ನವೆಂಬರ್ 1 ರಂದು ಕೊಪ್ಪಳದಲ್ಲಿ 71ನೇ ಕರ್ನಾಟಕ ರಾಜ್ಯೋತ್ಸವ

H.Mallikarjun
H.Mallikarjun - Kalyanasiri
1 Min Read
ಜಾಹೀರಾತು
ಜಾಹೀರಾತು
71st Karnataka Rajyotsava in Koppal on November 1st

ನವೆಂಬರ್ 1 ರಂದು ಕೊಪ್ಪಳದಲ್ಲಿ 71ನೇ ಕರ್ನಾಟಕ ರಾಜ್ಯೋತ್ಸವ

ಜಾಹೀರಾತು
ಕೊಪ್ಪಳ, ಅಕ್ಟೋಬರ್ 31, (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲಾಡಳಿತದ ವತಿಯಿಂದ 71ನೇ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮವನ್ನು ನವೆಂಬರ್ 1 ರಂದು ಬೆಳಿಗ್ಗೆ 9 ಗಂಟೆಗೆ ನಗರದ ಗದಗ ರಸ್ತೆಯ ಜಿಲ್ಲಾ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ತಂಗಡಗಿ ಶಿವರಾಜ ಸಂಗಪ್ಪ ಅವರು ರಾಷ್ಟç ಧ್ವಜಾರೋಹಣ ನೆರವೇರಿಸುವರು. ಉನ್ನತ ಶಿಕ್ಷಣ ಸಚಿವರಾದ ಬಸವರಾಜ ರಾಯರಡ್ಡಿ ಹಾಗೂ ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ಮುಖ್ಯ ಸಚೇತಕರು ಹಾಗೂ ಕುಷ್ಟಗಿ ಶಾಸಕರಾದ ದೊಡ್ಡನಗೌಡ ಹನುಮಗೌಡ ಪಾಟೀಲ ಅವರು ಕಾರ್ಯಕ್ರಮದ ಘನ ಉಪಸ್ಥಿತಿ ವಹಿಸುವರು. ಕೊಪ್ಪಳ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ ಅವರು ಸಮಾರಂಭದ ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಕೊಪ್ಪಳ ಲೋಕಸಭಾ ಕ್ಷೇತ್ರದ ಸಂಸದರಾದ ಕೆ.ರಾಜಶೇಖರ ಬಸವರಾಜ ಹಿಟ್ನಾಳ, ಗಂಗಾವತಿ ಶಾಸಕರಾದ ಗಾಲಿ ಜನಾರ್ಧನರೆಡ್ಡಿ, ವಿಧಾನ ಪರಿಷತ್ ಸದಸ್ಯರುಗಳಾದ ಶಶೀಲ್ ಜಿ.ನಮೋಶಿ, ಡಾ.ಚಂದ್ರಶೇಖರ್ ಬಿ.ಪಾಟೀಲ, ಶರಣಗೌಡ ಅನ್ನದಾನಗೌಡ ಪಾಟೀಲ ಬಯ್ಯಾಪೂರ ಹಾಗೂ ಹೇಮಲತಾ ನಾಯಕ, ಮುನಿರಾಬಾದ್ ತುಂಗಭದ್ರಾ ಯೋಜನೆ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ (ಕಾಡಾ) ಅಧ್ಯಕ್ಷರಾದ ಹಸನ್ ಸಾಬ್ ನಬೀಸಾಬ್ ದೋಟಿಹಾಳ, ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಪ್ರಸನ್ನ ಗಡಾದ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ರೆಡ್ಡಿ ಶ್ರೀನಿವಾಸ್ ಅವರು ಪಾಲ್ಗೊಳ್ಳುವರು.
ವಿಶೇಷ ಆಹ್ವಾನಿತರಾಗಿ ಸಮಾಜ ಕಲ್ಯಾಣ ಇಲಾಖೆ ಸರ್ಕಾರದ ಕಾರ್ಯದರ್ಶಿಗಳು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಕೆ.ಪಿ.ಮೋಹನ್ ರಾಜ್ ಅವರು ಆಗಮಿಸುವರು. ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಗಳಾದ ಡಾ. ಸುರೇಶ ಬಿ. ಇಟ್ನಾಳ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ವರ್ಣಿತ್ ನೇಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಸಾಹಿಲ್ ಬಾಗ್ಲಾ ಅವರು ಉಪಸ್ಥಿತರಿರುವರು.

Total Views: 0
ಜಾಹೀರಾತು
Share This Article
Leave a Comment