
24-hour complaint monitoring cell for filing model code of conduct violation complaints
ಮಾದರಿ ನೀತಿ ಸಂಹಿತೆ ಉಲ್ಲಂಘನೆ ದೂರುಗಳ ಸಲ್ಲಿಕೆಗೆ 24 ಗಂಟೆಗಳ ದೂರು ಮೇಲ್ವಿಚಾರಣಾ ಕೋಶ
ಕೊಪ್ಪಳ ಅಕ್ಟೋಬರ್ 07 (ಕರ್ನಾಟಕ ವಾರ್ತೆ): ಭಾರತ ಚುನಾವಣಾ ಆಯೋಗವು ದಿನಾಂಕ 22.09.2026 ರಂದು ಕರ್ನಾಟಕ ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯನ್ನು ಘೋಷಿಸಿ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಈ ಹಿನ್ನೆಲೆಯಲ್ಲಿ ಚುನಾವಣಾ ಮಾದರಿ ನೀತಿ ಸಂಹಿತೆ ಹಾಗೂ ಮಾರ್ಗಸೂಚಿಗಳ ಉಲ್ಲಂಘನೆಯಾಗದಂತೆ ನಿಗಾ ವಹಿಸಲು ಮತ್ತು ಸಾರ್ವಜನಿಕರು ದೂರುಗಳನ್ನು ಸುಲಭವಾಗಿ ಸಲ್ಲಿಸಲು ಅನುಕೂಲವಾಗುವಂತೆ ಕಲಬುರಗಿ ಪ್ರಾದೇಶಿಕ ಆಯುಕ್ತರ ಕಾರ್ಯಾಲಯದಲ್ಲಿ 24 ಗಂಟೆಗಳ ‘ದೂರು ಮೇಲ್ವಿಚಾರಣಾ ಕೋಶ’ವನ್ನು ಈಗಾಗಲೇ ಆರಂಭಿಸಲಾಗಿದೆ.
ಕರ್ನಾಟಕ ಈಶಾನ್ಯ ಶಿಕ್ಷಕರ ಕ್ಷೇತ್ರ ಚುನಾವಣೆಗೆ ಸಂಬಂಧಿಸಿದಂತೆ ನೀತಿ ಸಂಹಿತೆ ಅಥವಾ ನಿಯಮಗಳ ಉಲ್ಲಂಘನೆಯಾದಲ್ಲಿ ಸಾರ್ವಜನಿಕರು ಲಿಖಿತ ರೂಪದಲ್ಲಿ ಅಥವಾ ದೂರವಾಣಿ ಮೂಲಕ ದೂರುಗಳನ್ನು ಸಲ್ಲಿಸಬಹುದಾಗಿದ್ದು, ದೂರವಾಣಿ ಸಂಖ್ಯೆಯು 08472-200255 ಆಗಿರುತ್
*ಲಿಖಿತ ದೂರು ಸಲ್ಲಿಸಬೇಕಾದ ವಿಳಾಸ:* ಚುನಾವಣಾಧಿಕಾರಿಗಳು, ಕರ್ನಾಟಕ ಈಶಾನ್ಯ ಶಿಕ್ಷಕರ ಕ್ಷೇತ್ರ ಹಾಗೂ ಪ್ರಾದೇಶಿಕ ಆಯುಕ್ತರ ಕಾರ್ಯಾಲಯ, ಚುನಾವಣಾ ಶಾಖೆ, 2ನೇ ಮಹಡಿ, ಜಿಲ್ಲಾಡಳಿತ ಭವನ, ಸ್ಟೇಷನ್ ರಸ್ತೆ, ಕಲಬುರಗಿ – 585102.
ಈ ದೂರು ನಿರ್ವಹಣಾ ಕೋಶವು ದಿನದ 24 ಗಂಟೆಯೂ ಸಾರ್ವಜನಿಕರ ಸೇವೆಗೆ ಲಭ್ಯವಿರುತ್ತದೆ ಎಂದು ಕರ್ನಾಟಕ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣಾಧಿಕಾರಿಗಳು ಆಗಿರುವ ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತರು ಅಧಿಸೂಚನೆಯಲ್ಲಿ ತಿಳಿಸಿದ್ದಾರೆ.



