ಜಾಹೀರಾತು

Felicitation of B. Shivanna, the new Chairman of the Pollution Control Board
ಮಾಲಿನ್ಯ ನಿಯಂತ್ರಣ ಮಂಡಳಿ ನೂತನ ಅಧ್ಯಕ್ಷ ಬಿ. ಶಿವಣ್ಣ ಅವರಿಗೆ ಸನ್ಮಾನ
ಬೆಂಗಳೂರು, ಅ.15: ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿಯ ನೂತನ ಅಧ್ಯಕ್ಷರಾಗಿ ಪದಗ್ರಹಣ ಮಾಡಿದ ಆನೇಕಲ್ ಕ್ಷೇತ್ರದ ಶಾಸಕ ಬಿ. ಶಿವಣ್ಣ ಅವರನ್ನು ಬೆಂಗಳೂರು ವಿಶ್ವವಿದ್ಯಾಲಯದ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ವಿಭಾಗದ ಮುಖ್ಯಸ್ಥ ಹಾಗೂ ವಿಶ್ವವಿದ್ಯಾಲಯದ ಗ್ರಂಥಪಾಲಕ ಡಾ. ಬಿ. ರಘುನಂದನ ಅವರು ಸನ್ಮಾನಿಸಿ ಅಭಿನಂದಿಸಿದರು.
ಈ ಸಂದರ್ಭದಲ್ಲಿ ಬಿ. ಶಿವಣ್ಣ ಅವರಿಗೆ ಶುಭಾಶಯಗಳನ್ನು ಸಲ್ಲಿಸಿ, ನೂತನ ಜವಾಬ್ದಾರಿಯಲ್ಲಿ ಯಶಸ್ಸು ದೊರೆಯಲಿ ಎಂದು ಹಾರೈಸಿದರು.
ಕಾರ್ಯಕ್ರಮದಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ವಿವಿಧ ವಿಭಾಗಗಳ ಸಂಶೋಧನಾ ವಿದ್ಯಾರ್ಥಿಗಳಾದ ಚಂದ್ರಪ್ಪ ಎಂ. ಮಿಡ್ಲುಮುನಿ, ಅರ್ಜುನ್ ಏಕಲವ್ಯ, ಸಂತೋಷ, ರವಿಕುಮಾರ್, ಪ್ರಜ್ವಲ್, ಪ್ರಿಯಾಂಕ, ಸೀಮಂತ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
.
Total Views:
0
ಜಾಹೀರಾತು




