Technical workshop on ‘Agricultural Product Export’ in Koppal on Sep. 24
ಸೆ. 24 ರಂದು ಕೊಪ್ಪಳದಲ್ಲಿ ‘ಕೃಷಿ ಉತ್ಪನ್ನಗಳ ರಫ್ತು’ ಕುರಿತು ತಾಂತ್ರಿಕ ಕಾರ್ಯಾಗಾರ
ಜಾಹೀರಾತು

ಕೊಪ್ಪಳ ಸೆಪ್ಟೆಂಬರ್ 22 (ಕರ್ನಾಟಕ ವಾರ್ತೆ): “ಕೃಷಿ ಉತ್ಪನ್ನಗಳ ರಫ್ತು: ಪ್ರಸ್ತುತ ಪರಿಸ್ಥಿತಿ ಮತ್ತು ಭವಿಷ್ಯದ ಅವಕಾಶಗಳು” ಎಂಬ ವಿಷಯದ ಕುರಿತು ಒಂದು ದಿನದ ತಾಂತ್ರಿಕ ಕಾರ್ಯಾಗಾರವನ್ನು ಕೊಪ್ಪಳದ ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರದಲ್ಲಿ ಸೆಪ್ಟೆಂಬರ್ 24ರಂದು ಬೆಳಿಗ್ಗೆ 10:30ಕ್ಕೆ ಹಮ್ಮಿಕೊಳ್ಳಲಾಗಿದೆ.
ಈ ಕಾರ್ಯಾಗಾರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ರೈತರು ಭಾಗವಹಿಸಿ ತಮ್ಮ ಕೃಷಿ ಉತ್ಪನ್ನಗಳನ್ನು ರಫ್ತು ಮಾಡಲು ಬೇಕಾದ ಅಗತ್ಯ ತಾಂತ್ರಿಕ ಮಾಹಿತಿಗಳನ್ನು ಪಡೆದುಕೊಳ್ಳಬೇಕೆಂದು ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರದ ವಿಸ್ತರಣಾ ಮುಂದಾಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Total Views:
0
ಜಾಹೀರಾತು

