ಕಾಲೇಜು ವಿದ್ಯಾರ್ಥಿಗಳ ಸಂಕಷ್ಟಕ್ಕೆ ಸ್ಪಂದಿಸಿ: ಬೂದುಗುಂಪಾಗೆ ಸಮರ್ಪಕ ಬಸ್ ಸೌಲಭ್ಯ ಕಲ್ಪಿಸಲು ಮನವಿ

H.Mallikarjun
H.Mallikarjun - Kalyanasiri
1 Min Read
ಜಾಹೀರಾತು
ಜಾಹೀರಾತು


Address the Plight of College Students: Appeal to Provide Adequate Bus Facilities to Budugumpa

ಜಾಹೀರಾತು

ಕಾಲೇಜು ವಿದ್ಯಾರ್ಥಿಗಳ ಸಂಕಷ್ಟಕ್ಕೆ ಸ್ಪಂದಿಸಿ: ಬೂದುಗುಂಪಾಗೆ ಸಮರ್ಪಕ ಬಸ್ ಸೌಲಭ್ಯ ಕಲ್ಪಿಸಲು ಮನವಿ

ಕೊಪ್ಪಳ: ತಾಲೂಕಿನ ಬೂದುಗುಂಪಾ ಗ್ರಾಮದ ಕಾಲೇಜು ವಿದ್ಯಾರ್ಥಿಗಳು ಪ್ರತಿನಿತ್ಯ ಕಾಲೇಜಿಗೆ ತೆರಳಲು ಸೂಕ್ತ ಸಾರಿಗೆ ಸೌಲಭ್ಯವಿಲ್ಲದೆ ತೀವ್ರ ತೊಂದರೆ ಅನುಭವಿಸುತ್ತಿದ್ದು, ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯದ ದೃಷ್ಟಿಯಿಂದ ಗ್ರಾಮಕ್ಕೆ ಸಮರ್ಪಕ ಬಸ್ ವ್ಯವಸ್ಥೆ ಕಲ್ಪಿಸಬೇಕೆಂದು ಆಗ್ರಹಿಸಿ ಅಪರ ಜಿಲ್ಲಾಧಿಕಾರಿಗಳು ಹಾಗೂ ಡಿಡಿಪಿಐ ಅವರಿಗೆ ವಿದ್ಯಾರ್ಥಿಗಳ ಪರವಾಗಿ ಮನವಿ ಸಲ್ಲಿಸಲಾಯಿತು.

ಬೂದುಗುಂಪಾ ಗ್ರಾಮದಿಂದ ಪ್ರತಿನಿತ್ಯ ಹಲವಾರು ವಿದ್ಯಾರ್ಥಿಗಳು ಕೊಪ್ಪಳ ಸೇರಿದಂತೆ ವಿವಿಧೆಡೆ ಕಾಲೇಜುಗಳಿಗೆ ತೆರಳುತ್ತಿದ್ದಾರೆ. ಆದರೆ ಸಮಯಕ್ಕೆ ಸರಿಯಾಗಿ ಬಸ್ ಸೌಲಭ್ಯ ಇಲ್ಲದ ಕಾರಣ ವಿದ್ಯಾರ್ಥಿಗಳು ಕಾಲೇಜಿಗೆ ತೆರಳಲು ಹಾಗೂ ಮರಳಿ ಗ್ರಾಮಕ್ಕೆ ಬರಲು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ವಿಶೇಷವಾಗಿ ವಿದ್ಯಾರ್ಥಿನಿಯರು ಸಾರಿಗೆ ಕೊರತೆಯಿಂದ ಹೆಚ್ಚಿನ ಸಮಸ್ಯೆ ಎದುರಿಸುತ್ತಿದ್ದಾರೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಸಮರ್ಪಕ ಬಸ್ ಸೌಲಭ್ಯ ಇಲ್ಲದಿರುವುದರಿಂದ ವಿದ್ಯಾರ್ಥಿಗಳ ತರಗತಿಗಳಿಗೆ ಹಾಜರಾಗುವುದಕ್ಕೂ ಅಡಚಣೆಯಾಗುತ್ತಿದ್ದು, ಅವರ ಶಿಕ್ಷಣದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ. ಆದ್ದರಿಂದ ವಿದ್ಯಾರ್ಥಿಗಳ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಬೂದುಗುಂಪಾ ಗ್ರಾಮಕ್ಕೆ ಅಗತ್ಯವಿರುವ ಸಮಯದಲ್ಲಿ ಬಸ್ ಸಂಚಾರ ಕಲ್ಪಿಸಬೇಕು ಎಂದು ಅಧಿಕಾರಿಗಳಿಗೆ ಮನವಿ ಮಾಡಲಾಯಿತು.

ವಿದ್ಯಾರ್ಥಿಗಳ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಅಧಿಕಾರಿಗಳು, ಇನ್ನೆರಡು-ಮೂರು ದಿನಗಳಲ್ಲಿ ಬಸ್ ವ್ಯವಸ್ಥೆ ಕಲ್ಪಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ವಿದ್ಯಾರ್ಥಿನಿಯರಾದ ದೀಪಿಕಾ, ಕಾವೇರಿ, ಕಾವ್ಯ, ಭುವನ, ಗೌತಮಿ, ಶಶಿಕಲಾ, ಯುವ ಸಾಮಾಜಿಕ ಹೋರಾಟಗಾರ ಕಾಶಿಂ ಕೆ.ಎನ್. ನಾಗೇಶನಹಳ್ಳಿ, ಕಾನೂನು ಪದವೀಧರ ಉಮೇಶ್, ಸುಭಾನ್ ನೀರಲಾಗಿ ಸೇರಿದಂತೆ ಹಲವು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Total Views: 0
ಜಾಹೀರಾತು
Share This Article
Leave a Comment