

Observance of National Unity Day: Officials take the Unity Pledge at the Koppal District Administration Building.

ರಾಷ್ಟ್ರೀಯ ಏಕತಾ ದಿನ ಆಚರಣೆ: ಕೊಪ್ಪಳ ಜಿಲ್ಲಾಡಳಿತ ಭವನದಲ್ಲಿ ಅಧಿಕಾರಿಗಳಿಂದ ಏಕತಾ ಪ್ರತಿಜ್ಞೆ ಸ್ವೀಕಾರ
ಸರ್ದಾರ್ ವಲ್ಲಭಭಾಯಿ ಪಟೇಲ್ ಜನ್ಮದಿನದ ಅಂಗವಾಗಿ ಪ್ರತಿಜ್ಞಾ ವಿಧಿ ಕಾರ್ಯಕ್ರಮ
ಕೊಪ್ಪಳ, ಅ.31: ಭಾರತದ ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮದಿನದ ಅಂಗವಾಗಿ ರಾಷ್ಟ್ರೀಯ ಏಕತಾ ದಿನವನ್ನು ಕೊಪ್ಪಳ ಜಿಲ್ಲಾಡಳಿತ ಭವನದಲ್ಲಿ ಶನಿವಾರ ಆಚರಿಸಲಾಯಿತು.
ಸರ್ಕಾರದ ನಿರ್ದೇಶನದಂತೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಅವರ ನೇತೃತ್ವದಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿ ರಾಷ್ಟ್ರೀಯ ಏಕತಾ ಪ್ರತಿಜ್ಞೆ ಸ್ವೀಕರಿಸಿದರು.
ಜಿಲ್ಲಾಧಿಕಾರಿ ಕಚೇರಿಯ ಶಿರಸ್ತೆದಾರರಾದ ಸುಜಾತಾ ಮಾಗಿ ಅವರು ಪ್ರತಿಜ್ಞಾ ವಿಧಿ ಬೋಧಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಟಿ. ಕೃಷ್ಣಮೂರ್ತಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಂಜುನಾಥ ಗುಂಡೂರು, ಜಿಲ್ಲಾ ಆಯುಷ್ ಅಧಿಕಾರಿ ಡಾ. ಪಿ.ಬಿ. ಹಿರೇಗೌಡ್ರ, ಜಿಲ್ಲಾಧಿಕಾರಿಗಳ ಆಪ್ತ ಸಹಾಯಕಿ ಜಯಲಕ್ಷ್ಮಿ ನವಲಿ, ಚುನಾವಣಾ ತಹಶೀಲ್ದಾರ ರವಿಕುಮಾರ್ ವಸ್ತ್ರದ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.



