ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ: ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

H.Mallikarjun
H.Mallikarjun - Kalyanasiri
1 Min Read
ಜಾಹೀರಾತು
ಜಾಹೀರಾತು

Department of Welfare for Backward Classes: Extension of application period for post-metric scholarships

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ: ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
–
ಕೊಪ್ಪಳ, ನವೆಂಬರ್ 03 (ಕರ್ನಾಟಕ ವಾರ್ತೆ): ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1ರ ಅಲೆಮಾರಿ ಹಾಗೂ ಅರೆಅಲೆಮಾರಿ ಜನಾಂಗದ ವಿದ್ಯಾರ್ಥಿಗಳಿಗೆ ಮೆಟ್ರಿಕ್ ನಂತರದ ಅರ್ಹತಾ ವಿದ್ಯಾರ್ಥಿವೇತನ “ಶುಲ್ಕ ವಿನಾಯಿತಿ ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ನವೆಂಬರ್ 30ರ ವರೆಗೆ ವಿಸ್ತರಿಸಲಾಗಿದೆ.
ಅರ್ಹ ಅಭ್ಯರ್ಥಿಗಳು ಆನ್‌ಲೈನ್ ವೆಬ್‌ಸೈಟ್ https://ssp.postmatric.karnataka.gov.in ಮೂಲಕ ಅರ್ಜಿ ಸಲ್ಲಿಸಬಹುದು ಹಾಗೂ ಕಾರ್ಯಕ್ರಮಗಳ ವಿವರ, ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳು ಹಾಗೂ ವಿದ್ಯಾರ್ಥಿ ವೇತನಕ್ಕೆ ಸಂಬಂಧಿಸಿದ ಸರ್ಕಾರಿ ಆದೇಶಗಳ ಬಗ್ಗೆ ಮಾಹಿತಿಗಾಗಿ ವೆಬ್‌ಸೈಟ್ https://bcwd.karnataka.gov.in ಗೆ ಭೇಟಿ ನೀಡಬಹುದು.
 ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ದೂರವಾಣಿ ಸಂಖ್ಯೆ 8050770004 ಗೆ ಅಥವಾ ಇ-ಮೇಲ್ bcwdhelpline@gmail.com ಹಾಗೂ ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಇ-ಮೇಲ್ postmatrichelp@karnataka.gov.in ಅಥವಾ ದೂರವಾಣಿ ಸಂಖ್ಯೆ 1902 ಗೆ ಸಂಪರ್ಕಿಸಬಹುದು ಎಂದು ಕೊಪ್ಪಳ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Total Views: 0
ಜಾಹೀರಾತು
Share This Article
Leave a Comment