Felicitation of Kannada Literary Conference President Dr. Sharanabasappa Kolkar and his wife.

ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ಡಾ. ಶರಣಬಸಪ್ಪ ಕೋಲ್ಕಾರ ದಂಪತಿಗೆ ಸನ್ಮಾನ
ಜಾಹೀರಾತು

ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ಡಾ. ಶರಣಬಸಪ್ಪ ಕೋಲ್ಕಾರ ದಂಪತಿಗೆ ಸನ್ಮಾನ.
ಗಂಗಾವತಿ: ಕೊಪ್ಪಳ ಜಿಲ್ಲಾ 15ನೇ ಕನ್ನಡ ಸಾಹಿತ್ಯ ಸಮ್ಮೇಳನದ ನಿಯೋಜಿತ ಸರ್ವಾಧ್ಯಕ್ಷರಾದ ಡಾ. ಶರಣಬಸಪ್ಪ ಕೋಲ್ಕಾರ ಹಾಗೂ ಅವರ ಧರ್ಮಪತ್ನಿಯವರನ್ನು ಮಾಜಿ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾದ ಶ್ರೀ ಮಲ್ಲಿಕಾರ್ಜುನ ನಾಗಪ್ಪ ಅವರು ಜಯನಗರದಲ್ಲಿರುವ ಅವರ ನಿವಾಸಕ್ಕೆ ಭೇಟಿ ನೀಡಿ ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾಗಿರುವ ಡಾ. ಶರಣಬಸಪ್ಪ ಕೋಲ್ಕಾರ ಅವರಿಗೆ ಶುಭಾಶಯಗಳನ್ನು ಸಲ್ಲಿಸಿ, ಸಮ್ಮೇಳನವು ಯಶಸ್ವಿಯಾಗಿ ನಡೆಯಲಿ ಎಂದು ಹಾರೈಸಿದರು.
ಸನ್ಮಾನ ಕಾರ್ಯಕ್ರಮದಲ್ಲಿ ಶೇಖರಗೌಡ ಪಾಟೀಲ್ ತಲೇಖಾನ್, ಗುಂಜಳ್ಳಿ ರಾಚಪ್ಪ, ಶಶಿಧರ ಪಟ್ಟಣಶೆಟ್ಟಿ ಹಾಗೂ ನಗರ ಮಹಿಳಾ ಘಟಕದ ಅಧ್ಯಕ್ಷರು ಸೇರಿದಂತೆ ಇತರರು ಉಪಸ್ಥಿತರಿದ್ದರು
Total Views:
0
ಜಾಹೀರಾತು

