ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ: ಖಾಲಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

H.Mallikarjun
H.Mallikarjun - Kalyanasiri
1 Min Read
ಜಾಹೀರಾತು
ಜಾಹೀರಾತು
ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ: ಖಾಲಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಕೊಪ್ಪಳ, ಅಕ್ಟೋಬರ್ 28, (ಕರ್ನಾಟಕ ವಾರ್ತೆ): ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ, ದೇವದಾಸಿ ಪುನರ್ವಸತಿ ಯೋಜನೆ, ಕೊಪ್ಪಳ ಜಿಲ್ಲಾ ಕಚೇರಿಯಲ್ಲಿ ಖಾಲಿ ಇರುವ ಕಛೇರಿ ಸಹಾಯಕರು ತಾತ್ಕಾಲಿಕ/ ಗುತ್ತಿಗೆ ಆಧಾರದ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು 7ನೇ ತರಗತಿ ಉತ್ತೀರ್ಣ ಹೊಂದಿದ ಹಾಗೂ ಕನ್ನಡದಲ್ಲಿ ಓದಲು, ಬರೆಯಲು ಬರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ನವೆಂಬರ್ 07 ಕೊನೆಯ ದಿನವಾಗಿದೆ. ಅಂದು ಸಂಜೆ 5 ಗಂಟೆಯೊಳಗೆ ನಿಗದಿತ ಅರ್ಜಿ ನಮೂನೆಯಲ್ಲಿ ಅರ್ಜಿಯನ್ನು ಯೋಜನಾಧಿಕಾರಿಗಳು, ಯೋಜನಾಧಿಕಾರಿಗಳ ಕಛೇರಿ, ಮಳಿಗೆ-29, ನಗರಾಭಿವೃದ್ಧಿ ಪ್ರಾಧಿಕಾರ, ಹೊಸಪೇಟೆ ರಸ್ತೆ, ಕೊಪ್ಪಳ-583231 ಇಲ್ಲಿಗೆ ಸಲ್ಲಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Total Views: 2
ಜಾಹೀರಾತು
Share This Article
Leave a Comment