ಕುಷ್ಟಗಿ: ಉಚಿತ ನಾಟಿ ಕೋಳಿಮರಿ ವಿತರಣೆಗೆ ಗ್ರಾಮೀಣ ರೈತ ಮಹಿಳೆಯರಿಂದ ಅರ್ಜಿ ಆಹ್ವಾನ

H.Mallikarjun
H.Mallikarjun - Kalyanasiri
1 Min Read
ಜಾಹೀರಾತು
ಜಾಹೀರಾತು
Kushtagi: Applications invited from rural farm women for the distribution of free indigenous chicks.

ಕುಷ್ಟಗಿ: ಉಚಿತ ನಾಟಿ ಕೋಳಿಮರಿ ವಿತರಣೆಗೆ ಗ್ರಾಮೀಣ ರೈತ ಮಹಿಳೆಯರಿಂದ ಅರ್ಜಿ ಆಹ್ವಾನ

ಜಾಹೀರಾತು
ಕೊಪ್ಪಳ, ಅಕ್ಟೋಬರ್ 30: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ ವತಿಯಿಂದ 2026-27 ನೇ ಸಾಲಿನಲ್ಲಿ ನಾಟಿ ಕೋಳಿಮರಿಗಳನ್ನು ಉತ್ಪಾದಿಸಿ ಗ್ರಾಮೀಣ ಭಾಗದ ಅರ್ಹ ರೈತ ಮಹಿಳೆಯರಿಗೆ ಐದು ವಾರದ 20 ನಾಟಿ ಕೋಳಿಮರಿಗಳನ್ನು ಉಚಿತವಾಗಿ ವಿತರಿಸಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಈ ಯೋಜನೆಯಡಿ ಆಯ್ಕೆಯಾದ ಪ್ರತಿ ಫಲಾನುಭವಿಗಳಿಗೆ 5 ವಾರದ 20 ನಾಟಿ ಕೋಳಿಮರಿಗಳನ್ನು ಉಚಿತವಾಗಿ ವಿತರಣೆ ಮಾಡಲಾಗುವುದು.
ಅರ್ಜಿ ಸಲ್ಲಿಸುವ ಫಲಾನುಭವಿಯು ಗ್ರಾಮೀಣ ಭಾಗದ ರೈತ ಮಹಿಳೆಯಾಗಿರಬೇಕು. ಜಾತಿ ಪ್ರಮಾಣ ಪತ್ರ ಹೊಂದಿರಬೇಕು. ಅಂಗವಿಕಲರಾಗಿದ್ದಲ್ಲಿ ಪ್ರಮಾಣ ಪತ್ರ ಹೊಂದಿರಬೇಕು. ಫ್ರೂಟ್ಸ್ ಐಡಿ ಅನ್ನು ಕಡ್ಡಾಯವಾಗಿ ಹೊಂದಿರಬೇಕು. ಆಧಾರ್ ಕಾರ್ಡ್ ಹಾಗೂ ಬಿ.ಪಿ.ಎಲ್ ಕಾರ್ಡ್ ಹೊಂದಿರಬೇಕು.
ಅರ್ಜಿ ಸಲ್ಲಿಸಲು ನವೆಂಬರ್ 30 ಕೊನೆಯ ದಿನವಾಗಿದ್ದು, ಹೆಚ್ಚಿನ ಮಾಹಿತಿಗಾಗಿ ತಾಲ್ಲೂಕು ಮುಖ್ಯ ಪಶುವೈದ್ಯಾಧಿಕಾರಿಗಳು(ಆಡಳಿತ), ಪಶು ಆಸ್ಪತ್ರೆ, ಕುಷ್ಟಗಿ ಕಛೇರಿಗೆ ಸಂರ್ಪಕಿಸಬೇಕು ಮತ್ತು ಕುಷ್ಟಗಿ ತಾಲ್ಲೂಕಿನ ರೈತ ಮಹಿಳೆಯರು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕೆಂದು ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಮುಖ್ಯ ಪಶು ವೈದ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Total Views: 0
ಜಾಹೀರಾತು
Share This Article
Leave a Comment