ಕೊಪ್ಪಳ ಲೋಕಾಯುಕ್ತ ಪೊಲೀಸರಿಂದ ಅ.09 ರಂದು ಜನ ಸಂಪರ್ಕ ಸಭೆ

H.Mallikarjun
H.Mallikarjun - Kalyanasiri
1 Min Read
ಜಾಹೀರಾತು
ಜಾಹೀರಾತು
Public interaction meeting by Koppal Lokayukta police on October 9.

ಕೊಪ್ಪಳ ಲೋಕಾಯುಕ್ತ ಪೊಲೀಸರಿಂದ ಅ.09 ರಂದು ಜನ ಸಂಪರ್ಕ ಸಭೆ

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಕೊಪ್ಪಳ, ಅಕ್ಟೋಬರ್ 05, (ಕರ್ನಾಟಕ ವಾರ್ತೆ): ಅಪರ ಪೊಲೀಸ್ ಮಹಾ ನಿರ್ದೇಶಕರು, ಕರ್ನಾಟಕ ಲೋಕಾಯುಕ್ತ, ಬೆಂಗಳೂರು ರವರ ನಿರ್ದೇಶನದಂತೆ ಕರ್ನಾಟಕ ಲೋಕಾಯುಕ್ತ, ಕೊಪ್ಪಳ ಕಛೇರಿಯ ಪೊಲೀಸ್ ಅಧಿಕಾರಿಗಳಿಂದ ಅಕ್ಟೋಬರ್ 09 ರ ಶುಕ್ರವಾರದಂದು ಬೆಳಿಗ್ಗೆ 11 ಗಂಟೆಯಿAದ ಮಧ್ಯಾಹ್ನ 1:30 ಗಂಟೆಯವರೆಗೆ ಯಲಬುರ್ಗಾದ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ಲೋಕಾಯುಕ್ತ ಜನ ಸಂಪರ್ಕ ಸಭೆ ಮತ್ತು ಸಾರ್ವಜನಿಕರಿಂದ ಅಹವಾಲು ಸ್ವೀಕಾರ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.
ಸಾರ್ವಜನಿಕ ಕುಂದು-ಕೊರತೆಗಳ ಅಹವಾಲು ಸ್ವೀಕರಿಸುವ ಪ್ರಯುಕ್ತ ಸಭೆಗೆ ಸರ್ಕಾರದ ಎಲ್ಲ ಕಚೇರಿಗಳ ತಾಲೂಕುಮಟ್ಟದ ಸರಕಾರಿ ಅಧಿಕಾರಿಗಳು ಹಾಜರಿರುತ್ತಾರೆ. ಆದ್ದರಿಂದ ಸಾರ್ವಜನಿಕರು ತಮ್ಮ ಕುಂದು-ಕೊರತೆಗಳನ್ನು, ಅಹವಾಲುಗಳನ್ನು ಹಾಗೂ ತಮ್ಮ ಸರಕಾರಿ ಕೆಲಸಗಳಿಗೆ ಸಂಬAಧಿಸಿದAತೆ ಯಾವುದೇ ಸರಕಾರಿ ಕಛೇರಿಗಳಲ್ಲಿ ಸಾರ್ವಜನಿಕರ ಕೆಲಸ ಕಾರ್ಯಗಳನ್ನು ಮಾಡಿಕೊಡಲು ಅಧಿಕಾರಿಗಳು ಉದ್ದೇಶ ಪೂರ್ವಕವಾಗಿ ವಿಳಂಬ ಮಾಡುತ್ತಿರುವ ಬಗ್ಗೆ, ಸರಕಾರಿ ಅಧಿಕಾರಿಗಳು ಸರಕಾರದ ಯೋಜನೆಗಳ ಲಾಭವನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವಲ್ಲಿ ಉದ್ದೇಶ ಪೂರ್ವಕ ತಾರತಮ್ಯ ಮಾಡುತ್ತಿರುವ ಬಗ್ಗೆ, ಕಳಪೆ ಕಾಮಗಾರಿ ನಡೆಸಿ ಹಣ ದುರುಪಯೋಗ ಪಡಿಸಿದ ದೂರುಗಳ ಬಗ್ಗೆ,  ಯಾವುದೇ ಸರಕಾರಿ ಅಧಿಕಾರಿಯು ತಾನು ಕರ್ತವ್ಯ ನಿರ್ವಹಿಸಲು ನಿಯೋಜಿಸಿದ ಕರ್ತವ್ಯವನ್ನು ನಿರ್ವಹಿಸುವಲ್ಲಿ ದುರಾಡಳಿತ ಪ್ರದರ್ಶಿಸುವಂತಹ ಅಧಿಕಾರಿಗಳ ಮೇಲೆ ಲಿಖಿತ ದೂರನ್ನು ದಾಖಲಿಸಬಹುದು.
ಪ್ರಪತ್ರ 1 ಮತ್ತು 2 ರಲ್ಲಿ ಅಫಿಡವಿಟ್‌ನೊಂದಿಗೆ ಅಗತ್ಯ ದಾಖಲಾತಿಗಳನ್ನು ಲಗತ್ತಿಸಿ ಲಿಖಿತ ದೂರನ್ನು ಸಲ್ಲಿಸಬಹುದಾಗಿದೆ. ನ್ಯಾಯಾಲಯದಲ್ಲಿ ವಿಚಾರಣೆ ಬಾಕಿ ಇರುವಂತಹ ಪ್ರಕರಣಗಳಿಗೆ ಸಂಬAಧಿಸಿದ ದೂರುಗಳಿದ್ದಲ್ಲಿ ಸ್ವೀಕರಿಸಲಾಗುವುದಿಲ್ಲ ಎಂದು ಕರ್ನಾಟಕ ಲೋಕಾಯುಕ್ತ ಕೊಪ್ಪಳ ಕಚೇರಿಯ ಪೊಲೀಸ್ ಉಪಾಧೀಕ್ಷಕರಾದ ವಿಜಯ ಬಿರಾದಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Total Views: 0
Share This Article