ಹೊಸಕೇರಾ ಡಗ್ಗಿ ಗ್ರಾಮದಲ್ಲಿ ಅದ್ದೂರಿಯಾಗಿ ಕರ್ನಾಟಕ ರಾಜ್ಯೋತ್ಸವ ಆಚರಣೆ

H.Mallikarjun
H.Mallikarjun - Kalyanasiri
2 Min Read
ಜಾಹೀರಾತು
ಜಾಹೀರಾತು
Grand celebration of Karnataka Rajyotsava in Hosakera Duggi village

ಹೊಸಕೇರಾ ಡಗ್ಗಿ ಗ್ರಾಮದಲ್ಲಿ ಅದ್ದೂರಿಯಾಗಿ ಕರ್ನಾಟಕ ರಾಜ್ಯೋತ್ಸವ ಆಚರಣೆ

ಜಾಹೀರಾತು

ಕನ್ನಡ ನೆಲ, ಜಲ ಹಾಗೂ ಭಾಷೆಯ ರಕ್ಷಣೆಗೆ ಧೀರ ಕನ್ನಡಿಗರ ರಕ್ಷಣಾ ವೇದಿಕೆ ಸದಾ ಸಿದ್ಧ: ರವಿಕುಮಾರ್ ಅಂಬಿಗ

ಗಂಗಾವತಿ: ತಾಲೂಕಿನ ಹೊಸಕೇರಾ ಡಗ್ಗಿ ಗ್ರಾಮದಲ್ಲಿ ಧೀರ ಕನ್ನಡಿಗರ ರಕ್ಷಣಾ ವೇದಿಕೆಯ ತಾಲೂಕು ಅಧ್ಯಕ್ಷ ರವಿಕುಮಾರ್ ಅಂಬಿಗ ಅವರ ನೇತೃತ್ವದಲ್ಲಿ ಕರ್ನಾಟಕ ರಾಜ್ಯೋತ್ಸವವನ್ನು ಸಂಭ್ರಮ ಹಾಗೂ ಅದ್ದೂರಿಯಾಗಿ ಆಚರಿಸಲಾಯಿತು.
ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಕನ್ನಡ ಧ್ವಜಾರೋಹಣ ನೆರವೇರಿಸಿ, ಕನ್ನಡ ನಾಡು-ನುಡಿ, ನೆಲ-ಜಲ ಹಾಗೂ ಕನ್ನಡ ಸಂಸ್ಕೃತಿಯ ಮಹತ್ವವನ್ನು ಸಾರಲಾಯಿತು. ಈ ಸಂದರ್ಭದಲ್ಲಿ ಕನ್ನಡಾಭಿಮಾನಿಗಳು ಹಾಗೂ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ರಾಜ್ಯೋತ್ಸವದ ಸಂಭ್ರಮವನ್ನು ಹೆಚ್ಚಿಸಿದರು.
ಕಾರ್ಯಕ್ರಮದಲ್ಲಿ ಮಾತನಾಡಿದ ಧೀರ ಕನ್ನಡಿಗರ ರಕ್ಷಣಾ ವೇದಿಕೆಯ ತಾಲೂಕು ಅಧ್ಯಕ್ಷ ರವಿಕುಮಾರ್ ಅಂಬಿಗ, ಕನ್ನಡ ನಾಡು, ನುಡಿ, ನೆಲ ಹಾಗೂ ಜಲದ ರಕ್ಷಣೆ ಪ್ರತಿಯೊಬ್ಬ ಕನ್ನಡಿಗನ ಜವಾಬ್ದಾರಿಯಾಗಿದೆ. ಕನ್ನಡ ಭಾಷೆ ಮತ್ತು ಸಂಸ್ಕೃತಿಯ ಉಳಿವಿಗಾಗಿ ಪ್ರತಿಯೊಬ್ಬರೂ ಜಾಗೃತರಾಗಬೇಕು ಎಂದು ಹೇಳಿದರು.
ಧೀರ ಕನ್ನಡಿಗರ ರಕ್ಷಣಾ ವೇದಿಕೆಯು ಕನ್ನಡ ಭಾಷೆ, ನೆಲ ಹಾಗೂ ಜಲದ ಸಂರಕ್ಷಣೆಗಾಗಿ ನಿರಂತರವಾಗಿ ಹೋರಾಟ ನಡೆಸುತ್ತಾ ಬಂದಿದೆ. ಕನ್ನಡಿಗರ ಹಕ್ಕುಗಳ ರಕ್ಷಣೆ ಹಾಗೂ ಕನ್ನಡ ನಾಡಿನ ಗೌರವ ಕಾಪಾಡುವ ನಿಟ್ಟಿನಲ್ಲಿ ಸಂಘಟನೆ ಸದಾ ಮುಂಚೂಣಿಯಲ್ಲಿ ನಿಂತು ಹೋರಾಟ ನಡೆಸಲಿದೆ. ಕನ್ನಡ ಭಾಷೆಯ ಬಳಕೆಯನ್ನು ಹೆಚ್ಚಿಸುವ ಜೊತೆಗೆ ಕನ್ನಡದ ಸಂಸ್ಕೃತಿ, ಪರಂಪರೆ ಮತ್ತು ಅಸ್ಮಿತೆಯನ್ನು ಮುಂದಿನ ಪೀಳಿಗೆಗೆ ಪರಿಚಯಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ತಿಳಿಸಿದರು.
ಕನ್ನಡಿಗರು ತಮ್ಮ ದೈನಂದಿನ ಬದುಕಿನಲ್ಲಿ ಕನ್ನಡ ಭಾಷೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಕನ್ನಡ ನಾಡಿನ ನೆಲ, ಜಲ ಮತ್ತು ಸಂಪನ್ಮೂಲಗಳ ರಕ್ಷಣೆಗೆ ಒಗ್ಗಟ್ಟಿನಿಂದ ಧ್ವನಿ ಎತ್ತಬೇಕು.

