ಶಿಕ್ಷಕರಿಂದ ಭವಿಷ್ಯದ ಸಮಾಜ ನಿರ್ಮಾಣ: ಪುಟ್ಟಣ್ಣ-ವಿವಿಧ ಜಿಲ್ಲೆಗಳ 130 ಶಿಕ್ಷಕರಿಗೆ ಉತ್ತಮ ಶಿಕ್ಷಕ ರಾಜ್ಯಮಟ್ಟದ ಪ್ರಶಸ್ತಿ ಪ್ರದಾನ

H.Mallikarjun
H.Mallikarjun - Kalyanasiri
1 Min Read
Teachers Build the Society of the Future: Puttanna
- State-level 'Best Teacher' awards presented to 130 teachers from various districts

ಶಿಕ್ಷಕರಿಂದ ಭವಿಷ್ಯದ ಸಮಾಜ ನಿರ್ಮಾಣ: ಪುಟ್ಟಣ್ಣ
-ವಿವಿಧ ಜಿಲ್ಲೆಗಳ 130 ಶಿಕ್ಷಕರಿಗೆ ಉತ್ತಮ ಶಿಕ್ಷಕ ರಾಜ್ಯಮಟ್ಟದ ಪ್ರಶಸ್ತಿ ಪ್ರದಾನ

ಜಾಹೀರಾತು


ಬೆಂಗಳೂರು: ಶಿಕ್ಷಕರು ಕೇವಲ ಪಾಠ ಬೋಧಿಸುವವರಲ್ಲ, ಅವರು ಜ್ಞಾನ, ಮೌಲ್ಯ, ಸಂಸ್ಕಾರ ಮತ್ತು ಭವಿಷ್ಯದ ಸಮಾಜವನ್ನು ರೂಪಿಸುವ ಶಿಲ್ಪಿಗಳು ಎಂದು ಬೆಂಗಳೂರು ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ ಹೇಳಿದರು.
ಕರ್ನಾಟಕ ರಾಜ್ಯ ಖಾಸಗಿ ಶಿಕ್ಷಕರ, ಉಪನ್ಯಾಸಕರ ಹಾಗೂ ಪ್ರಾಧ್ಯಾಪಕರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಆರ್.ಟಿ. ನಗರದಲ್ಲಿ ಆಯೋಜಿಸಿದ್ದ ಅಕ್ಷರ ಮಾತೆ ಸಾಹಿತ್ಯಬಾಯಿ ಫುಲೆ ಹಾಗೂ ಭಾರತ ರತ್ನ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ರಾಜ್ಯ ಮಟ್ಟದ ಪ್ರಶಸ್ತಿ ಪ್ರದಾನ ಸಮಾರಂ ಉದ್ಘಾಟಿಸಿ ಮಾತನಾಡಿದ ಅವರು, ಶಿಕ್ಷಣ ಕ್ಷೇತ್ರದಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸುತ್ತಿರುವ ಶಿಕ್ಷಕರು, ಉಪನ್ಯಾಸಕರು ಹಾಗೂ ಪ್ರಾಧ್ಯಾಪಕರನ್ನು ಗೌರವಿಸುವ ಸಾರ್ಥಕ ರೆಯಿತು. ಸಾಹಿತ್ಯಬಾಯಿ ಪುಲೆ ಅವರ ಶಿಕ್ಷಣ ಕ್ರಾಂತಿಯ ಆದರ್ಶ ಹಾಗೂ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಶೈಕ್ಷಣಿಕ ಚಿಂತನೆಗಳು ನಮ್ಮೆಲ್ಲರಿಗೂ ಸದಾ ಪ್ರೇರಣೆಯಾಗಿವೆ ಎಂದು ತಿಳಿಸಿದರು.
ಅಕ್ಟೋಬರ್ 23ರಂದು ನಡೆಯಲಿರುವ ಪರಿಷತ್‌ ಚುನಾವಣೆಯಲ್ಲಿ ತಮ್ಮನ್ನು ಬೆಂಬಲಿಸುವಂತೆ ಪುಟ್ಟಣ್ಣ ಅವರು ಶಿಕ್ಷಕ ಸಮುದಾಯವನ್ನು ಕೋರಿದರು.
ಶಿಕ್ಷಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ 130 ಶಿಕ್ಷಕರು, ಉಪನ್ಯಾಸಕರು ಹಾಗೂ ಪ್ರಾಧ್ಯಾಪಕರಿಗೆ ‘ಅಕ್ಷರಮಾತೆ ಸಾವಿತ್ರಿಬಾಯಿ ಫುಲೆ ಪ್ರಶಸ್ತಿ’ ಹಾಗೂ ‘ಭಾರತ ರತ್ನ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಪ್ರಶಸ್ತಿ’ ಪ್ರದಾನ ಮಾಡಿ ಗೌರವಿಸಲಾಯಿತು.
ಸಂಘದ ಅಧ್ಯಕ್ಷ ಭೀರಲಿಂಗ ಪೂಜಾರಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಪ್ರಧಾನ ಕಾರ್ಯದರ್ಶಿ ಅಮರೇಶ ವೈ. ಸ್ವಾಗತಿಸಿದರು. ಕೆ.ಎಸ್. ಮತ್ತು ಚೈತ್ರ ಕಾರ್ಯಕ್ರಮ ನಿರೂಪಿಸಿದರು. ಜಗದೀಶ್ ವಂದನಾರ್ಪಣೆ ಸಲ್ಲಿಸಿದರು. ಆರ್.ಟಿ.ನಗರ ಸಮೂಹ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕ ಪ್ರಸನ್ನ ಕುಮಾರ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

Total Views: 0
ಜಾಹೀರಾತು
Share This Article