ತಾವರಗೇರಾ: ತಾತ್ಕಾಲಿಕ ಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾ

H.Mallikarjun
H.Mallikarjun - Kalyanasiri
1 Min Read
ಜಾಹೀರಾತು

Tavaragera: Invitation to apply for the position of temporary guest teacher

 

 

ತಾವರಗೇರಾ: ತಾತ್ಕಾಲಿಕ ಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ

ಜಾಹೀರಾತು

ಕೊಪ್ಪಳ ಅಕ್ಟೋಬರ್ 07 (ಕರ್ನಾಟಕ ವಾರ್ತೆ): ಜಿಲ್ಲೆಯ ಕುಷ್ಟಗಿ ತಾಲೂಕಿನ ತಾವರಗೇರಾ ಮೌಲಾನಾ ಆಜಾದ್ ಮಾದರಿ ಶಾಲೆಯಲ್ಲಿ ಗಣಿತ ವಿಷಯದ ಶಿಕ್ಷಕ ತಾತ್ಕಾಲಿಕ ಹುದ್ದೆಗೆ ಅತಿಥಿ ಶಿಕ್ಷಕರ ನೇಮಕಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ತಾವರಗೇರಾ ಮೌಲಾನಾ ಆಜಾದ್ ಮಾದರಿ ಶಾಲೆಯಲ್ಲಿ 2026-27 ನೇ ಶೈಕ್ಷಣಿಕ ಸಾಲಿನಲ್ಲಿ ಗಣಿತ ವಿಷಯದ ಶಿಕ್ಷಕ ಹುದ್ದೆ ಖಾಲಿ ಇದ್ದು, ಈ ಹುದ್ದೆಗೆ ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರನ್ನು ಗೌರವಧನದ ಆಧಾರದ ಮೇಲೆ ನೇಮಿಸಿಕೊಳ್ಳಲು ಉದ್ದೇಶಿಸಲಾಗಿದೆ. ಗಣಿತ ವಿಷಯದಲ್ಲಿ ಪದವಿ ಜೊತೆಗೆ ಬಿ.ಇಡಿ ವಿದ್ಯಾರ್ಹತೆ ಹೊಂದಿದ ಅರ್ಹ ಆಸಕ್ತ ಅಭ್ಯರ್ಥಿಗಳು ಅಕ್ಟೋಬರ್ 22 ರೊಳಗಾಗಿ ಮೌಲಾನಾ ಆಜಾದ್ ಮಾದರಿ ಶಾಲೆ ತಾವರಗೇರಾ ಇಲ್ಲಿಗೆ ಬಂದು ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ mo.ನಂ: 9900617290 ಗೆ ಸಂಪರ್ಕಿಸುವಂತೆ ಶಾಲೆಯ ಮುಖ್ಯೋಪಾಧ್ಯಾಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Total Views: 0
ಜಾಹೀರಾತು
Share This Article