ಕೊಪ್ಪಳ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಸಭೆ

H.Mallikarjun
H.Mallikarjun - Kalyanasiri
2 Min Read
ಜಾಹೀರಾತು

Koppal District Tourism Development Committee Meeting

ಕೊಪ್ಪಳ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಸಭೆ

ಹೋಂಸ್ಟೇಗಳಿಗೆ ಅನುಮತಿ ನೀಡುವ ಮೂಲಕ ಜಿಲ್ಲೆಯ ಪ್ರವಾಸೋದ್ಯಮ ಉತ್ತೇಜಿಸಿ: ಡಾ.ಸುರೇಶ ಬಿ.ಇಟ್ನಾಳ

 ಕೊಪ್ಪಳ, ಅಕ್ಟೋಬರ್ 09, (ಕರ್ನಾಟಕ ವಾರ್ತೆ): ಪ್ರವಾಸೋದ್ಯಮ ಇಲಾಖೆಯ ನಿರ್ದೇಶನದಂತೆ ಹೋಂಸ್ಟೇಗಳ ನೋಂದಣಿ ಕಡ್ಡಾಯವಾಗಿದ್ದು, ಹೋಂಸ್ಟೇಗಳಿಗೆ ನಿಯಮಾನುಸಾರ ಅನುಮತಿ ನೀಡುವ ಮೂಲಕ ಜಿಲ್ಲೆಯ ಪ್ರವಾಸೋದ್ಯಮಕ್ಕೆ ಪ್ರೋತ್ಸಾಹ ನೀಡಿ ಎಂದು ಜಿಲ್ಲಾಧಿಕಾರಿಗಳು ಹಾಗೂ ಕೊಪ್ಪಳ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಡಾ.ಸುರೇಶ ಬಿ.ಇಟ್ನಾಳ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಶುಕ್ರವಾರದಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಪ್ರವಾಸೋದ್ಯಮ ಇಲಾಖೆಯಿಂದ ಆಯೋಜಿಸಲಾಗಿದ್ದ ಕೊಪ್ಪಳ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಡಿದರು.
ಕೊಪ್ಪಳ ಜಿಲ್ಲೆಯ ಪ್ರಮುಖ ಪ್ರವಾಸಿ ಕೇಂದ್ರಗಳಲ್ಲಿರುವ ಹೋಂಸ್ಟೇಗಳ ನೋಂದಣಿ ಕಡ್ಡಾಯವಾಗಿದ್ದು, ನೋಂದಣಿಗಾಗಿ ಒಟ್ಟು ಸ್ವೀಕೃತವಾದ 39 ಅರ್ಜಿಗಳಲ್ಲಿ ನಿಯಮಾನುಸಾರ ಹಾಗೂ ಮಾರ್ಗಸೂಚಿಯನ್ವಯ ದಾಖಲೆಗಳನ್ನು ಹೊಂದಿರುವ 11 ಹೋಂಸ್ಟೇಗಳಿಗೆ ಸಮಿತಿಯಿಂದ ಅನುಮೋದನೆ ನೀಡಲಾಗಿದೆ. ಅಪೂರ್ಣ ದಾಖಲೆ ಹೊಂದಿರುವ ಹಾಗೂ ಬಾಕಿ ಇರುವ ಅರ್ಜಿಗಳನ್ನು ಪರಿಶೀಲಿಸಿ ಶೀಘ್ರವಾಗಿ ವಿಲೇವಾರಿ ಮಾಡಿ. ಈ ಮೂಲಕ ಜಿಲ್ಲೆಯ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಿ ಎಂದು ಅವರು ಇಲಾಖಾ ಅಧಿಕಾರಿಗಳಿಗೆ ತಿಳಿಸಿದರು.
ಪ್ರವಾಸೋದ್ಯಮ ಇಲಾಖೆಯಿಂದ ಜಿಲ್ಲೆಯಲ್ಲಿ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ನಿಗದಿತ ಕಾಲಮಿತಿಯಲ್ಲಿ ಪೂರ್ಣಗೊಳಿಸಿ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಡೆಸ್ಟಿನೇಶನ್ ಡೆವೆಲಪ್‌ಮೆಂಟ್ ಪ್ರಾಜೆಕ್ಟ್ನಲ್ಲಿ ಜಿಲ್ಲೆಯ ಅಶೋಕ ಶಾಸನ, ಪಾಲ್ಕಿಗುಂಡು ಶಾಸನ ಮತ್ತು ಕಿನ್ನಾಳ ಕಲೆಯನ್ನು ಅಭಿವೃದ್ಧಿಗೊಳಿಸಲು ಪ್ರಸ್ತಾವನೆ ಸಲ್ಲಿಸಿ ಎಂದು ಸಂಬAಧಿಸಿದ ಇಲಾಖಾ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಸೂಚಿಸಿದರು.
ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ ಅವರು ಮಾತನಾಡಿ, ಜಿಲ್ಲೆಯ ಪ್ರಮುಖ ಪ್ರವಾಸಿ ತಾಣಗಳನ್ನು ಅಭಿವೃದ್ಧಿಗೊಳಿಸಿ, ಪಾರಂಪರಿಕ ಸ್ಥಳಗಳ ರಕ್ಷಣೆಗೆ ಅಗತ್ಯ ಕ್ರಮ ವಹಿಸಿ ಎಂದು ಅಧಿಕಾರಿಗಳಿಗೆ ತಿಳಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಸಹಾಯಕ ಆಯುಕ್ತರಾದ ಮಹಮ್ಮದ್ ಜೀಲಾನಿ, ಹಂಪಿ ಪಾರಂಪರಿಕ ಅಭಿವೃದ್ಧಿ ಕ್ಷೇತ್ರದ ಆಯುಕ್ತರಾದ ಬಾಲಕೃಷ್ಣ, ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರಾದ ವಿಠ್ಠಲ್ ಜಾಬಗೌಡರ್, ಉಪ ಅರಣ್ಯ ಸಂರಕ್ಷಣಾಧಿಕಾರಿ(ಸಾಮಾಜಿಕ ವಲಯ) ಹುಸೇನ್, ಗಂಗಾವತಿ ತಹಶೀಲ್ದಾರ ವಿನಾಯಕ ಗೋಡ್ಬೋಲೆ, ತಾಲ್ಲೂಕು ಪಂಚಾಯತಿ ಕಾರ್ಯ ನಿರ್ವಾಹಕ ಅಧಿಕಾರಿ ದುಂಡಪ್ಪ ತುರಾದಿ, ಕೆಟಿಐಎಲ್ ನ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
Total Views: 0
ಜಾಹೀರಾತು
Share This Article