ನ. 26ರಂದು ಮೈಸೂರಿನಲ್ಲಿ ರಾಜ್ಯಮಟ್ಟದ ಸಂವಿಧಾನ ದಿನಾಚರಣೆ

H.Mallikarjun
H.Mallikarjun - Kalyanasiri
1 Min Read
ಜಾಹೀರಾತು
ಜಾಹೀರಾತು
State-level Constitution Day celebrations in Mysuru on Nov. 26

ನ. 26ರಂದು ಮೈಸೂರಿನಲ್ಲಿ ರಾಜ್ಯಮಟ್ಟದ ಸಂವಿಧಾನ ದಿನಾಚರಣೆ

ಜಾಹೀರಾತು

ಸಿದ್ದರಾಮಯ್ಯ ನೇತೃತ್ವದಲ್ಲಿ ಪೂರ್ವಭಾವಿ ಸಭೆ; ಅರ್ಥಪೂರ್ಣ ಆಚರಣೆಗೆ ಚರ್ಚೆ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನವೆಂಬರ್ 26ರಂದು ರಾಜ್ಯಮಟ್ಟದ ಸಂವಿಧಾನ ದಿನಾಚರಣೆಯನ್ನು ವಿಜೃಂಭಣೆಯಿಂದ ಆಯೋಜಿಸಲು ನಿರ್ಧರಿಸಲಾಗಿದ್ದು, ಈ ಹಿನ್ನೆಲೆಯಲ್ಲಿ ನಿಕಟಪೂರ್ವ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಪೂರ್ವಭಾವಿ ಸಭೆ ನಡೆಯಿತು.
ಗೃಹ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಸಭೆಯಲ್ಲಿ, ಸಂವಿಧಾನ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಹಾಗೂ ರಾಜ್ಯಮಟ್ಟದಲ್ಲಿ ಯಶಸ್ವಿಯಾಗಿ ನಡೆಸುವ ಕುರಿತು ಸವಿಸ್ತಾರವಾಗಿ ಚರ್ಚಿಸಲಾಯಿತು. ಕಾರ್ಯಕ್ರಮದ ರೂಪುರೇಷೆ, ಆಚರಣೆಯ ಮಹತ್ವ ಹಾಗೂ ಅಗತ್ಯ ಸಿದ್ಧತೆಗಳ ಕುರಿತು ಸಭೆಯಲ್ಲಿ ಸಮಾಲೋಚನೆ ನಡೆಸಲಾಯಿತು.
ಭಾರತದ ಸಂವಿಧಾನದ ಆಶಯಗಳು, ಪ್ರಜಾಪ್ರಭುತ್ವದ ಮೌಲ್ಯಗಳು, ಸಮಾನತೆ, ಸ್ವಾತಂತ್ರ್ಯ, ನ್ಯಾಯ ಮತ್ತು ಸಹೋದರತ್ವದ ತತ್ವಗಳನ್ನು ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಸಂವಿಧಾನ ದಿನಾಚರಣೆಗೆ ವಿಶೇಷ ಮಹತ್ವವಿದೆ.
ಸಭೆಯಲ್ಲಿ ಅನೇಕ ಸಚಿವರು, ಶಾಸಕರು ಹಾಗೂ ಹಿರಿಯ ರಾಜಕೀಯ ನಾಯಕರು ಉಪಸ್ಥಿತರಿದ್ದು, ರಾಜ್ಯಮಟ್ಟದ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸುವ ಕುರಿತು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು.
ಕಲ್ಯಾಣಸಿರಿ ವೆಬ್ ನ್ಯೂಸ್

Total Views: 0
ಜಾಹೀರಾತು
Share This Article
Leave a Comment