New office bearers appointed for the Koppal District Media Journalists' Association.
ಕೊಪ್ಪಳ ಜಿಲ್ಲಾ ಮಾಧ್ಯಮ ಪತ್ರಕರ್ತರ ಸಂಘಕ್ಕೆ ಹೊಸ ಪದಾಧಿಕಾರಿಗಳ ನೇಮಕ
ಕೊಪ್ಪಳ, ಸೆ.30: ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಜಿ.ಎಂ. ರಾಜಶೇಖರ ಅವರ ಆದೇಶ ಹಾಗೂ ರಾಜ್ಯ ಸಮಿತಿ ಸದಸ್ಯರಾದ ಹೆಚ್. ಮಲ್ಲಿಕಾರ್ಜುನ ಅವರ ನಿರ್ದೇಶನದ ಮೇರೆಗೆ ಕೊಪ್ಪಳ ಜಿಲ್ಲಾ ಘಟಕಕ್ಕೆ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಲಾಗಿದೆ.

ಉತ್ತರ ಕರ್ನಾಟಕದ ‘ನೈಜತೆಯ ತಿರುವು’ ದಿನಪತ್ರಿಕೆಯ ಸಂಪಾದಕ ಕನಕಪ್ಪ ಕೆ. ತಳವಾರ ಅವರನ್ನು ಕೊಪ್ಪಳ ಜಿಲ್ಲಾ ವ್ಯಾಪ್ತಿಯ ಸಂಘಟನಾ ಜವಾಬ್ದಾರಿಗೆ ನೇಮಕ ಮಾಡಲಾಗಿದೆ. ಜಿಲ್ಲೆಯ ಆರು ತಾಲೂಕುಗಳಲ್ಲಿ ಸಂಘದ ನೂತನ ಸದಸ್ಯರನ್ನು ನೇಮಕ ಮಾಡುವುದು, ಸದಸ್ಯತ್ವವನ್ನು ವಿಸ್ತರಿಸುವುದು ಹಾಗೂ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ಜವಾಬ್ದಾರಿಯನ್ನು ಅವರಿಗೆ ವಹಿಸಲಾಗಿದೆ.
ಇದೇ ವೇಳೆ ‘ಭೀಮ ಗರ್ಜನೆ’ ಪತ್ರಿಕೆಯ ಸಂಪಾದಕ ರಮೇಶ್ ಕೋಟಿ ಅವರನ್ನು ಜಿಲ್ಲಾ ಗೌರವಾಧ್ಯಕ್ಷರಾಗಿ ಹಾಗೂ ‘ಪ್ರಜಾವಾಣಿ ಸೆಕ್ಯುಲರ್’ ಸಂಪಾದಕ ಸೈಯದ್ ಬಾಷಾ ಅವರನ್ನು ಜಿಲ್ಲಾ ಉಪಾಧ್ಯಕ್ಷರಾಗಿ ನೇಮಕ ಮಾಡಲಾಗಿದೆ.
ಜಿಲ್ಲೆಯ ಪ್ರತಿಯೊಂದು ತಾಲೂಕಿನಲ್ಲಿ ಸಂಘದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳನ್ನು ಆಯ್ಕೆ ಮಾಡುವ ಪ್ರಕ್ರಿಯೆ ಕೈಗೊಳ್ಳಲು ಹಾಗೂ ಆಯ್ಕೆಯಾದ ಪದಾಧಿಕಾರಿಗಳ ವಿವರಗಳನ್ನು ರಾಜ್ಯ ಸಮಿತಿಗೆ ಸಲ್ಲಿಸಿ ಅನುಮೋದನೆ ಪಡೆಯುವ ಮೂಲಕ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಅಧಿಕಾರ ನೀಡಲಾಗಿದೆ.
ಸಂಘದ ನಿಯಮ, ನಿಯಮಾವಳಿ ಹಾಗೂ ರಾಜ್ಯ ಸಮಿತಿಯ ಮಾರ್ಗದರ್ಶನದಂತೆ ಕಾರ್ಯನಿರ್ವಹಿಸಿ, ಜಿಲ್ಲೆಯ ಎಲ್ಲಾ ಪತ್ರಕರ್ತರನ್ನು ಒಗ್ಗೂಡಿಸಿಕೊಂಡು ಕೊಪ್ಪಳ ಜಿಲ್ಲೆಯಲ್ಲಿ ಸಂಘಟನೆಯನ್ನು ಮತ್ತಷ್ಟು ಬಲಿಷ್ಠಗೊಳಿಸುವಂತೆ ಜಿಲ್ಲಾ ಸಂಘಟನಾ ಜವಾಬ್ದಾರಿ ವಹಿಸಿಕೊಂಡಿರುವ ಕನಕಪ್ಪ ಕೆ. ತಳವಾರ ಅವರಿಗೆ ಸೂಚಿಸಲಾಗಿದೆ.
ಹೊಸ ಪದಾಧಿಕಾರಿಗಳ ನೇಮಕದಿಂದ ಕೊಪ್ಪಳ ಜಿಲ್ಲೆಯಲ್ಲಿ ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದ ಸಂಘಟನಾ ಚಟುವಟಿಕೆಗಳಿಗೆ ಮತ್ತಷ್ಟು ವೇಗ ದೊರೆಯುವ ನಿರೀಕ್ಷೆ ವ್ಯಕ್ತವಾಗಿದೆ.



