವಾಗಿದೆ ಎಂದು ಕನ್ನಡ ಪರ ಸಂಘಟನೆಗಳು ಅಭಿಪ್ರಾಯಪಟ್ಟಿವೆ.

ಶರಣಬಸಪ್ಪ ಕೊಲ್ಕರ್ ಅವರ ಆಯ್ಕೆಗೆ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ಸೇರಿದಂತೆ ವಿವಿಧ ಕನ್ನಡ ಪರ ಸಂಘಟನೆಗಳು, ಸಾಹಿತ್ಯಿಕ ಹಾಗೂ ಸಾಮಾಜಿಕ ಸಂಸ್ಥೆಗಳು  ಮತ್ತು ಕಲ್ಯಾಣ ಸಿರಿ ಪತ್ರಿಕೆ ಅಭಿನಂದನೆ ಸಲ್ಲಿಸಿದ್ದು, ಸಮ್ಮೇಳನವು ಯಶಸ್ವಿಯಾಗಿ ನಡೆಯಲಿ ಎಂದು   ಶುಭ ಹಾರೈಸಿವೆ.

Total Views: 0
ಜಾಹೀರಾತು
Share This Article