ಗಂಗಾವತಿಯಲ್ಲಿ ನ.1ರಂದು ಕಟ್ಟಡ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ

H.Mallikarjun
H.Mallikarjun - Kalyanasiri
1 Min Read
ಜಾಹೀರಾತು
ಜಾಹೀರಾತು

ಗಂಗಾವತಿಯಲ್ಲಿ ನ.1ರಂದು ಕಟ್ಟಡ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ

ಜಾಹೀರಾತು

ಟಿಟಿ ಲಸಿಕೆ, ಬಿಪಿ–ಶುಗರ್ ತಪಾಸಣೆ ಹಾಗೂ ರಕ್ತದಾನ ಶಿಬಿರ ಆಯೋಜನೆಕನಕ

ಗಂಗಾವತಿ: ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಕರ್ನಾಟಕ ರಾಜ್ಯ ಶ್ರಮಜೀವಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸೇವಾ ಸಂಘ (ರಿ) ವತಿಯಿಂದ ನ.1ರಂದು ಬೆಳಿಗ್ಗೆ 10 ಗಂಟೆಗೆ ನಗರದ ಎಸ್.ವಿ. ಸವಡಿ ಆಸ್ಪತ್ರೆ ಆವರಣದಲ್ಲಿ ಕಟ್ಟಡ ನಿರ್ಮಾಣ ಕಾರ್ಮಿಕರಿಗಾಗಿ ಉಚಿತ ಆರೋಗ್ಯ ತಪಾಸಣೆ, ಟಿಟಿ ಲಸಿಕೆ ವಿತರಣೆ ಹಾಗೂ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿದೆ ಎಂದು ಸಂಘದ ಸಂಸ್ಥಾಪಕ ರಾಜ್ಯಾಧ್ಯಕ್ಷ ಶಿವಕುಮಾರಗೌಡ ತಿಳಿಸಿದ್ದಾರೆ.
ಎಸ್.ವಿ. ಸವಡಿ ಆಸ್ಪತ್ರೆ, ಸ್ಫೂರ್ತಿ ಆಯುರ್ವೇದಿಕ್ ಕಾಲೇಜು ಹಾಗೂ ಅಂಜನಾದ್ರಿ ಬ್ಲಡ್ ಬ್ಯಾಂಕ್ ಸಹಯೋಗದಲ್ಲಿ ಶಿಬಿರ ನಡೆಯಲಿದೆ. ಶಿಬಿರದಲ್ಲಿ ಕಟ್ಟಡ ಕಾರ್ಮಿಕರಿಗೆ ಉಚಿತವಾಗಿ ಟಿಟಿ ಲಸಿಕೆ ನೀಡುವುದರ ಜೊತೆಗೆ ರಕ್ತದೊತ್ತಡ (ಬಿಪಿ), ಮಧುಮೇಹ (ಶುಗರ್) ಸೇರಿದಂತೆ ವಿವಿಧ ಆರೋಗ್ಯ ತಪಾಸಣೆಗಳನ್ನು ನಡೆಸಲಾಗುವುದು.
ಕಟ್ಟಡ ನಿರ್ಮಾಣ ಕಾರ್ಮಿಕರು ಪ್ರತಿನಿತ್ಯ ಅಪಾಯಕಾರಿ ಪರಿಸ್ಥಿತಿಗಳಲ್ಲಿ ಕೆಲಸ ನಿರ್ವಹಿಸುವುದರಿಂದ ಗಾಯಗಳು ಹಾಗೂ ವಿವಿಧ ಆರೋಗ್ಯ ಸಮಸ್ಯೆಗಳಿಗೆ ಒಳಗಾಗುವ ಸಾಧ್ಯತೆ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಕಾರ್ಮಿಕರಲ್ಲಿ ಆರೋಗ್ಯದ ಕುರಿತು ಜಾಗೃತಿ ಮೂಡಿಸುವುದು ಹಾಗೂ ಅಗತ್ಯ ವೈದ್ಯಕೀಯ ನೆರವು ಒದಗಿಸುವ ಉದ್ದೇಶದಿಂದ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದು ಶಿವಕುಮಾರಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶಿಬಿರಕ್ಕೆ ಮುಖ್ಯ ಅತಿಥಿಗಳಾಗಿ ಶಾಸಕ ಗಾಲಿ ಜನಾರ್ಧನರೆಡ್ಡಿ, ಮಾಜಿ ಶಾಸಕ ಪರಣ್ಣ ಮುನವಳ್ಳಿ, ಮಾಜಿ ಸಚಿವ ಇಕ್ಬಾಲ್ ಅನ್ಸಾರಿ, ಮಾಜಿ ವಿಧಾನ ಪರಿಷತ್ ಸದಸ್ಯ ಹೆಚ್.ಆರ್. ಶ್ರೀನಾಥ್, ವಾಣಿಜ್ಯೋದ್ಯಮಿ ಕಳಕನಗೌಡ ಪಾಟೀಲ್, ಶಿಕ್ಷಣಪ್ರೇಮಿ ಎನ್. ಸೂರಿಬಾಬು ಹಾಗೂ ಎಸ್.ವಿ. ಸವಡಿ ಆಸ್ಪತ್ರೆಯ ವೈದ್ಯ ಡಾ. ಎಸ್.ವಿ. ಸವಡಿ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಿಂದ ಕಟ್ಟಡ ಕಾರ್ಮಿಕ ಸಂಘಟನೆಗಳ ಮುಖಂಡರು ಭಾಗವಹಿಸಲಿದ್ದಾರೆ.
ಕಟ್ಟಡ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ ಶಿಬಿರದಲ್ಲಿ ಪಾಲ್ಗೊಂಡು ಉಚಿತ ಆರೋಗ್ಯ ತಪಾಸಣೆ ಹಾಗೂ ರಕ್ತದಾನ ಶಿಬಿರದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಶ್ರಮಜೀವಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸೇವಾ ಸಂಘದ ಜಿಲ್ಲಾಧ್ಯಕ್ಷ ಪಂಪಾಪತಿ ಇಂಗಳಗಿ ಮನವಿ ಮಾಡಿದ್ದಾರೆ.

Total Views: 0
ಜಾಹೀರಾತು
Share This Article
Leave a Comment