ಪುನೀತ್ ರಾಜಕುಮಾರ್ ಐದನೇ ಪುಣ್ಯಸ್ಮರಣೆ: ನ.1ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರ

H.Mallikarjun
H.Mallikarjun - Kalyanasiri
1 Min Read
ಜಾಹೀರಾತು
ಜಾಹೀರಾತು

ಪುನೀತ್ ರಾಜಕುಮಾರ್ ಐದನೇ ಪುಣ್ಯಸ್ಮರಣೆ: ನ.1ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರ

ಜಾಹೀರಾತು

ರಾಜ್ಯೋತ್ಸವದ ಸಂಭ್ರಮದೊಂದಿಗೆ ಆರೋಗ್ಯ ಸೇವೆಗೆ ಮುಂದಾದ ಅಭಿಮಾನಿಗಳು: ಪಂಪಾಪತಿ ಇಂಗಳಗಿ

Puneeth Rajkumar’s 5th Death Anniversary: Free Health Check-up Camp on November 1st

ಗಂಗಾವತಿ: ಕನ್ನಡ ಚಿತ್ರರಂಗದ ಧ್ರುವತಾರೆ, ಕರ್ನಾಟಕ ರತ್ನ ಡಾ. ಪುನೀತ್ ರಾಜಕುಮಾರ್ ಅವರ ಐದನೇ ಪುಣ್ಯಸ್ಮರಣೆ ಅಂಗವಾಗಿ ನವೆಂಬರ್ 1ರಂದು ಕರ್ನಾಟಕ ರಾಜ್ಯೋತ್ಸವದ ಶುಭದಿನದಂದು ನಗರದ ಡಾ. ಈಶ್ವರ ಸವಡಿ ಅವರ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ ಎಂದು ವಿಐಪಿ ಮೆಲೋಡಿ ಮಾಲೀಕರಾದ ಪಂಪಾಪತಿ ಇಂಗಳಗಿ ತಿಳಿಸಿದರು.
ನಗರಸಭೆ ವ್ಯಾಪ್ತಿಯ ಉಪ್ಪಾರ ಓಣಿಯಲ್ಲಿ ಗುರುವಾರ ಯುವಕರ ಕಣ್ಮಣಿ ಡಾ. ಪುನೀತ್ ರಾಜಕುಮಾರ್ ಅವರ ಐದನೇ ಪುಣ್ಯಸ್ಮರಣೆ ಪ್ರಯುಕ್ತ ಆಯೋಜಿಸಿದ್ದ ರಸಮಂಜರಿ ಹಾಗೂ ನೃತ್ಯ ಸಾಂಸ್ಕೃತಿಕ ಕಾರ್ಯಕ್ರಮವನ್ನು ಉದ್ದೇಶಿಸಿ ಅವರು ಮಾತನಾಡಿದರು.
‘ಜೊತೆಗಿರದ ಜೀವ ಎಂದೆಂದಿಗೂ ಜೀವಂತ’ ಎಂಬ ಮಾತಿನಂತೆ ಪುನೀತ್ ರಾಜಕುಮಾರ್ ಅವರ ಅಭಿನಯ, ಸರಳ ವ್ಯಕ್ತಿತ್ವ ಹಾಗೂ ನಿಸ್ವಾರ್ಥ ಸೇವಾ ಮನೋಭಾವನೆ ಜನಮಾನಸದಲ್ಲಿ ಶಾಶ್ವತವಾಗಿ ಉಳಿದಿದೆ. ಅವರ ಸಾಮಾಜಿಕ ಕಳಕಳಿ ಮತ್ತು ಮಾನವೀಯ ಗುಣಗಳು ಇಂದಿನ ಯುವಜನಾಂಗಕ್ಕೆ ಸದಾ ಪ್ರೇರಣೆಯಾಗಿವೆ. ಅವರ ಸ್ಮರಣೆಯನ್ನು ಅರ್ಥಪೂರ್ಣಗೊಳಿಸುವ ಉದ್ದೇಶದಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಕೊಟ್ರೇಶ್ ಗುರೂಜಿ ಅವರು ಡಾ. ಪುನೀತ್ ರಾಜಕುಮಾರ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು. ವೇದಿಕೆಯಲ್ಲಿದ್ದ ಗಣ್ಯರು ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಿದರು.
ನಂತರ ನಡೆದ ರಸಮಂಜರಿ ಕಾರ್ಯಕ್ರಮ ಹಾಗೂ ಮಕ್ಕಳಿಂದ ಪ್ರದರ್ಶನಗೊಂಡ ವಿವಿಧ ನೃತ್ಯ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ಪ್ರೇಕ್ಷಕರ ಗಮನ ಸೆಳೆದವು.
ಕಾರ್ಯಕ್ರಮದಲ್ಲಿ ವಾರ್ಡ್‌ನ ಮುಖಂಡರು, ಕಲ್ಯಾಣ ಕರ್ನಾಟಕ ಕಟ್ಟಡ ಕಾರ್ಮಿಕ ಸಂಘದ ರಾಜ್ಯಾಧ್ಯಕ್ಷ ಶಿವಕುಮಾರ್ ಗೌಡ, ಮಲ್ಲಯ್ಯ, ಮುಕ್ಕಣ್ಣ ಮಾನ್ಹಳ್ಳಿ, ಮಾಣಿಕಪ್ಪ, ರಾಜಪ್ಪ ಹುಲಿಗಿ, ಪುರುಷೋತ್ತಮ ಇಂಗಳಗಿ, ರಮೇಶ್, ಮಂಜುನಾಥ್, ಶ್ರೀಕಾಂತ್, ನಾಗರಾಜ್, ಸಿದ್ದರಾಮಯ್ಯ ಗೌಳಿ, ಮಂಜುನಾಥ್, ನಾಗೇಶ್, ವೀರೇಶ್, ಚಂದ್ರು ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Total Views: 0
ಜಾಹೀರಾತು
Share This Article
Leave a Comment