ವಿದ್ಯಾರ್ಥಿಗಳ ಸಮಸ್ಯೆಗಳ ಪರಿಹಾರಕ್ಕೆ ಸಂಘಟಿತ ಹೋರಾಟ: ಎಸ್‌ಎಫ್‌ಐ

H.Mallikarjun
H.Mallikarjun - Kalyanasiri
2 Min Read
ಜಾಹೀರಾತು

Organized struggle to resolve students' issues: SFI

ವಿದ್ಯಾರ್ಥಿಗಳ ಸಮಸ್ಯೆಗಳ ಪರಿಹಾರಕ್ಕೆ ಸಂಘಟಿತ ಹೋರಾಟ: ಎಸ್‌ಎಫ್‌ಐ

ಜಾಹೀರಾತು
ಕೊಪ್ಪಳ ಜಿಲ್ಲಾ ಸಮಿತಿಯ ಅಧ್ಯಕ್ಷರಾಗಿ ಶಿವಕುಮಾರ್ ಈಚನಾಳ್, ಪ್ರಧಾನ ಕಾರ್ಯದರ್ಶಿಯಾಗಿ ನಾಗರಾಜ್ ಯು.ಎಂ. ಸುಗೂರ್ ಆಯ್ಕೆ


ಕೊಪ್ಪಳ ಜಿಲ್ಲಾ ಸಮಿತಿಯ ಅಧ್ಯಕ್ಷರಾಗಿ ಶಿವಕುಮಾರ್ ಈಚನಾಳ್, ಪ್ರಧಾನ ಕಾರ್ಯದರ್ಶಿಯಾಗಿ ನಾಗರಾಜ್ ಯು.ಎಂ. ಸುಗೂರ್ ಆಯ್ಕೆ


