ಪಾರ್ಶ್ವವಾಯು ಲಕ್ಷಣ ಕಂಡರೆ ತಕ್ಷಣ ಚಿಕಿತ್ಸೆ ಪಡೆಯಿರಿ: ಗಂಗಮ್ಮ ಕೆ.

H.Mallikarjun
H.Mallikarjun - Kalyanasiri
2 Min Read
ಜಾಹೀರಾತು
ಜಾಹೀರಾತು
Seek immediate treatment if symptoms of a stroke appear: Gangamma K.

ಪಾರ್ಶ್ವವಾಯು ಲಕ್ಷಣ ಕಂಡರೆ ತಕ್ಷಣ ಚಿಕಿತ್ಸೆ ಪಡೆಯಿರಿ: ಗಂಗಮ್ಮ ಕೆ.

ಜಾಹೀರಾತು

ವಿಶ್ವ ಪಾರ್ಶ್ವವಾಯು ದಿನಾಚರಣೆ ಅಂಗವಾಗಿ ಹಕ್ಕಿ-ಪಿಕ್ಕಿ ಜನಾಂಗದವರಿಗೆ ಆರೋಗ್ಯ ಜಾಗೃತಿ ಕಾರ್ಯಕ್ರಮ

ಕೊಪ್ಪಳ, ಅ. 29: ಪಾರ್ಶ್ವವಾಯು ಸಂಭವಿಸಿದಾಗ ಪ್ರತಿ ನಿಮಿಷವೂ ಅಮೂಲ್ಯವಾಗಿದ್ದು, ಆರಂಭಿಕ ಲಕ್ಷಣಗಳನ್ನು ಗುರುತಿಸಿ ತಕ್ಷಣ ಚಿಕಿತ್ಸೆ ಪಡೆಯುವುದು ಅತ್ಯಂತ ಮುಖ್ಯ ಎಂದು ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಗಂಗಮ್ಮ ಕೆ. ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಘಟಕ ಹಾಗೂ ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ, ಕೊಪ್ಪಳ ಇವರ ಸಂಯುಕ್ತಾಶ್ರಯದಲ್ಲಿ ಗುರುವಾರ ನಗರದ 12ನೇ ವಾರ್ಡ್‌ನ ಸಜ್ಜಿಹೊಲ ಪ್ರದೇಶದಲ್ಲಿ ಹಕ್ಕಿ-ಪಿಕ್ಕಿ ಜನಾಂಗದವರಿಗೆ ಹಮ್ಮಿಕೊಂಡಿದ್ದ ವಿಶ್ವ ಪಾರ್ಶ್ವವಾಯು ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಪ್ರತಿ ವರ್ಷ ಅಕ್ಟೋಬರ್ 29ರಂದು ವಿಶ್ವ ಪಾರ್ಶ್ವವಾಯು ದಿನವನ್ನು ಆಚರಿಸಲಾಗುತ್ತದೆ. ಈ ವರ್ಷದ ಘೋಷವಾಕ್ಯ “ಪ್ರತಿ ನಿಮಿಷವೂ ಮುಖ್ಯ” (Every Minute Counts) ಎಂಬುದಾಗಿದೆ. ಮೆದುಳಿಗೆ ರಕ್ತದ ಪೂರೈಕೆಯಲ್ಲಿ ಅಡಚಣೆ ಉಂಟಾದಾಗ ಅಥವಾ ರಕ್ತನಾಳ ಒಡೆದಾಗ ಪಾರ್ಶ್ವವಾಯು ಸಂಭವಿಸಬಹುದು. ಇದರಿಂದ ಮೆದುಳಿನ ಕೋಶಗಳಿಗೆ ಹಾನಿಯಾಗುವ ಸಾಧ್ಯತೆ ಇರುವುದರಿಂದ ಸಕಾಲದಲ್ಲಿ ಚಿಕಿತ್ಸೆ ಪಡೆಯುವುದು ಅಗತ್ಯವಾಗಿದೆ ಎಂದು ತಿಳಿಸಿದರು.
ಪಾರ್ಶ್ವವಾಯು ಲಕ್ಷಣ ಗುರುತಿಸಲು FAST ಸೂತ್ರ ನೆನಪಿಡಿ
ಪಾರ್ಶ್ವವಾಯುವಿನ ಆರಂಭಿಕ ಲಕ್ಷಣಗಳನ್ನು ಗುರುತಿಸಲು FAST ಸೂತ್ರವನ್ನು ನೆನಪಿನಲ್ಲಿಟ್ಟುಕೊಳ್ಳಬೇಕು ಎಂದು ಗಂಗಮ್ಮ ಕೆ. ತಿಳಿಸಿದರು.
F – Face (ಮುಖ): ಮುಖದ ಒಂದು ಭಾಗ ಸೊಟ್ಟಗಾಗುವುದು.
A – Arms (ಕೈಗಳು): ಕೈಯಲ್ಲಿ ಬಲ ಕಡಿಮೆಯಾಗಿ ಕೈ ಮೇಲಕ್ಕೆ ಎತ್ತಲು ಸಾಧ್ಯವಾಗದಿರುವುದು.
S – Speech (ಮಾತು): ಮಾತನಾಡಲು ತೊಂದರೆಯಾಗುವುದು ಅಥವಾ ಮಾತು ಅಸ್ಪಷ್ಟವಾಗುವುದು.
T – Time (ಸಮಯ): ಈ ಲಕ್ಷಣಗಳು ಕಂಡ ತಕ್ಷಣ ತುರ್ತು ವೈದ್ಯಕೀಯ ನೆರವು ಪಡೆಯಬೇಕು.
ಪಾರ್ಶ್ವವಾಯು ತಡೆಗಟ್ಟಲು ರಕ್ತದೊತ್ತಡ ಮತ್ತು ಮಧುಮೇಹವನ್ನು ನಿಯಂತ್ರಣದಲ್ಲಿಟ್ಟುಕೊಳ್ಳಬೇಕು. ತಂಬಾಕು ಹಾಗೂ ಮದ್ಯಪಾನದಿಂದ ದೂರವಿದ್ದು, ಆರೋಗ್ಯಕರ ಆಹಾರ ಸೇವನೆ ಮತ್ತು ದೇಹದ ತೂಕದ ನಿಯಂತ್ರಣಕ್ಕೆ ಆದ್ಯತೆ ನೀಡಬೇಕು ಎಂದು ಸಾರ್ವಜನಿಕರಿಗೆ ಅರಿವು ಮೂಡಿಸಿದರು.
ಕಾರ್ಯಕ್ರಮದಲ್ಲಿ ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ಶ್ರೀನಿವಾಸ, ನೌಶಾದ ಬೇಗಂ, ಅಂಗನವಾಡಿ ಕಾರ್ಯಕರ್ತೆ ಸಿದ್ದಮ್ಮ, ಆಶಾ ಕಾರ್ಯಕರ್ತೆಯರಾದ ಶೃತಿ ಬಿ.ಎಚ್., ರೇಣುಕಾ ಸೇರಿದಂತೆ ಸಾರ್ವಜನಿಕರು ಭಾಗವಹಿಸಿದ್ದರು.

Total Views: 0
ಜಾಹೀರಾತು
Share This Article
Leave a Comment