ಬೆಟಗೇರಿ ಪ್ರಾ.ಆ.ಕೇಂದ್ರದಲ್ಲಿ ವಿಶ್ವ ಪಾರ್ಶ್ವವಾಯು ದಿನಾಚರಣೆ

H.Mallikarjun
H.Mallikarjun - Kalyanasiri
2 Min Read
ಜಾಹೀರಾತು
ಜಾಹೀರಾತು
World Stroke Day Observed at Betageri Primary Health Centre

ಬೆಟಗೇರಿ ಪ್ರಾ.ಆ.ಕೇಂದ್ರದಲ್ಲಿ ವಿಶ್ವ ಪಾರ್ಶ್ವವಾಯು ದಿನಾಚರಣೆ

ಜಾಹೀರಾತು

ಕೊಪ್ಪಳ, ಅಕ್ಟೋಬರ್ 30, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಛೇರಿ, ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿಗಳ ಕಾರ್ಯಾಲಯ ಹಾಗೂ ಜಿಲ್ಲಾ ಬೋಧಕ ಆಸ್ಪತ್ರೆ ಇವರ ಸಂಯುಕ್ತ ಆಶ್ರಯದಲ್ಲಿ ಕರ್ನಾಟಕ ಮೆದುಳು ಆರೋಗ್ಯ ಉಪಕ್ರಮ (ಕಭೀ) ಕಾರ್ಯಕ್ರಮದ ಅಂಗವಾಗಿ ಗುರುವಾರದಂದು ಪ್ರಾಥಮಿಕ ಆರೋಗ್ಯ ಕೇಂದ್ರ ಬೆಟಗೇರಿಯಲ್ಲಿ “ವಿಶ್ವ ಪಾರ್ಶ್ವವಾಯು ದಿನಾಚರಣೆ” ಯನ್ನು “ಪ್ರತಿ ನಿಮಿಷವೂ ಮುಖ್ಯ-ಪಾರ್ಶ್ವವಾಯುವನ್ನು ಗುರುತಿಸಿ, ತಕ್ಷಣ ಕ್ರಮ ಕೈಗೊಳ್ಳಿ, ಜೀವಗಳನ್ನು ಉಳಿಸಿ” ಎಂಬ ಘೋಷವಾಕ್ಯದೊಂದಿಗೆ ಪಾರ್ಶ್ವವಾಯು ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಹಮ್ಮಿಕೊಳ್ಳಲಾಗಿತ್ತು.
ಬೇಟಗೇರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳಾದ ಡಾ. ಇರ್ಫಾನಾ ಅಂಜುಮ್ ಅವರು ಮಾತನಾಡಿ, ಪಾರ್ಶ್ವವಾಯು ಒಂದು ನರವೈಜ್ಞಾನಿಕ ಕಾಯಿಲೆಯಾಗಿದೆ, ಇದಕ್ಕೆ ಪ್ರಾರಂಭದಲ್ಲಿ ಲಕ್ಷಣಗಳನ್ನು ಗುರುತಿಸಿ ಕಂಡುಹಿಡಿಯಬೇಕು. ಪಾರ್ಶ್ವವಾಯುವಿನ ಕಾರಣಗಳು, ಚಿಹ್ನೆಗಳು ಮತ್ತು ಲಕ್ಷಣಗಳು, ಆರಂಭಿಕ ಗುರುತಿಸುವಿಕೆಯ ಪ್ರಾಮುಖ್ಯತೆ ಮತ್ತು ಕಭೀ ಕಾರ್ಯಕ್ರಮದ ಅಡಿಯಲ್ಲಿ ಪಾರ್ಶ್ವವಾಯು ರೋಗಿಗಳಿಗೆ ಫಿಜಿಯೋಥೆರಪಿ ಚಿಕ್ಸಿತೆಯನ್ನು ನೀಡಲಾಗುತ್ತದೆ, ಅಂತಹ ರೋಗಿಗಳಿಗೆ ಜಿಲ್ಲಾ ಆಸ್ಪತ್ರೆಗೆ ಕಳುಹಿಸಲು ಆಶಾ ಕಾರ್ಯಕರ್ತೆಯರಿಗೆ ತಿಳಿಸಿದರು.
ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ದೇವಮ್ಮ ಅವರು ಮಾತನಾಡಿ, ವಿವಿಧ ಆರೋಗ್ಯ ಇಲಾಖೆಯ ಕಾರ್ಯಕ್ರಮಗಳ ಕುರಿತು ಮಾಹಿತಿ ನೀಡಿದರು. ನರವೈಜ್ಞಾನಿಕ ಕಾಯಿಲೆಗಳ ಆರಂಭಿಕ ಲಕ್ಷಣಗಳನ್ನು ಗುರುತಿಸುವುದು ಹಾಗೂ ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳುವುದರಿಂದ ಮೆದುಳಿಗೆ ಸಂಬAಧಿಸಿದ ಕಾಯಿಲೆಗಳ ಅಪಾಯವನ್ನು ಹೇಗೆ ಕಡಿಮೆ ಮಾಡಬಹುದು ಎಂಬುದರ ಕುರಿತು ವಿವರವಾಗಿ ತಿಳಿಸಿದರು.
ಕಭೀ ಕಾರ್ಯಕ್ರಮದ ಭೌತಚಿಕಿತ್ಸಕರಾದ ಚೈತ್ರಾ ಸರೋದೆ, ಪಾರ್ಶ್ವವಾಯುವನ್ನು ಆರಂಭಿಕ ಹಂತದಲ್ಲಿಯೇ ಗುರುತಿಸಲು ಬಳಸುವ BE FAST ವಿಧಾನ, ರೋಗಲಕ್ಷಣಗಳು ಕಾಣಿಸಿಕೊಂಡ ತಕ್ಷಣವೇ ತುರ್ತು ಚಿಕಿತ್ಸೆಗೆ ರೋಗಿಯನ್ನು ರವಾನಿಸುವ ಅಗತ್ಯತೆ ಹಾಗೂ ಪಾರ್ಶ್ವವಾಯುವಿನ ನಂತರದ ಪುನರ್ವಸತಿಯಲ್ಲಿ ಭೌತಚಿಕಿತ್ಸೆಯ ಪಾತ್ರದ ಕುರಿತು ವಿವರಿಸಿದರು. ಕಭೀ ಕಾರ್ಯಕ್ರಮದಲ್ಲಿ ನರವೈಜ್ಞಾನಿಕ ಕಾಯಿಲೆಗಳಾದ ತಲೆನೋವು, ಪಾರ್ಶ್ವವಾಯು, ಅಪಸ್ಮಾರ ಹಾಗೂ ಡಿಮಾನ್ಷಿಯ ಅಂತಹ ಕಾಯಿಲೆಗಳಿಗೆ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ನೀಡಲಾಗುತ್ತದೆ. ಹಾಗೂ ನರವೈಜ್ಞಾನಿಕ ಕಾಯಿಲೆ ಇರುವಂತಹ ವ್ಯಕ್ತಿಗೆ ಬೆಂಗಳೂರಿನ ನಿಮ್ಹಾನ್ಸ್ ಇಂದ ಟೆಲಿ ನ್ಯೂರೋಲಾಜಿ ಎಂಬ ಸೇವೆಯನ್ನು ನೀಡಲಾಗುತ್ತದೆ ಅದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ತಿಳಿಸಿದರು ಹಾಗೂ ಫಿಸಿಯೋಥೆರಪಿ ಸೇವೆಯು ರೋಗಿಗಳ ಪುನರ್ವಸತಿಯಲ್ಲಿ ಅವುಗಳ ಮಹತ್ವವನ್ನು ವಿವರಿಸಿದರು.
ಕರ್ನಾಟಕ ಮೆದುಳಿನ ಆರೋಗ್ಯ ಉಪಕ್ರಮದ ಜಿಲ್ಲಾ ಸಂಯೋಜಕರಾದ ತೇಜಸ್ವಿನಿ, ಕಾರ್ಯಕ್ರಮದಲ್ಲಿ ತಲೆನೋವು, ಅಪಸ್ಮಾರ, ಮರೆವಿನ ಕಾಯಿಲೆ ಹಾಗೂ ಪಾರ್ಶ್ವವಾಯು ಎಂಬ ನಾಲ್ಕು ಪ್ರಮುಖ ನರವೈಜ್ಞಾನಿಕ ಕಾಯಿಲೆಗಳ ಬಗ್ಗೆ ಮಾಹಿತಿ ಹಾಗೂ ಉದ್ದೇಶಗಳು, ಕಾರ್ಯಚಟುವಟಿಕೆಗಳು ಹಾಗೂ ಲಭ್ಯವಿರುವ ಸೇವೆಗಳ ಕುರಿತು ಪರಿಚಯಿಸಿದರು.
ಕಾರ್ಯಕ್ರಮದಲ್ಲಿ ಸಮುದಾಯ ಆರೋಗ್ಯ ಅಧಿಕಾರಿಗಳು, ಆಶಾ ಕಾರ್ಯಕರ್ತೆಯರು, ಶುಶ್ರೂಷಾಧಿಕಾರಿಗಳು, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿಗಳು, ಆಸ್ಪತ್ರೆಯ ಸಿಬ್ಬಂದಿ ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

Total Views: 0
ಜಾಹೀರಾತು
Share This Article
Leave a Comment