MLA Gali Janardhana Reddy felicitated Sharanabasappa Kolkar, who was selected as the president of the literary conference.

ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾದ ಶರಣಬಸಪ್ಪ ಕೋಲ್ಕಾರ್ ಅವರಿಗೆ ಶಾಸಕ ಗಾಲಿ ಜನಾರ್ದನ ರೆಡ್ಡಿ ಸನ್ಮಾನ

ಗಂಗಾವತಿ, ಸೆ.18: ಕೊಪ್ಪಳ ಜಿಲ್ಲಾ 15ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾಗಿರುವ ಸತ್ಯನಾರಾಯಣಪೇಟೆಯ ಶ್ರೀ ಶರಣಬಸಪ್ಪ ಕೋಲ್ಕಾರ್ ಅವರನ್ನು ಗಂಗಾವತಿ ವಿಧಾನಸಭಾ ಕ್ಷೇತ್ರದ ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರ ಪರವಾಗಿ ಗುರುವಾರ ಆತ್ಮೀಯವಾಗಿ ಸನ್ಮಾನಿಸಲಾಯಿತು.
ಸತ್ಯನಾರಾಯಣಪೇಟೆಯಲ್ಲಿರುವ ಶರಣಬಸಪ್ಪ ಕೋಲ್ಕಾರ್ ಅವರ ನಿವಾಸದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸನ್ಮಾನಿಸಿ, ಸಾಹಿತ್ಯ ಕ್ಷೇತ್ರದಲ್ಲಿ ಅವರು ಸಲ್ಲಿಸಿರುವ ಸೇವೆ ಹಾಗೂ ಕನ್ನಡ ನಾಡು-ನುಡಿಯ ಕುರಿತಾದ ಅವರ ಬದ್ಧತೆಯನ್ನು ಅಭಿನಂದಿಸಲಾಯಿತು.
ಈ ಸಂದರ್ಭದಲ್ಲಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರು ಗಂಗಾವತಿಯ ಶ್ರೀ ಶೃಂಗೇರಿ ಶಂಕರ ಮಠದ ಕುರಿತು ಮೆಚ್ಚುಗೆಯ ಮಾತುಗಳನ್ನು ವ್ಯಕ್ತಪಡಿಸಿದ್ದು ಸಂತಸ ತಂದಿದೆ ಎಂದು ಸನ್ಮಾನ ಸ್ವೀಕರಿಸಿದ ಶರಣಬಸಪ್ಪ ಕೋಲ್ಕಾರ್ ಅವರ ಪರವಾಗಿ ನಾರಾಯಣರಾವ್ ತಿಳಿಸಿದರು.
ಕಾರ್ಯಕ್ರಮದಲ್ಲಿ ರಾಘವೇಂದ್ರ ಅಳವಂಡಿಕರ್, ವೇಣುಗೋಪಾಲ್ ಅಳವಂಡಿ, ಮೋಹನ್ ಲೆಕ್ಕಿಹಾಳ, ರಾಘವೇಂದ್ರ ಜೋಶಿ ಮೇಗೂರ ಸೇರಿದಂತೆ ಇತರರು ಉಪಸ್ಥಿತರಿದ್ದರು.

