ಆರ್ಥಿಕ ಸಂಕಷ್ಟದಲ್ಲಿದ್ದ 183 ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ₹34.84 ಲಕ್ಷ ನೆರವು

H.Mallikarjun
H.Mallikarjun - Kalyanasiri
1 Min Read

Financial aid of ₹34.84 lakh for 183 talented students facing financial hardship.

ಆರ್ಥಿಕ ಸಂಕಷ್ಟದಲ್ಲಿದ್ದ 183 ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ₹34.84 ಲಕ್ಷ ನೆರವು

ಜಾಹೀರಾತು


ಧಾರವಾಡ: ಆರ್ಥಿಕ ಸಂಕಷ್ಟದಿಂದ ಶಿಕ್ಷಣ ಮುಂದುವರಿಸಲು ತೊಂದರೆ ಅನುಭವಿಸುತ್ತಿರುವ ಅರ್ಹ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿದ್ಯಾಪೋಷಕ ಸಂಸ್ಥೆಯು ‘ನರ್ಚರ್ ಮೆರಿಟ್’ ಯೋಜನೆಯಡಿ 2026-27ನೇ ಶೈಕ್ಷಣಿಕ ಸಾಲಿನ ‘ವಿನಮ್ರ ಆರ್ಥಿಕ ನೆರವು’ ಕಾರ್ಯಕ್ರಮವನ್ನು ಧಾರವಾಡದ ವಿದ್ಯಾಗಿರಿಯಲ್ಲಿರುವ ಜೆ.ಎಸ್.ಎಸ್. ಕಾಲೇಜು ಆವರಣದಲ್ಲಿ ಆಯೋಜಿಸಿತು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಪ್ರೊ. ರಂಗನಾಥ ಆರ್. ಕುಲಕರ್ಣಿ, ವಿಜಯ್ ಬೇದ್ರೆ, ವಾಸುದೇವ್ ಮಯ್ಯ ಹಾಗೂ ಡಾ. ಶರತ್ ಐರಾನಿ ಮಾತನಾಡಿ, ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ನಂತರದ ಶಿಕ್ಷಣವನ್ನು ಮುಂದುವರಿಸಲು ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ವಿದ್ಯಾರ್ಥಿಗಳಿಗೆ ವಿದ್ಯಾಪೋಷಕ ಸಂಸ್ಥೆಯ ನೆರವು ಅತ್ಯಂತ ಉಪಯುಕ್ತವಾಗಿದೆ ಎಂದು ಹೇಳಿದರು.
ಆರ್ಥಿಕ ಸಮಸ್ಯೆಯಿಂದಾಗಿ ಶಿಕ್ಷಣವನ್ನು ಅರ್ಧಕ್ಕೆ ನಿಲ್ಲಿಸುವ ಪರಿಸ್ಥಿತಿಯಲ್ಲಿರುವ ವಿದ್ಯಾರ್ಥಿಗಳು ಸಂಸ್ಥೆಯ ನೆರವನ್ನು ಸದುಪಯೋಗಪಡಿಸಿಕೊಂಡು ಜೀವನದಲ್ಲಿ ಯಶಸ್ಸಿನ ಗುರಿ ತಲುಪಬೇಕು. ಮುಂದಿನ ದಿನಗಳಲ್ಲಿ ತಾವು ಕೂಡ ಇದೇ ರೀತಿಯಾಗಿ ತಮ್ಮಂತೆಯೇ ಸಂಕಷ್ಟದಲ್ಲಿರುವ ಸಾವಿರಾರು ವಿದ್ಯಾರ್ಥಿಗಳಿಗೆ ನೆರವಾಗುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಅವರು ಕರೆ ನೀಡಿದರು.
ವಿದ್ಯಾಪೋಷಕ ಸಂಸ್ಥೆಯು ಶಿಕ್ಷಣ ಕ್ಷೇತ್ರದಲ್ಲಿ ಮಾಡುತ್ತಿರುವ ಸೇವಾ ಕಾರ್ಯಕ್ಕೆ ಅತಿಥಿಗಳು ಮೆಚ್ಚುಗೆ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ 183 ಅರ್ಹ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಒಟ್ಟು ₹34.84 ಲಕ್ಷ ಆರ್ಥಿಕ ನೆರವನ್ನು ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ನೆರವು ಪಡೆದ ಗ್ರಾಮೀಣ ಪ್ರದೇಶದ ವಿದ್ಯಾರ್ಥಿನಿಯರಾದ ಕು. ದಯಾನಂದ ಎಂ. ಹಾಗೂ ಜ್ಯೋತಿ ಅಳಗವಾಡಿ ತಮ್ಮ ಅನಿಸಿಕೆ ಹಂಚಿಕೊಂಡರು. ಕುಟುಂಬದ ಆರ್ಥಿಕ ಸಮಸ್ಯೆಯಿಂದಾಗಿ ತಮ್ಮ ಶೈಕ್ಷಣಿಕ ಜೀವನವನ್ನು ಮುಂದುವರಿಸಲು ಸಾಧ್ಯವಾಗುವುದಿಲ್ಲ ಎಂದುಕೊಂಡಿದ್ದ ಸಂದರ್ಭದಲ್ಲಿ ವಿದ್ಯಾಪೋಷಕ ಸಂಸ್ಥೆಯ ನೆರವು ದೊರೆತಿದ್ದು, ತಮ್ಮ ಶಿಕ್ಷಣವನ್ನು ಮುಂದುವರಿಸಲು ಸಾಧ್ಯವಾಗಿದೆ ಎಂದು ಅವರು ಕೃತಜ್ಞತೆ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ವಿದ್ಯಾಪೋಷಕ ಸಂಸ್ಥೆಯ ದಾನಿಗಳು, ಸ್ವಯಂಸೇವಕರು, ವಿದ್ಯಾಪೋಷಕ ಸಮುದಾಯದ ಸದಸ್ಯರು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.
ಕಲ್ಯಾಣಸಿರಿ ವೆಬ್ ನ್ಯೂಸ್

Total Views: 0
ಜಾಹೀರಾತು
Share This Article