ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯ ಮಾಹಿತಿ ಪೋಸ್ಟರ್ ಬಿಡುಗಡೆ

H.Mallikarjun
H.Mallikarjun - Kalyanasiri
1 Min Read
ಜಾಹೀರಾತು
ಜಾಹೀರಾತು
Release of information poster for the Rural Self-Employment Training Institute

ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯ ಮಾಹಿತಿ ಪೋಸ್ಟರ್ ಬಿಡುಗಡೆಕೌಶಲ್ಯಾಭಿವೃದ್ಧಿ ಮತ್ತು ಸ್ವಯಂ ಉದ್ಯೋಗಕ್ಕೆ ಉತ್ತೇಜನ ನೀಡಲು ಜಿಲ್ಲಾಡಳಿತದ ಕ್ರಮಕೊಪ್ಪಳ, ಅ. 29: ಗ್ರಾಮೀಣ ಯುವಜನರಿಗೆ ಸ್ವಯಂ ಉದ್ಯೋಗದ ಕುರಿತು ಮಾಹಿತಿ ನೀಡುವ ಹಾಗೂ ಕೌಶಲ್ಯಾಭಿವೃದ್ಧಿಗೆ ಉತ್ತೇಜನ ನೀಡುವ ಉದ್ದೇಶದಿಂದ ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯ (RSETI) ಕುರಿತ ಮಾಹಿತಿ, ಕಲಿಕೆ ಮತ್ತು ಸಂವಹನ ಪೋಸ್ಟರ್‌ಗಳನ್ನು ಬಿಡುಗಡೆ ಮಾಡಲಾಯಿತು.
ಗುರುವಾರ ಕೊಪ್ಪಳ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಶಿಶಿಕ್ಷು ತರಬೇತಿ ಕುರಿತ ಜಿಲ್ಲಾ ಮಟ್ಟದ ಕೌಶಲ್ಯ ಸಮನ್ವಯ ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿ ಸುರೇಶ ಬಿ. ಇಟ್ನಾಳ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಾಹಿಲ್ ಬಾಗ್ಲಾ ಅವರು ಪೋಸ್ಟರ್‌ಗಳನ್ನು ಬಿಡುಗಡೆಗೊಳಿಸಿದರು.
ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯ ಚಟುವಟಿಕೆಗಳು ಹಾಗೂ ಸ್ವಯಂ ಉದ್ಯೋಗದ ಕುರಿತ ಮಾಹಿತಿ ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಈ ಪೋಸ್ಟರ್‌ಗಳು ಸಹಕಾರಿಯಾಗಲಿವೆ.
ಕಾರ್ಯಕ್ರಮದಲ್ಲಿ ಜಿಲ್ಲಾ ಮಾರ್ಗದರ್ಶಿ ಬ್ಯಾಂಕ್ ವ್ಯವಸ್ಥಾಪಕ ಮಾರುತಿ ಕೆ., ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರು, ಜಿಲ್ಲಾ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಅಧಿಕಾರಿಗಳು, ಜಿಲ್ಲೆಯ ವಿವಿಧ ಐಟಿಐ ಕಾಲೇಜುಗಳ ಪ್ರಾಂಶುಪಾಲರು ಸೇರಿದಂತೆ ಇತರರು ಉಪಸ್ಥಿತರಿದ್ದರು.

ಜಾಹೀರಾತು
Total Views: 0
ಜಾಹೀರಾತು
Share This Article
Leave a Comment