ಗಂಗಾವತಿ: ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್‌ಎಫ್‌ಐ) ಕೊಪ್ಪಳ ಜಿಲ್ಲಾ ಸಮಿತಿಯ 6ನೇ ಜಿಲ್ಲಾ ಸಮ್ಮೇಳನವು ನಗರದ ಕಸಾಪ ಭವನದಲ್ಲಿ ನಡೆಯಿತು.
ಸರ್ಕಾರಿ ಕನ್ನಡ ಶಾಲೆಗಳ ಉಳಿವು, ಸರ್ಕಾರಿ ಹಾಸ್ಟೆಲ್‌ಗಳ ಬಲವರ್ಧನೆ, ವಿದ್ಯಾರ್ಥಿಗಳ ಪ್ರಜಾಸತ್ತಾತ್ಮಕ ಹಕ್ಕುಗಳ ರಕ್ಷಣೆ, 371(ಜೆ) ಸಮರ್ಪಕ ಜಾರಿ ಹಾಗೂ ಜಿಲ್ಲೆಯ ಸಮಗ್ರ ಅಭಿವೃದ್ಧಿ ಸೇರಿದಂತೆ ವಿವಿಧ ಬೇಡಿಕೆಗಳ ಕುರಿತು ಸಮ್ಮೇಳನದಲ್ಲಿ ಚರ್ಚಿಸಲಾಯಿತು.
ವಿದ್ಯಾರ್ಥಿಗಳು ಎದುರಿಸುತ್ತಿರುವ ಶೈಕ್ಷಣಿಕ ಸಮಸ್ಯೆಗಳು, ಸರ್ಕಾರಿ ಶಿಕ್ಷಣ ವ್ಯವಸ್ಥೆಯ ಬಲವರ್ಧನೆ, ಹಾಸ್ಟೆಲ್ ವಿದ್ಯಾರ್ಥಿಗಳ ಸಮಸ್ಯೆಗಳು, ವಿದ್ಯಾರ್ಥಿವೇತನ, ಶುಲ್ಕ ಸೇರಿದಂತೆ ಹಲವು ವಿಚಾರಗಳ ಕುರಿತು ಸಮ್ಮೇಳನದಲ್ಲಿ ವಿಸ್ತೃತ ಚರ್ಚೆ ನಡೆಯಿತು.
ಸಮ್ಮೇಳನದ ಬಳಿಕ 25 ಸದಸ್ಯರನ್ನು ಒಳಗೊಂಡ ನೂತನ ಕೊಪ್ಪಳ ಜಿಲ್ಲಾ ಸಮಿತಿಯನ್ನು ರಚಿಸಲಾಯಿತು. ನೂತನ ಜಿಲ್ಲಾ ಸಮಿತಿಯ ಅಧ್ಯಕ್ಷರಾಗಿ ಶಿವಕುಮಾರ್ ಈಚನಾಳ್ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ನಾಗರಾಜ್ ಯು.ಎಂ. ಸುಗೂರ್ ಅವರನ್ನು ಆಯ್ಕೆ ಮಾಡಲಾಯಿತು.
ಉಪಾಧ್ಯಕ್ಷರಾಗಿ ದೀಪಾ, ಬಾಲಾಜಿ ಚಳ್ಳಾರಿ, ಶರೀಫ್ ಎಂ.ಪಿ. ಹಾಗೂ ಹನುಮೇಶ್ ಮ್ಯಾಗಡಿ ಆಯ್ಕೆಯಾದರು. ಸಹ ಕಾರ್ಯದರ್ಶಿಗಳಾಗಿ ಮೌನೇಶ್ ದಾಸರ್, ರಂಜಿತ್, ದರ್ಶನ್ ಹೊಸಕೆರ ಹಾಗೂ ಯಲ್ಲಪ್ಪ ಸುಳೆಕಲ್ ಆಯ್ಕೆಯಾದರು.
ಕಾರ್ಯಕಾರಿ ಸಮಿತಿ ಸದಸ್ಯರಾಗಿ ಹನುಮೇಶ್, ಲಕ್ಷ್ಮಿ, ಶ್ರೀದೇವಿ, ಶರಣಬಸವ, ದುರ್ಗೇಶ್, ಮಾರುತಿ, ಯಮನೂರು ಹಾಗೂ ಪರಶುರಾಮ್ ಅವರನ್ನು ಆಯ್ಕೆ ಮಾಡಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ನೂತನ ಜಿಲ್ಲಾ ಅಧ್ಯಕ್ಷ ಶಿವಕುಮಾರ್ ಈಚನಾಳ್ ಹಾಗೂ ಪ್ರಧಾನ ಕಾರ್ಯದರ್ಶಿ ನಾಗರಾಜ್ ಯು.ಎಂ. ಸುಗೂರ್, ಜಿಲ್ಲೆಯ ಎಲ್ಲ ವಿದ್ಯಾರ್ಥಿಗಳಿಗೆ ಗುಣಮಟ್ಟದ ಹಾಗೂ ಸಮಾನ ಶಿಕ್ಷಣ ದೊರೆಯುವಂತೆ ಮಾಡುವ ನಿಟ್ಟಿನಲ್ಲಿ ಎಸ್‌ಎಫ್‌ಐ ಕಾರ್ಯನಿರ್ವಹಿಸಲಿದೆ ಎಂದರು.
ಸರ್ಕಾರಿ ಶಿಕ್ಷಣ ಸಂಸ್ಥೆಗಳನ್ನು ಬಲಪಡಿಸುವುದು, ವಿದ್ಯಾರ್ಥಿಗಳು ಎದುರಿಸುತ್ತಿರುವ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದು ಹಾಗೂ ವಿದ್ಯಾರ್ಥಿಗಳ ಪ್ರಜಾಸತ್ತಾತ್ಮಕ ಹಕ್ಕುಗಳ ರಕ್ಷಣೆಗಾಗಿ ಮುಂದಿನ ದಿನಗಳಲ್ಲಿ ಸಂಘಟಿತ ಹೋರಾಟಗಳನ್ನು ರೂಪಿಸಲಾಗುವುದು. “ಸರ್ವರಿಗೂ ಶಿಕ್ಷಣ, ಸರ್ವರಿಗೂ ಉದ್ಯೋಗ” ಎಂಬ ಆಶಯದೊಂದಿಗೆ ಕಾರ್ಯನಿರ್ವಹಿಸುವುದಾಗಿ ಅವರು ತಿಳಿಸಿದರು.

Total Views: 0
ಜಾಹೀರಾತು
Share This Article