ಕನ್ನಡದ ವಿಚಾರದಲ್ಲಿ ಯಾವುದೇ ರೀತಿಯ ನಿರ್ಲಕ್ಷ್ಯ ತೋರದೆ, ಕನ್ನಡದ ಗೌರವವನ್ನು ಎತ್ತಿಹಿಡಿಯಲು ಎಲ್ಲರೂ ಕೈಜೋಡಿಸಬೇಕು ಎಂದು ರವಿಕುಮಾರ್ ಅಂಬಿಗ ಕರೆ ನೀಡಿದರು.

ಈ ಸಂದರ್ಭದಲ್ಲಿ ಕೃಷಿ ಪ್ರಾಥಮಿಕ ಪತ್ತಿನ ಸಹಕಾರಿ ಸಂಘದ ಕೆ. ಹನುಮೇಶಪ್ಪ, ಎಸ್‌ಡಿಎಂಸಿ ಅಧ್ಯಕ್ಷ ಭೀಮಣ್ಣ, ಮಾಜಿ ಎಸ್‌ಡಿಎಂಸಿ ಅಧ್ಯಕ್ಷ ಪಂಪಾಪತಿ, ಗ್ರಾಮ ಪ್ರಮುಖರಾದ ಕೆ. ವೆಂಕಟೇಶಪ್ಪ, ಹುಲಗಪ್ಪ, ಗ್ರಾಮ ಘಟಕದ ಪದಾಧಿಕಾರಿಗಳಾದ ಸೋಮನಾಥ್, ಹನುಮಂತಪ್ಪ, ವೀರೇಶ್, ನಾಗರಾಜ್, ನಿಂಗರಾಜ್, ಮಲ್ಲಿಕಾರ್ಜುನಗೌಡ, ಯಮನೂರ, ದೊಡ್ಡ ಬಸವ ಸೇರಿದಂತೆ ಗ್ರಾಮದ ಮುಖಂಡರು, ಸಂಘಟನೆಯ ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Total Views: 0
ಜಾಹೀರಾತು
Share This Article
Leave a Comment