Various competitions organized at Tiptur Government First Grade College to mark Dasara.


ತಿಪಟೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ದಸರಾ ಅಂಗವಾಗಿ ವಿವಿಧ ಸ್ಪರ್ಧೆ ಆಯೋಜನೆ
ತಿಪಟೂರು: ಸೆ.26: ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವತಿಯಿಂದ ದಸರಾ ಅಂಗವಾಗಿ ಪದವಿ ವಿದ್ಯಾರ್ಥಿಗಳಿಗೆ ಪ್ರಬಂಧ ಹಾಗೂ ಭಾಷಣ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಮುರಳೀಧರ ಹಾಲಪ್ಪ, ಎಂ.ಬಿ. ಶಿವಕುಮಾರ್, ಶಾರದಾ, ಸತೀಶ್, ಗಣ್ಯರು ಸೇರಿ ಸಸಿಗೆ ನೀರು ಹಾಕುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಮುರಳೀಧರ ಹಾಲಪ್ಪ ಅವರು ತುಮಕೂರು ದಸರಾವನ್ನು ಕಳೆದ ಎರಡು ವರ್ಷಗಳಿಂದ ಆಚರಿಸಿಕೊಂಡು ಬರುತ್ತಿದೆ. ಇದು ಮೂರನೇ ವರ್ಷವಾಗಿರುವುದರಿಂದ ಅದ್ಧೂರಿಯಾಗಿ ಆಚರಿಸಲಾಗುವುದು ಎಂದರು.
ಇನ್ನು ಆಚರಣೆಯನ್ನು ಒಂಬತ್ತು ದಿನಗಳ ಕಾಲ ವಿವಿಧ ಕಾರ್ಯಕ್ರಮಗಳು ಮತ್ತು ಸ್ಪರ್ಧೆಗಳನ್ನು ಆಯೋಜಿಸಲಾಗಿದೆ, ಅಂತಿಮ ವರ್ಷದ ವಿದ್ಯಾರ್ಥಿಗಳು ಇದರಲ್ಲಿ ಹೆಚ್ಚಾಗಿ ಭಾಗವಹಿಸುವುದರ ಮೂಲಕ ಮುಂದಿನ ಭವಿಷ್ಯಕ್ಕಾಗಿ ಉತ್ತಮವಾದ ಗುರಿಯನ್ನು ಇಟ್ಟುಕೊಂಡು ಅದಕ್ಕಾಗಿ ಶ್ರಮಿಸಬೇಕು ಎಂದು ಸಲಹೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಪ್ರಾಂಶುಪಾಲರಾದ ಶಶಿಕುಮಾರ್ ಮಾತನಾಡಿ ವಿದ್ಯಾರ್ಥಿಗಳು ಕೇವಲ ಪಠ್ಯಕ್ರಮಕ್ಕೆ ಮಾತ್ರ ಸೀಮಿತವಾಗದೇ, ವಿವಿಧ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಿ ಕಾಲಕ್ಕೆ ತಕ್ಕ ಕೌಶಲ್ಯಗಳನ್ನ ಬೆಳೆಸಿಕೊಳ್ಳಬೇಕು ಎಂದರು.
ಹಾಗೆ ಸ್ಪಷ್ಟವಾದ ಗುರಿಯನ್ನು ಇಟ್ಟುಕೊಂಡು ಮುನ್ನಡೆದರೆ ಒಂದಲ್ಲ ಒಂದು ದಿನ ಯಶಸ್ಸು ಖಂಡಿತವಾಗಿಯೂ ದೊರೆಯುತ್ತದೆ ಎಂದರು ಮತ್ತು ದಸರಾ ಹಬ್ಬದ ಹಿನ್ನಲೆ ಮತ್ತು ಸಾಂಸ್ಕೃತಿಕ ಮಹತ್ವವನ್ನು ತಿಳಿಸಿದರು.
ಇದೇ ಸಂದರ್ಭದಲ್ಲಿ ವಿವಿಧ ವಿಭಾಗದ ಮುಖ್ಯಸ್ಥರು,
ಬೋಧಕ-ಬೋಧಕೇತರ ಸಿಬ್ಬಂದಿ ವರ್ಗದವರು, ವಿದ್ಯಾರ್ಥಿಗಳು ಮತ್ತಿತರರು ಇದ್ದರು.



