ನವೆಂಬರ್ 4ರಿಂದ ಬೆಂಗಳೂರಿನಲ್ಲಿ ಎರಡು ದಿನಗಳ ರಾಷ್ಟ್ರೀಯ ಸಮ್ಮೇಳನ

H.Mallikarjun
H.Mallikarjun - Kalyanasiri
1 Min Read
ಜಾಹೀರಾತು

Two-day national conference in Bengaluru starting November 4

ಸುಸ್ಥಿರ ಅಭಿವೃದ್ಧಿಗಾಗಿ ವಿರಳ ಖನಿಜಗಳು’

ಜಾಹೀರಾತು


ನವೆಂಬರ್ 4ರಿಂದ ಬೆಂಗಳೂರಿನಲ್ಲಿ ಎರಡು ದಿನಗಳ ರಾಷ್ಟ್ರೀಯ ಸಮ್ಮೇಳನ


ಕೊಪ್ಪಳ ಅಕ್ಟೋಬರ್ 13 (ಕರ್ನಾಟಕ ವಾರ್ತೆ): ಕರ್ನಾಟಕ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ವ್ಯಾಪ್ತಿಯಲ್ಲಿರುವ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ (ಕೆ.ಎಸ್.ಟಿ.ಎ) ವತಿಯಿಂದ “ಸುಸ್ಥಿರ ಅಭಿವೃದ್ಧಿಗಾಗಿ ವಿರಳ ಖನಿಜ ಮೌಲ್ಯ ಸರಪಳಿಯ ಭದ್ರತೆ” (Securing the Critical Mineral Value Chain for Sustainable Development) ಎಂಬ ವಿಷಯದ ಕುರಿತು ಎರಡು ದಿನಗಳ ರಾಷ್ಟ್ರೀಯ ಸಮ್ಮೇಳನವನ್ನು ಆಯೋಜಿಸಲಾಗಿದೆ.

ಈ ಸಮ್ಮೇಳನವು ನವೆಂಬರ್ 04 ಮತ್ತು 05 ರಂದು ಬೆಂಗಳೂರಿನ ವಿದ್ಯಾರಣ್ಯಪುರ ಬಳಿಯ ಪ್ರೊ. ಯು.ಆರ್. ರಾವ್ ವಿಜ್ಞಾನ ಭವನದಲ್ಲಿರುವ ಅಕಾಡೆಮಿಯ ಕಚೇರಿಯಲ್ಲಿ ನಡೆಯಲಿದ್ದು, ವಿವಿಧ ಪ್ರತಿಷ್ಠಿತ ಸಂಸ್ಥೆಗಳ ಖ್ಯಾತ ವಿಜ್ಞಾನಿಗಳು ಈ ಸಮ್ಮೇಳನದಲ್ಲಿ ತಾಂತ್ರಿಕ ಉಪನ್ಯಾಸಗಳನ್ನು ನೀಡಲಿದ್ದಾರೆ. ವಿಜ್ಞಾನಿಗಳು, ಖನಿಜಾನ್ವೇಷಣೆ, ಗಣಿಗಾರಿಕೆ ಹಾಗೂ ಲೋಹಶಾಸ್ತ್ರ ಸಂಸ್ಥೆಗಳ ಪ್ರತಿನಿಧಿಗಳು, ಸಂಶೋಧನಾ ವಿದ್ಯಾರ್ಥಿಗಳು, ಶಿಕ್ಷಣ ತಜ್ಞರು, ಕೈಗಾರಿಕೋದ್ಯಮಿಗಳು, ನವೋದ್ಯಮಗಳ (ಸ್ಟಾರ್ಟಪ್ಸ್) ಪ್ರತಿನಿಧಿಗಳು, ಖರೀದಿದಾರರು ಮತ್ತು ರಫ್ತುದಾರರು ಭಾಗವಹಿಸಬಹುದಾಗಿದೆ.
ಸಂಶೋಧನಾ ಪ್ರಬಂಧ ಮಂಡನೆಗೆ ಅವಕಾಶ: ಯುವ ವಿಜ್ಞಾನಿಗಳು ಮತ್ತು ಸಂಶೋಧನಾ ವಿದ್ಯಾರ್ಥಿಗಳಿಗೆ ತಮ್ಮ ಸಂಶೋಧನಾ ಪ್ರಬಂಧಗಳನ್ನು (ಪೋಸ್ಟರ್ ರಿಸರ್ಚ್ ಪೆಪರ್) ಮಂಡಿಸಲು ಅವಕಾಶ ಕಲ್ಪಿಸಲಾಗಿದ್ದು, ಆಯ್ಕೆಯಾಗುವ ಅತ್ಯುತ್ತಮ ಪ್ರಬಂಧಕ್ಕೆ ನಗದು ಬಹುಮಾನ ನೀಡಲಾಗುವುದು.
ನೋಂದಣಿಗಾಗಿ ಅಕ್ಟೋಬರ್ 30 ಕೊನೆಯ ದಿನಾಂಕವಾಗಿದ್ದು, ಆಸಕ್ತರು https://forms.gle/wgyoGKPOZVK8RJhCA ಲಿಂಕ್ ಮೂಲಕ ನೋಂದಾಯಿಸಿಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ: 9620767819, 9743084194 ಗೆ ಸಂಪರ್ಕಿಸಬಹುದು ಅಥವಾ ವೆಬ್‌ಸೈಟ್ https://kstacademy.in ನ್ನು ವೀಕ್ಷಿಸಬಹುದಾಗಿದೆ.

ಆಸಕ್ತ ವಿದ್ಯಾರ್ಥಿಗಳು, ಪ್ರಾಧ್ಯಾಪಕರು ಹಾಗೂ ಸಂಶೋಧಕರು ಈ ರಾಷ್ಟ್ರೀಯ ಸಮ್ಮೇಳನದಲ್ಲಿ ಭಾಗವಹಿಸಿ ಪ್ರಯೋಜನ ಪಡೆಯುವಂತೆ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಆನಂದ್ ಆರ್. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Total Views: 0
ಜಾಹೀರಾತು
Share This Article